T20 World Cup 2021: ಈ ಸಲ ಟಿ20 ವಿಶ್ವಕಪ್​ನಲ್ಲಿ 5 ಓವರ್ ಪಂದ್ಯ ಕೂಡ ಇರಲಿದೆ..!

T20 World Cup 2021 Schedule: ಟಿ20 ವಿಶ್ವಕಪ್​ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ. ಮೊದಲ ಆರು ದಿನಗಳು ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದೆ.

T20 World Cup 2021: ಈ ಸಲ ಟಿ20 ವಿಶ್ವಕಪ್​ನಲ್ಲಿ 5 ಓವರ್ ಪಂದ್ಯ ಕೂಡ ಇರಲಿದೆ..!
ಇದರ ಬೆನ್ನಲ್ಲೇ ಐಸಿಸಿ ಪ್ರಸ್ತುತ ಟಿ20 ತಂಡಗಳ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ‍್ಯಾಂಕಿಂಗ್‌​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 16, 2021 | 4:50 PM

ಐಸಿಸಿ ಟಿ20 ವಿಶ್ವಕಪ್​ಗೆ (T20 World Cup 2021) ಅಕ್ಟೋಬರ್ 17 ರಿಂದ ಚಾಲನೆ ಸಿಗಲಿದೆ. ಭಾನುವಾರ ನಡೆಯಲಿರುವ ಮೊದಲ ಅರ್ಹತಾ ಸುತ್ತಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಸ್ಕಾಟ್ಲೆಂಡ್‌ನ್ನು ಎದುರಿಸಲಿದೆ. ಅರ್ಹತಾ ಸುತ್ತಿನ 8 ತಂಡಗಳಿಂದ 4 ತಂಡಗಳು ಸೂಪರ್ 12 ಗೆ ಎಂಟ್ರಿ ಕೊಡಲಿದೆ. ಅದರಂತೆ ಅಕ್ಟೋಬರ್ 23 ರಿಂದ ಸೂಪರ್ 12 ಪಂದ್ಯಾವಳಿ ಶುರುವಾಗಲಿದೆ. ಭಾರತವು ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು  ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ದ ಆಡಲಿದ್ದು, ಈ ಮೂಲಕ ಟಿ20 ವಿಶ್ವಕಪ್​ ಅಭಿಮಾನ ಆರಂಭಿಸಲಿದೆ.

ಈ ಬಾರಿಯ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಆಡಲಿದ್ದು, ಒಟ್ಟು 45 ಪಂದ್ಯಗಳು ನಡೆಯಲಿವೆ. ಇನ್ನು ಟೂರ್ನಿಯ ಫೈನಲ್ ಪಂದ್ಯ ನವೆಂಬರ್ 14 ರಂದು ನಡೆಯಲಿದೆ. ಒಂದು ವೇಳೆ ಸೆಮಿ ಫೈನಲ್​ ಹಾಗೂ ಫೈನಲ್​ ವೇಳೆ ಕೆಟ್ಟ ಹವಾಮಾನ ಅಥವಾ ಮಳೆ ಬಂದರೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗುತ್ತದೆ. ಇದಾಗ್ಯೂ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಒಂದು ವೇಳೆ ಲೀಗ್ ಸುತ್ತಿನಲ್ಲಿ ಮಳೆ ಬಂದರೆ, ಪಾಯಿಂಟ್ಸ್​ಗಾಗಿ ಒಂದು ತಂಡವು ಕನಿಷ್ಠ 5 ಓವರ್‌ ಇನಿಂಗ್ಸ್​ ಆಡಬೇಕಾಗುತ್ತದೆ. ಇದಾಗ್ಯೂ ಲೀಗ್ ಸುತ್ತಿನ ಪಂದ್ಯಗಳಿಗೆ ಮೀಸಲು ದಿನ ನೀಡಲಾಗುವುದಿಲ್ಲ. ಹಾಗೆಯೇ ಸೆಮಿಫೈನಲ್ ಮತ್ತು ಫೈನಲ್‌ ವೇಳೆ ಕೂಡ ಮಳೆ ಆಡಚಣೆ ಮಾಡಿದ್ರೆ ಒಂದು ಇನ್ನಿಂಗ್ಸ್‌ನಲ್ಲಿ ಕನಿಷ್ಠ 10 ಓವರ್‌ ಆಡಬೇಕಾಗುತ್ತದೆ. ಅಂದರೆ ಫಲಿತಾಂಶ ನಿರ್ಧಾರವಾಗಲು ಉಭಯ ತಂಡಗಳು 10 ಓವರ್​ ಆಡಲೇಬೇಕಾಗುತ್ತದೆ. ಇನ್ನು ಮೀಸಲು ದಿನದಲ್ಲೂ ಪಂದ್ಯ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಟಿ20 ವಿಶ್ವಕಪ್​ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ. ಮೊದಲ ಆರು ದಿನಗಳು ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದೆ. ಅಕ್ಟೋಬರ್ 23 ರಿಂದ ಟೂರ್ನಿಯ ಮೊದಲ ಸೂಪರ್ 12 ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜರುಗಲಿದೆ.

ಗ್ರೂಪ್-1 ತಂಡಗಳು ಹೀಗಿವೆ: ಇಂಗ್ಲೆಂಡ್ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ಅರ್ಹತಾ ಸುತ್ತಿನ ಗ್ರೂಪ್ ಎ1 ತಂಡ ಅರ್ಹತಾ ಸುತ್ತಿನ ಗ್ರೂಪ್ ಬಿ2 ತಂಡ

ಗ್ರೂಪ್-2 ತಂಡಗಳು ಹೀಗಿವೆ: ಭಾರತ ಪಾಕಿಸ್ತಾನ ನ್ಯೂಜಿಲೆಂಡ್ ಅಪ್ಘಾನಿಸ್ತಾನ ಅರ್ಹತಾ ಸುತ್ತಿನ ಗ್ರೂಪ್ ಎ2 ತಂಡ ಅರ್ಹತಾ ಸುತ್ತಿನ ಗ್ರೂಪ್ ಬಿ1 ತಂಡ

ಅರ್ಹತಾ ಸುತ್ತಿನ ತಂಡಗಳು ಹೀಗಿವೆ: ಗ್ರೂಪ್ ಎ: ಶ್ರೀಲಂಕಾ, ಐರ್ಲೆಂಡ್, ನೆದರ್ಲ್ಯಾಂಡ್ಸ್, ನಮೀಬಿಯಾ ಗ್ರೂಪ್ ಬಿ: ಬಾಂಗ್ಲಾದೇಶ, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಓಮನ್

ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ

ಇದನ್ನೂ ಓದಿ: IPL 2021: ಈ ಬಾರಿಯ ಐಪಿಎಲ್​ನಲ್ಲಿ ಕಾರು ಸಿಕ್ಕಿದ್ದು ಯಾರಿಗೆ ಗೊತ್ತಾ?

ಇದನ್ನೂ ಓದಿ: IPL 2021 award winners: ಯಾರಿಗೆ ಯಾವ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

(T20 Wordl Cup 2021: both teams become champion if final not held due to bad weather)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್