AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟ್ಸ್ ಶತಕ, ಆಫ್ರಿಕಾಗೆ ಬೃಹತ್ ಜಯ; ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ

Women's T20 World Cup 2026: ಮಹಿಳಾ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಟಾಜ್ಮಿನ್ ಬ್ರಿಟ್ಸ್ ನೆದರ್ಲ್ಯಾಂಡ್ಸ್ ವಿರುದ್ಧ ಐತಿಹಾಸಿಕ ಶತಕ ಸಿಡಿಸಿ ತಂಡಕ್ಕೆ 88 ರನ್‌ಗಳ ಭರ್ಜರಿ ಗೆಲುವು ತಂದಿತ್ತರು. ಇದು ಅವರ ಮೊದಲ T20I ಶತಕ. ಈ ಜಯ ದಕ್ಷಿಣ ಆಫ್ರಿಕಾದ ನೆಟ್ ರನ್ ರೇಟ್ ಸುಧಾರಿಸಿದ್ದು, ಭಾರತದೊಂದಿಗೆ ಸೆಮಿಫೈನಲ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಮುಂದಿನ ನಿರ್ಣಾಯಕ ಪಂದ್ಯಗಳ ಫಲಿತಾಂಶ ಭಾರತದ ಮತ್ತು ದಕ್ಷಿಣ ಆಫ್ರಿಕಾದ ಭವಿಷ್ಯ ನಿರ್ಧರಿಸಲಿದೆ.

ಬ್ರಿಟ್ಸ್ ಶತಕ, ಆಫ್ರಿಕಾಗೆ ಬೃಹತ್ ಜಯ; ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ
Team IndiaImage Credit source: ICC X
ಪೃಥ್ವಿಶಂಕರ
|

Updated on:Jun 26, 2026 | 2:57 PM

Share

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್​ನಲ್ಲಿ (Women’s T20 World Cup 2026) ಇಲ್ಲಿಯವರೆಗೆ ಬೆರಳೆಣಿಕೆಯಷ್ಟು ಶತಕಗಳು ಮಾತ್ರ ದಾಖಲಾಗಿವೆ, ಆದರೆ ಪ್ರತಿ ಶತಕವೂ ಒಂದಲ್ಲ ಒಂದು ಕಾರಣಕ್ಕೆ ಐತಿಹಾಸಿಕವಾಗಿದೆ. ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ್ತಿ ಟಾಜ್ಮಿನ್ ಬ್ರಿಟ್ಸ್ ಅಂತಹ ಒಂದು ಶತಕವನ್ನು ಬಾರಿಸುವ ಮೂಲಕ ತನ್ನ ತಂಡಕ್ಕೆ ದಾಖಲೆಯ ಗೆಲುವು ತಂದುಕೊಟ್ಟರು. ಲೀಗ್ ಹಂತದ ನಾಲ್ಕನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಿದ್ದ ದಕ್ಷಿಣ ಆಫ್ರಿಕಾಕ್ಕೆ ಸೆಮಿಫೈನಲ್​ ದೃಷ್ಟಿಯಿಂದ ದೊಡ್ಡ ಗೆಲುವಿನ ಅಗತ್ಯವಿತ್ತು. ಅಂತಹ ಸಂದರ್ಭದಲ್ಲಿ ತಂಡದ ಪರ ಸ್ಮರಣೀಯ ಇನ್ನಿಂಗ್ಸ್ ಆಡಿದ ಟಾಜ್ಮಿನ್ ಬ್ರಿಟ್ಸ್ ಶತಕ ಬಾರಿಸುವ ಮೂಲಕ ತಂಡವನ್ನು ದೊಡ್ಡ ಮೊತ್ತದತ್ತ ಕೊಂಡೊಯ್ದರು.

ಎ ಗುಂಪಿನಲ್ಲಿ ಸೆಮಿಫೈನಲ್​ಗೇರಲು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಉಭಯ ತಂಡಗಳು ಉಳಿದಿರುವ ಪಂದ್ಯಗಳನ್ನು ಗೆದ್ದರೂ ನೆಟ್ ರನ್​ ರೇಟ್ ಆದಾರದ ಮೇಲೆ ಸೆಮಿಫೈನಲ್​ಗೇರುವ ತಂಡವನ್ನು ನಿರ್ಧರಿಸಲಾಗುತ್ತದೆ. ಪ್ರಸ್ತುತ ನೆಟ್ ರನ್ ರೇಟ್ ವಿಚಾರದಲ್ಲಿ ಭಾರತ, ದಕ್ಷಿಣ ಆಫ್ರಿಕಾಕ್ಕಿಂತ ಮುಂದಿದೆ. ಅದರಲ್ಲೂ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದ ನಂತರ, ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯವನ್ನು ದೊಡ್ಡ ಅಂತರದಿಂದ ಗೆಲ್ಲುವುದು ದಕ್ಷಿಣ ಆಫ್ರಿಕಾಕ್ಕೆ ಇನ್ನಷ್ಟು ನಿರ್ಣಾಯಕವಾಗಿತ್ತು.

ಬ್ರಿಟ್ಸ್ ಅಜೇಯ ಶತಕ

ಅದರಂತೆ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ 208 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸಿದ ಬ್ರಿಟ್ಸ್ ಈ ಬೃಹತ್ ಮೊತ್ತಕ್ಕೆ ಕಾರಣರಾದರು. ಈ ಅನುಭವಿ ಬ್ಯಾಟರ್ ನೆದರ್‌ಲ್ಯಾಂಡ್ಸ್‌ನ ದುರ್ಬಲ ಬೌಲಿಂಗ್​ನ ಲಾಭ ಪಡೆದು ಕೇವಲ 63 ಎಸೆತಗಳಲ್ಲಿ ಶತಕ ಬಾರಿಸಿದರು.

ಬ್ರಿಟ್ಸ್ ಇನ್ನಿಂಗ್ಸ್‌ನ ವಿಶೇಷವೆಂದರೆ ಅದು ಅವರ ಟಿ20 ಅಂತರರಾಷ್ಟ್ರೀಯ ಪಂದ್ಯದ ಮೊದಲ ಶತಕವಾಗಿತ್ತು. ಅವರು ಈ ಹಿಂದೆ ಆಡಿದ 81 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 15 ಅರ್ಧಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದರು, ಆದರೆ ಎಂದಿಗೂ ಶತಕ ತಲುಪಿರಲಿಲ್ಲ. ಆದರೆ ಈ ಬಾರಿ ಬ್ರಿಟ್ಸ್ 69 ಎಸೆತಗಳಲ್ಲಿ 15 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 114 ರನ್ ಬಾರಿಸಿ ಅಜೇಯರಾಗಿ ಉಳಿದರು.

88 ರನ್​ಗಳಿಂದ ಸೋತ ನೆದರ್ಲ್ಯಾಂಡ್ಸ್

ಈ ಗುರಿ ಬೆನ್ನಟ್ಟಿದ ಗುರಿಯನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ ಫೆಬೆ ಮೊಲ್ಕೆನ್‌ಬೋಯರ್ ಮತ್ತು ಸನ್ಯಾ ಖುರಾನಾ ಅವರೊಂದಿಗೆ ಸ್ಥಿರ ಆರಂಭ ಪಡೆಯಿತು. ಇವರಿಬ್ಬರು ಮೊದಲ ವಿಕೆಟ್‌ಗೆ 58 ರನ್‌ಗಳ ಜೊತೆಯಾಟವನ್ನಾಡಿದರು. ಇವರಿಬ್ಬರ ವಿಕೆಟ್​ಗಳ ನಂತರ ನೆದರ್ಲ್ಯಾಂಡ್ಸ್ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿದ್ದರಿಂದ ತಂಡಕ್ಕೆ 100 ರನ್‌ಗಳ ಗಡಿಯನ್ನು ದಾಟಲು ಸಾಧ್ಯವಾಗಲಿಲ್ಲ. ಹೀಗಾಗಿ ಆಫ್ರಿಕಾ ತಂಡ 88 ರನ್​ಗಳಿಂದ ಪಂದ್ಯವನ್ನು ಗೆದ್ದು ತನ್ನ ನೆಟ್ ರನ್ ರೇಟ್​ ಅನ್ನು ಸುಧಾರಿಸಿಕೊಂಡಿತು.

IND vs BAN: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್; ದಾಖಲೆ ಬರೆದ ಶ್ರೀ ಚರಣಿ

 ಟೀಂ ಇಂಡಿಯಾ ಗೆಲ್ಲಲೇಬೇಕು

88 ರನ್‌ಗಳ ಬೃಹತ್ ಗೆಲುವಿನೊಂದಿಗೆ, ದಕ್ಷಿಣ ಆಫ್ರಿಕಾ ಸೆಮಿಫೈನಲ್ ರೇಸ್​​ಗೆ ಮತ್ತಷ್ಟು ಸನಿಹವಾಗಿದೆ. ಪ್ರಸ್ತುತ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ತಲಾ ಆರು ಅಂಕಗಳನ್ನು ಹೊಂದಿವೆ. ಆದರೆ ಭಾರತದ ನೆಟ್ ರನ್ ರೇಟ್​ ಆಫ್ರಿಕಾಕ್ಕಿಂತ ಹೆಚ್ಚಿರುವ ಕಾರಣ ಭಾರತ ಎರಡನೇ ಸ್ಥಾನದಲ್ಲಿದೆ. ಭಾರತದ ನೆಟ್ ರನ್ ರೇಟ್ +2.268 ಆಗಿದ್ದರೆ, ಆಫ್ರಿಕಾದ ನೆಟ್ ರನ್ ರೇಟ್ +0.734 ಆಗಿದೆ. ಹೀಗಾಗಿ ಉಭಯ ತಂಡಗಳಲ್ಲಿ ಯಾವ ತಂಡ ಮುಂದಿನ ಪಂದ್ಯವನ್ನು ಗೆಲ್ಲುತ್ತದೋ ಆ ತಂಡಕ್ಕೆ ಸೆಮಿಸ್ ಟಿಕೆಟ್ ಸಿಗಲಿದೆ.

ಆದರೆ ಭಾರತದ ಮುಂದಿನ ಪಂದ್ಯ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ವಿರುದ್ಧವಿದೆ. ಇತ್ತ ದಕ್ಷಿಣ ಆಫ್ರಿಕಾ ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ಹೀಗಾಗಿ ಭಾರತ ತನ್ನ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು. ಅದು ಸಾಧ್ಯವಾಗದಿದ್ದರೆ, ಇತ್ತ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ವಿರುದ್ಧ ಸೋಲಲಿ ಎಂದು ಪ್ರಾರ್ಥಿಸಬೇಕು. ಒಂದು ವೇಳೆ ಭಾರತ, ಆಸ್ಟ್ರೇಲಿಯಾ ವಿರುದ್ಧ ಸೋತು, ಇತ್ತು ದಕ್ಷಿಣ ಆಫ್ರಿಕಾ ಬಾಂಗ್ಲಾದೇಶ ವಿರುದ್ಧ ಗೆದ್ದರೆ, ಭಾರತ ಸೆಮಿಫೈನಲ್ ರೇಸ್​ನಿಂದ ಹೊರಬೀಳಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Fri, 26 June 26

Follow Us
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ