T20 Records: 23 ರನ್​ಗೆ ಚೀನಾ ತಂಡ ಆಲೌಟ್: 7 ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಇದ್ರಸ್

T20 Records: ಟಿ20 ಕ್ರಿಕೆಟ್​ನಲ್ಲಿ 7 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಐರ್ಲೆಂಡ್ ಬೌಲರ್ ಪೀಟರ್ ಹೆಸರಿನಲ್ಲಿತ್ತು.

T20 Records: 23 ರನ್​ಗೆ ಚೀನಾ ತಂಡ ಆಲೌಟ್: 7 ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಇದ್ರಸ್
Syazrul Idrus
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 26, 2023 | 11:05 PM

ಕೌಲಾಲಂಪುರದಲ್ಲಿ ನಡೆದ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್-B ವಿಭಾಗದ ಮೊದಲ ಪಂದ್ಯದಲ್ಲೇ ಮಲೇಷ್ಯಾ ವೇಗಿ ಸೈಝ್ರುಲ್ ಇದ್ರಸ್ (Syazrul Idrus) ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕಿ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೀನಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಚೀನಾ ತಂಡವು ಪ್ರಥಮ ವಿಕೆಟ್​ಗೆ 12 ರನ್ ಪೇರಿಸಿದ್ದ ವೇಳೆ ಸೈಝ್ರುಲ್ ಇದ್ರಸ್ ಮೊದಲ ಆಘಾತ ನೀಡಿದರು. ವೀ ಗುಲೆಯಿ (7) ರನ್ನು ಕ್ಲೀನ್ ಬೌಲ್ಡ್ ಮಾಡಿದ ಬೆನ್ನಲ್ಲೇ ವಾಂಗ್ ಲಿಯುಯಾಂಗ್ (3) ಗೂ ಪೆವಿಲಿಯನ್ ಹಾದಿ ತೋರಿಸಿದರು.

ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಝುವಾಂಗ್ ಝೆಲಿನ್ (5) ವಿಕೆಟ್​ ಪಡೆದು ಪವನ್​ದೀಪ್ ಸಿಂಗ್ 3ನೇ ಯಶಸ್ಸು ತಂದುಕೊಟ್ಟರು. 13 ರನ್​ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಚೀನಾಗೆ ಆ ಬಳಿಕ ಸೈಝ್ರುಲ್ ಇದ್ರಸ್ ಮರ್ಮಾಘಾತ ನೀಡಿದರು.

ಬ್ಯಾಕ್ ಟು ಬ್ಯಾಕ್ ನಾಲ್ವರನ್ನು ಶೂನ್ಯಕ್ಕೆ ಔಟ್ ಮಾಡಿದ ಸೈಝ್ರುಲ್ ಇದ್ರಸ್ 5 ವಿಕೆಟ್​ಗಳ ಸಾಧನೆ ಮಾಡಿದರು. ಇದರ ನಡುವೆ ಪವನ್​ದೀಪ್ ಸಿಂಗ್ ಯಿನ್ ಚೆನ್ಹಾವೊ (2) ವಿಕೆಟ್ ಪಡೆದರು.

ಇನ್ನು ಝಾವೋ ಟಿಯಾನ್ಲೆ (0) ರನ್ನು ಸೈಝ್ರುಲ್ ಇದ್ರಸ್ ಶೂನ್ಯಕ್ಕೆ ಔಟ್ ಮಾಡಿದರೆ, ಲುವೊ ಶಿಲಿನ್ (0) ರನ್ನು ವಿಜಯಿ ಉನ್ನಿ ಎಲ್​ಬಿ ಬಲೆಗೆ ಬೀಳಿಸಿದರು. ಇದರೊಂದಿಗೆ ಚೀನಾ ತಂಡವು ಕೇವಲ 23 ರನ್​ಗಳಿಗೆ ಆಲೌಟ್ ಆಯಿತು.

24 ರನ್​ಗಳ ಅತ್ಯಲ್ಪ ಗುರಿ ಪಡೆದ ಮಲೇಷ್ಯಾ ತಂಡವು 4.5 ಓವರ್​ಗಳಲ್ಲಿ 2 ವಿಕೆಟ್​ ಕಳೆದುಕೊಂಡು ಗುರಿ ಮುಟ್ಟಿತು. ಈ ಮೂಲಕ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್-B ನ ಮೊದಲ ಪಂದ್ಯದಲ್ಲಿ ಮಲೇಷ್ಯಾ ತಂಡವು ಶುಭಾರಂಭ ಮಾಡಿದೆ.

ವಿಶ್ವ ದಾಖಲೆ ಬರೆದ ಸೈಝ್ರುಲ್ ಇದ್ರಸ್:

ಈ ಪಂದ್ಯದಲ್ಲಿ ಮಲೇಷಿಯನ್ ವೇಗಿ ಸೈಝ್ರುಲ್ ಇದ್ರಸ್ ಐವರನ್ನು ಶೂನ್ಯಕ್ಕೆ ಔಟ್ ಮಾಡಿದ್ದರು. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ. ಅಂದರೆ ಇದುವರೆಗೆ ಯಾವುದೇ ಬೌಲರ್ ಐವರು ಬ್ಯಾಟರ್​ಗಳನ್ನು ಸೊನ್ನೆಗೆ ಔಟ್ ಮಾಡಿಲ್ಲ.

ಇನ್ನು ಈ ಪಂದ್ಯದಲ್ಲಿ 4 ಓವರ್​ ಬೌಲಿಂಗ್ ಮಾಡಿದ್ದ ಸೈಝ್ರುಲ್ ಇದ್ರಸ್ ಕೇವಲ 8 ರನ್ ನೀಡಿ 7 ವಿಕೆಟ್ ಪಡೆದಿದ್ದರು. ಈ ಮೂಲಕ ಟಿ20 ಕ್ರಿಕೆಟ್​ ಪಂದ್ಯವೊಂದರಲ್ಲಿ 7 ವಿಕೆಟ್​ ಪಡೆದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2021 ರಲ್ಲಿ ಐರ್ಲೆಂಡ್​ನ ಪೀಟರ್ ಅವೊ 5 ರನ್​ಗೆ 6 ವಿಕೆಟ್ ಕಬಳಿಸಿದ್ದು ಇದುವರೆಗಿನ ಅತ್ಯುತ್ತಮ ಬೌಲಿಂಗ್ ದಾಖಲೆಯಾಗಿತ್ತು. ಇದೀಗ 7 ವಿಕೆಟ್ ಉರುಳಿಸಿ ಸೈಝ್ರುಲ್ ಇದ್ರಸ್ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಭಾರತೀಯನ ದಾಖಲೆ:

ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ದಾಖಲೆ ದೀಪಕ್ ಚಹರ್ ಹೆಸರಿನಲ್ಲಿದೆ. 2019 ರಲ್ಲಿ ಬಾಂಗ್ಲಾದೇಶ್ ವಿರುದ್ಧ 7 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಟಿ20 ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ನ ಅತ್ಯುತ್ತಮ ಬೌಲಿಂಗ್ ದಾಖಲೆಯಾಗಿದೆ.

Published On - 10:58 pm, Wed, 26 July 23

ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?