T20 World Cup 2021: ಟಿ20 ವಿಶ್ವಕಪ್ಗೆ ಅಫ್ಘಾನಿಸ್ತಾನ್ ತಂಡ ಅನುಮಾನ
ICC Men's T20 World Cup 2021: ಟಿ20 ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ.
ಇಡೀ ಅಫ್ಘಾನಿಸ್ತಾನವನ್ನು (Afghanistan Crisis) ತಾಲಿಬಾನ್ (Taliban) ಉಗ್ರರು ವಶಪಡಿಸಿಕೊಂಡಿದ್ದಾರೆ. ಇನ್ಮುಂದೆ ಅಫ್ಘಾನ್, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ್ ದೇಶವಾಗಿರಲಿದೆ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ಅಫ್ಘಾನಿಸ್ತಾನ್ ಕ್ರಿಕೆಟ್ ತಂಡದ (Afghanistan Cricket Team) ಭವಿಷ್ಯವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಕ್ರಿಕೆಟ್ ಅಂಗಳದಲ್ಲಿ ಮಿಂಚಿದ್ದ ತಂಡವೊಂದು ಮತ್ತೆ ಕಣ್ಮರೆಯಾಗಲಿದೆಯಾ ಎಂಬ ಆತಂಕ ಎದುರಾಗಿದೆ. ಏಕೆಂದರೆ ತಾಲಿಬಾನಿಗಳು ಈ ಹಿಂದಿನಿಂದಲೂ ಮನರಂಜನೆ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳನ್ನು ವಿರೋಧಿಸುತ್ತಾ ಬಂದಿದೆ. ಇದೀಗ ಕ್ರಿಕೆಟ್ ಕೂಡ ಅಫ್ಘಾನ್ನಲ್ಲಿ ಹೊಸ ಅಲೆಯೆಬ್ಬಿಸಿದೆ. ಹೀಗಾಗಿ ತಾಲಿಬಾನಿಗಳು ತಮ್ಮ ದೇಶದಲ್ಲಿ ಕ್ರಿಕೆಟ್ ಅನ್ನು ನಿಷೇಧಿಸಲಿದೆಯಾ ಎಂಬ ಪ್ರಶ್ನೆಗಳು ಮೂಡಿವೆ. ಇದಕ್ಕೆ ಪುಷ್ಠಿ ನೀಡುವಂತೆ ಈಗಾಗಲೇ ಅಫ್ಘಾನಿಸ್ತಾನದ ಕ್ರಿಕೆಟ್ ಸ್ಟೇಡಿಯಂಗಳನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.
ಇತ್ತ ಅಕ್ಟೋಬರ್ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಈಗಾಗಲೇ ಅಫ್ಘಾನಿಸ್ತಾನ್ ತಂಡವು ಚುಟುಕು ಕದನಕ್ಕೆ ನೇರವಾಗಿ ಅರ್ಹತೆ ಪಡೆದುಕೊಂಡಿದೆ. ಆದರೆ ಇದೀಗ ತಾಲಿಬಾನಿಗಳ ಕಪಿಮುಷ್ಠಿಯಲ್ಲಿರುವ ದೇಶದಿಂದ ಆಟಗಾರರು ಟಿ20 ವಿಶ್ವಕಪ್ಗಾಗಿ ಹೇಗೆ ಬರಲಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಅದರಲ್ಲೂ ವಿಶ್ವಕಪ್ಗೂ ಮುನ್ನ ಎಲ್ಲಿ ಅಭ್ಯಾಸ ನಡೆಸಲಿದ್ದಾರೆ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿ ಉಳಿದಿದೆ.
ಇಡೀ ದೇಶದಲ್ಲಿ ಆಕ್ರಂದನ ಮುಗಿಲು ಮುಟ್ಟುತ್ತಿದೆ. ವಿಮಾನ ನಿಲ್ದಾಣಗಳನ್ನು ತಾಲಿಬಾನ್ಗಳು ವಶಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ತಾಲಿಬಾನಿಗಳ ನಿರ್ದೇಶನದಂತೆ ಮಾತ್ರ ವಿಮಾನ ಹಾರಾಟ ಇರಲಿದೆ. ಹೀಗಾಗಿ ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ್ ಭಾಗವಹಿಸಲು ಸಾಧ್ಯವೇ ಎಂಬ ಪ್ರಶ್ನೆ ಐಸಿಸಿ ಮುಂದಿದೆ. ಏಕೆಂದರೆ ಒಂದು ವೇಳೆ ತಾಲಿಬಾನಿಗಳು ಕ್ರಿಕೆಟ್ ಆಡುವುದನ್ನು ನಿಷೇಧಿಸಿದರೆ ಅಲ್ಲಿಂದ ಆಟಗಾರರನ್ನು ಕರೆ ತರುವುದು ಕಷ್ಟಸಾಧ್ಯ. ಹೀಗಾಗಿ ಅಫ್ಘಾನ್ ಕ್ರಿಕೆಟ್ ತಂಡದ ಭವಿಷ್ಯ ಏನಾಗಲಿದೆ ಎಂಬುದರ ಸ್ಪಷ್ಟ ಚಿತ್ರಣ ಇನ್ನು ಒಂದು ತಿಂಗಳೊಳಗೆ ಸಿಗಲಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಮಾಧ್ಯಮ ವ್ಯವಸ್ಥಾಪಕ ಹಿಕ್ಮತ್ ಹಸನ್, ನಾವು ಟಿ20 ವಿಶ್ವಕಪ್‌ನ ಭಾಗವಹಿಸುವ ವಿಶ್ವಾಸ ಹೊಂದಿದ್ದೇವೆ. ದೇಶದಲ್ಲಿ ಏನಾಗುತ್ತಿದ್ದರೂ ಯೋಜಿಸಿದಂತೆ ಮುಂದುವರಿಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಲಭ್ಯವಿರುವ ಆಟಗಾರರು ಮುಂದಿನ ದಿನಗಳಲ್ಲಿ ಕಾಬೂಲ್‌ನಲ್ಲಿ ತರಬೇತಿಗೆ ಮರಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಟಿ20 ವಿಶ್ವಕಪ್ಗಾಗಿ ತೆರಳುವ ಬಗ್ಗೆಯಾಗಲಿ ಅಥವಾ ತಾಲಿಬಾನಿಗಳ ಮುಂದಿನ ನಡೆಯ ಬಗ್ಗೆಯಾಗಲಿ ಅಫ್ಘಾನ್ ಕ್ರಿಕೆಟ್ ಬೋರ್ಡ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಅಫ್ಘಾನಿಸ್ತಾನ್ ಕ್ರಿಕೆಟ್ ಅತಂತ್ರ ಸ್ಥಿತಿಯಲ್ಲಿದೆ ಎಂದು ಹೇಳಬಹುದು.
ಇದಾಗ್ಯೂ ಅಫ್ಘಾನಿಸ್ತಾನದ ಸ್ಟಾರ್ ಆಟಗಾರರಾದ ರಶೀದ್ ಖಾನ್, ಮೊಹಮ್ಮದ್ ನಬಿ ಹಾಗೂ ಮುಜೀಬುರ್ ರೆಹಮಾನ್ ಇಂಗ್ಲೆಂಡ್ನಲ್ಲಿ ದಿ ಹಂಡ್ರೇಡ್ ಲೀಗ್ನಲ್ಲಿದ್ದಾರೆ. ಹೀಗಾಗಿ ಈ ಆಟಗಾರರು ಅಲ್ಲಿಂದಲೇ ಐಪಿಎಲ್ ಪಂದ್ಯಗಳಿಗಾಗಿ ಯುಎಇಗೆ ತೆರಳಿದ್ದಾರೆ. ಇನ್ನು ಯುಎಇನಲ್ಲೇ ಟಿ20 ವಿಶ್ವಕಪ್ ನಡೆಯಲಿರುವುದರಿಂದ ಅಲ್ಲೇ ಉಳಿದುಕೊಳ್ಳಲಿದ್ದಾರೆ. ಇನ್ನುಳಿದ ಅಫ್ಘಾನ್ ಆಟಗಾರರು ಅಕ್ಟೋಬರ್ ವೇಳೆಗೆ ಯುಎಇ ತಲುಪಿದರೆ ಮಾತ್ರ ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ ತಂಡ ಕಾಣಿಸಿಕೊಳ್ಳಲಿದೆ. ಹೀಗಾಗಿ ಅಕ್ಟೋಬರ್ವರೆಗೆ ಕಾದು ನೋಡಲು ಐಸಿಸಿ ನಿರ್ಧರಿಸಿದೆ.
ಟಿ20 ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ. ಮೊದಲ ಆರು ದಿನಗಳು ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದೆ. ಅಕ್ಟೋಬರ್ 23 ರಿಂದ ಟೂರ್ನಿಯ ಮೊದಲ ಸೂಪರ್ 12 ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜರುಗಲಿದೆ.
ಗ್ರೂಪ್ 1 ನಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ , ವೆಸ್ಟ್ ಇಂಡೀಸ್ ತಂಡಗಳು ಇದ್ದರೆ 2ನೇ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಹಾಗೂ ಅಪ್ಘಾನಿಸ್ತಾನ ತಂಡಗಳು ಇವೆ.
ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ:
ಟಿ-20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ:
ಸೂಪರ್ 12: ಗ್ರೂಪ್ 1 ಪಂದ್ಯಗಳ ವೇಳಾಪಟ್ಟಿ
ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ – 23 ಅಕ್ಟೋಬರ್ – 3:30 PM
ಇಂಗ್ಲೆಂಡ್ vs ವೆಸ್ಟ್ ಇಂಡೀಸ್ – 23 ಅಕ್ಟೋಬರ್ – 7:30 PM
A1 vs B2 – 24 ಅಕ್ಟೋಬರ್ – 3:30 PM
ದಕ್ಷಿಣ ಆಫ್ರಿಕಾ vs ವೆಸ್ಟ್ ಇಂಡೀಸ್ – ಅಕ್ಟೋಬರ್ 26 – 3:30 PM
ಇಂಗ್ಲೆಂಡ್ vs B2 – ಅಕ್ಟೋಬರ್ 24 – 3:30 PM
ಆಸ್ಟ್ರೇಲಿಯಾ vs A2 – ಅಕ್ಟೋಬರ್ 28 – 7:30 PM
ವೆಸ್ಟ್ ಇಂಡೀಸ್ vs B2 – ಅಕ್ಟೋಬರ್ 29 – 3:30 PM
ದಕ್ಷಿಣ ಆಫ್ರಿಕಾ vs A1 – ಅಕ್ಟೋಬರ್ 30 – 3:30 PM
ಇಂಗ್ಲೆಂಡ್ vs ಆಸ್ಟ್ರೇಲಿಯಾ – ಅಕ್ಟೋಬರ್ 30 – 7:30 PM
ಇಂಗ್ಲೆಂಡ್ vs A1 – ನವೆಂಬರ್ 01 – 7:30 PM
ದಕ್ಷಿಣ ಆಪ್ರಿಕಾ vs B2 – ನವೆಂಬರ್ 02 – 3:30 PM
ಆಸ್ಟ್ರೇಲಿಯಾ vs B2 – ನವೆಂಬರ್ 04 – 3:30 PM
ವೆಸ್ಟ್ ಇಂಡೀಸ್ vs A1 – ನವೆಂಬರ್ 04- 7:30 PM
ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ – ನವೆಂಬರ್ 06 – 3:30 PM
ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ – ನವೆಂಬರ್ 06 – 7:30 PM
ಸೂಪರ್ 12: ಗ್ರೂಪ್ 2 ಪಂದ್ಯಗಳ ವೇಳಾಪಟ್ಟಿ
ಭಾರತ vs ಪಾಕಿಸ್ತಾನ – ಅಕ್ಟೋಬರ್ 24 – 7:30 PM
ಅಫ್ಘಾನಿಸ್ತಾನ vs B1 – ಅಕ್ಟೋಬರ್ 25 – 7:30 PM
ಪಾಕಿಸ್ತಾನ vs ನ್ಯೂಜಿಲೆಂಡ್ – ಅಕ್ಟೋಬರ್ 26 – 7:30 PM
B1 vs A2 – 27 ಅಕ್ಟೋಬರ್ – 7:30 PM
ಅಫ್ಘಾನಿಸ್ತಾನ vs ಪಾಕಿಸ್ತಾನ – 29 ಅಕ್ಟೋಬರ್ – 7:30 PM
ಅಫ್ಘಾನಿಸ್ತಾನ vs A2 – 31 ಅಕ್ಟೋಬರ್ – 3:30 PM
ಭಾರತ vs ನ್ಯೂಜಿಲೆಂಡ್ – 31 ಅಕ್ಟೋಬರ್ – 7:30 PM
ಪಾಕಿಸ್ತಾನ vs A2 – 2 ನವೆಂಬರ್ – 7:30 PM
ನ್ಯೂಜಿಲೆಂಡ್ vs B1 – 3 ನವೆಂಬರ್ – 3:30 PM
ಭಾರತ vs ಅಫ್ಘಾನಿಸ್ತಾನ – 3 ನವೆಂಬರ್ – 7:30 PM
ನ್ಯೂಜಿಲೆಂಡ್ vs A2 – 5 ನವೆಂಬರ್ – 3:30 PM
ಭಾರತ vs B1 – 5 ನವೆಂಬರ್ – 7:30 PM
ನ್ಯೂಜಿಲೆಂಡ್ vs ಅಫ್ಘಾನಿಸ್ತಾನ – 7 ನವೆಂಬರ್ – 3:30 PM
ಪಾಕಿಸ್ತಾನ vs B1 – 7 ನವೆಂಬರ್ – 7:30 PM
ಭಾರತ vs A2 – 8 ನವೆಂಬರ್ – 7:30 PM
ಸೆಮಿ ಫೈನಲ್ ಪಂದ್ಯ:
ಸೆಮಿ ಫೈನಲ್ 1 – A1 vs B2 – 10 ನವೆಂಬರ್
ಸೆಮಿ ಫೈನಲ್ 2- A2 vs B1 – 11 ನವೆಂಬರ್
ಫೈನಲ್ ಪಂದ್ಯ: 14 ನವೆಂಬರ್
ಇದನ್ನೂ ಓದಿ: India vs England 2nd Test: ಅಂದು ದಾದಾ, ಇಂದು ಕೊಹ್ಲಿ: ಲಾರ್ಡ್ಸ್ ಬಾಲ್ಕನಿಯಲ್ಲಿ ಕ್ಯಾಪ್ಟನ್ ಡ್ಯಾನ್ಸ್
ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ
ಇದನ್ನೂ ಓದಿ: ಇವರ ಬ್ಯಾಟಿಂಗ್ ಮುಂದೆ, ಗೇಲ್-ಎಬಿಡಿ-ಸೆಹ್ವಾಗ್ ಏನೂ ಅಲ್ಲ: ವಿಶ್ವದ ಅತೀ ವೇಗದ ಶತಕದ ಸರದಾರ
(T20 World Cup 2021: Afghanistan Will Play in ICC Men’s T20 World Cup)