T20 World Cup 2021: ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಬಾಬರ್ ಆಜಂ

Virat Kohli - Babar Azam: ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ವಿರಾಟ್ ಕೊಹ್ಲಿ ಇದುವರೆಗೆ 1559 ರನ್ ಗಳಿಸಿದ್ದರೆ, ಬಾಬರ್ ಆಜಂ 1042 ರನ್ ಕಲೆಹಾಕಿದ್ದಾರೆ. ಇದಾಗ್ಯೂ ನಾಯಕನಾಗಿ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಆಸ್ಟ್ರೇಲಿಯಾ ಕ್ಯಾಪ್ಟನ್ ಆರೋನ್ ಫಿಂಚ್ ಹೆಸರಿನಲ್ಲಿದೆ.

T20 World Cup 2021: ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಬಾಬರ್ ಆಜಂ
Babar Azam-Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 30, 2021 | 3:52 PM

T20 World Cup 2021: ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat kohli) ಹಾಗೂ ಪಾಕಿಸ್ತಾನ್ ನಾಯಕ ಬಾಬರ್ ಆಜಂ (Babar Azam) ನಡುವಣ ಪೈಪೋಟಿ ಮುಂದುವರೆಯುತ್ತಿದೆ. ಪ್ರಸ್ತುತ ಕ್ರಿಕೆಟ್​ನ ಕವರ್​ ಡ್ರೈವ್​​ನ ಮಾಸ್ಟರ್ಸ್​ ಎಂದು ಕರೆಸಿಕೊಂಡಿರುವ ಇಬ್ಬರ ನಡುವಣ ಬ್ಯಾಟಿಂಗ್ ಅಂಕಿ ಅಂಶಗಳು ಸದಾ ಚರ್ಚೆಯಲ್ಲಿರುತ್ತದೆ. ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿದು ಬಾಬರ್ ಆಜಂ ಹೊಸ ರೆಕಾರ್ಡ್ ನಿರ್ಮಿಸಿದ್ದಾರೆ.

ಹೌದು, ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 1000 ರನ್​ ಪೂರೈಸಿದ ನಾಯಕ ಎಂಬ ಹೆಗ್ಗಳಿಕೆಗೆ ಬಾಬರ್ ಆಜಂ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ 30 ಇನಿಂಗ್ಸ್​ನಲ್ಲಿ ಸಾವಿರ ರನ್ ಪೂರೈಸುವ ಮೂಲಕ ದಾಖಲೆ ಬರೆದಿದ್ದರು. ಆದರೀಗ ಬಾಬರ್ ಆಜಂ ಕೇವಲ 26 ಇನಿಂಗ್ಸ್​ಗಳಲ್ಲಿ 1000 ರನ್ ಪೂರೈಸಿ ದಾಖಲೆ ನಿರ್ಮಿಸಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ವಿರಾಟ್ ಕೊಹ್ಲಿ ಇದುವರೆಗೆ 1559 ರನ್ ಗಳಿಸಿದ್ದರೆ, ಬಾಬರ್ ಆಜಂ 1042 ರನ್ ಕಲೆಹಾಕಿದ್ದಾರೆ. ಇದಾಗ್ಯೂ ನಾಯಕನಾಗಿ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಆಸ್ಟ್ರೇಲಿಯಾ ಕ್ಯಾಪ್ಟನ್ ಆರೋನ್ ಫಿಂಚ್ ಹೆಸರಿನಲ್ಲಿದೆ. ಫಿಂಚ್ ಇದುವರೆಗೆ 1626 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು 2ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (1559 ರನ್) ಇದ್ದು, ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 1408 ರನ್​ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಇದಕ್ಕೂ ಮುನ್ನ ಬಾಬರ್ ಆಜಂ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಕೊಹ್ಲಿ 56 ಇನಿಂಗ್ಸ್​ಗಳಲ್ಲಿ ನಿರ್ಮಿಸಿದ್ದ ದಾಖಲೆಯನ್ನು 52 ಇನಿಂಗ್ಸ್​ಗಳಲ್ಲಿ 2 ಸಾವಿರ ರನ್ ಬಾರಿಸುವ ಮೂಲಕ ಬಾಬರ್ ಮುರಿದಿದ್ದರು. ಇದೀಗ ಮತ್ತೊಮ್ಮೆ ಕೊಹ್ಲಿ ದಾಖಲೆ ಮುರಿದು ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 1 ಸಾವಿರ ರನ್ ಪೂರೈಸಿದ ನಾಯಕ ಎಂಬ ದಾಖಲೆಯನ್ನು ಬಾಬರ್ ಆಜಂ ನಿರ್ಮಿಸಿದ್ದಾರೆ.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(T20 World Cup 2021: Babar Azam breaks another Virat Kohli’s record)

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ