T20 World Cup 2021: ಧೋನಿ ತಂತ್ರಕ್ಕೆ CSK ಕೋಚ್​ನಿಂದ ಪ್ರತಿತಂತ್ರ

T20 World Cup 2021: ಅಕ್ಟೋಬರ್ 17 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ನಲ್ಲಿ (T20 World Cup 2021) ಭಾರತ ತಂಡದ ಮೆಂಟರ್​ ಆಗಿ ಧೋನಿ ಕಾರ್ಯ ನಿರ್ವಹಿಸಲಿದ್ದಾರೆ.

T20 World Cup 2021: ಧೋನಿ ತಂತ್ರಕ್ಕೆ CSK ಕೋಚ್​ನಿಂದ ಪ್ರತಿತಂತ್ರ
Dhoni-Stephen Fleming
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 16, 2021 | 7:31 PM

ಮಹೇಂದ್ರ ಸಿಂಗ್ ಧೋನಿ (Ms Dhoni) ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK)​ ತಂಡವು ನಾಲ್ಕನೇ ಬಾರಿಗೆ ಐಪಿಎಲ್ ಚಾಂಪಿಯನ್​ ಪಟ್ಟಕ್ಕೇರಿದೆ. ಈ ಗೆಲುವಿನ ಸಂಭ್ರಮದ ಬೆನ್ನಲ್ಲೇ ಸಿಎಸ್​ಕೆ ನಾಯಕ ಧೋನಿ ಟೀಮ್ ಇಂಡಿಯಾ ಕ್ಯಾಂಪ್ ಸೇರಿದ್ದಾರೆ. ಏಕೆಂದರೆ ಅಕ್ಟೋಬರ್ 17 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ನಲ್ಲಿ (T20 World Cup 2021) ಭಾರತ ತಂಡದ ಮೆಂಟರ್​ ಆಗಿ ಧೋನಿ ಕಾರ್ಯ ನಿರ್ವಹಿಸಲಿದ್ದಾರೆ. ಆದರೆ ಟೀಮ್ ಇಂಡಿಯಾಗೆ ಧೋನಿಯ ಸೇರ್ಪಡೆ ಬೆನ್ನಲ್ಲೇ ಅತ್ತ ಸಿಎಸ್​ಕೆ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ (Stephen Fleming) ನ್ಯೂಜಿಲೆಂಡ್ ತಂಡ ಸೇರಿದ್ದಾರೆ.

ಹೌದು, ನ್ಯೂಜಿಲೆಂಡ್ ತಂಡದ ಮಾಜಿ ನಾಯಕರಾಗಿರುವ ಸ್ಟೀಫನ್ ಫ್ಲೆಮಿಂಗ್ ಅವರನ್ನು ಟಿ20 ವಿಶ್ವಕಪ್​ ವೇಳೆ ತಂಡದ ಮೆಂಟರ್ ಆಗಿ ಉಳಿದುಕೊಳ್ಳುವಂತೆ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್​ ತಿಳಿಸಿದೆ. ಅದರಂತೆ ಸಿಎಸ್​ಕೆ ತಂಡದ ಕೋಚ್ ಕೆಲ ದಿನಗಳ ಕಾಲ ನ್ಯೂಜಿಲೆಂಡ್ ತಂಡದೊಂದಿಗೆ ಯುಎಇನಲ್ಲೇ ಉಳಿದುಕೊಳ್ಳಲಿದ್ದಾರೆ.

ಐಪಿಎಲ್​ ಚಾಂಪಿಯನ್​ CSK ತಂಡದ ಚಾಂಪಿಯನ್ ಕೋಚ್ ಸ್ಟೀಫನ್ ಫ್ಲೆಮಿಂಗ್, ಐಪಿಎಲ್ ಫೈನಲ್ ನಿಂದ ನೇರವಾಗಿ ನ್ಯೂಜಿಲೆಂಡ್ ತಂಡವನ್ನು ಸೇರಿಕೊಂಡಿದ್ದಾರೆ. ಮುಂದಿನ ಕೆಲವು ದಿನಗಳವರೆಗೆ ಅವರು ಐಪಿಎಲ್ 2021 ರಲ್ಲಿ ಪಡೆದ ಅನುಭವವನ್ನು ನಮ್ಮ ತಂಡದೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂದು ನ್ಯೂಜಿಲೆಂಡ್ ತಂಡದ ಅಧಿಕೃತ ಟ್ವಿಟ್ ಖಾತೆಯ ಮೂಲಕ ತಿಳಿಸಿದೆ.

ಇತ್ತ ಯುಎಇನಲ್ಲಿ ಧೋನಿ ಹಾಗೂ ಸ್ಟೀಫನ್ ಫ್ಲೆಮಿಂಗ್ ಜಂಟಿಯಾಗಿ ಸಿಎಸ್​ಕೆ ಪರ ತಂತ್ರ-ಪ್ರತಿತಂತ್ರ ಹೆಣೆದಿದ್ದರು. ಇದೀಗ ಇಬ್ಬರು ಟಿ20 ವಿಶ್ವಕಪ್​ ಮೂಲಕ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಸಜ್ಜಾಗಿದ್ದಾರೆ. ಅದರಲ್ಲೂ ಕೂಲ್ ಕ್ಯಾಪ್ಟನ್ ಎನಿಸಿಕೊಂಡಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಪಡೆಗೆ ಫ್ಲೆಮಿಂಗ್ ಆಗಮನ ಮತ್ತಷ್ಟು ಹುರುಪು ನೀಡಿದೆ.

ಇಲ್ಲಿ ಮತ್ತೊಂದು ವಿಶೇಷ ಎಂದರೆ ಭಾರತ ಹಾಗೂ ನ್ಯೂಜಿಲೆಂಡ್ ಒಂದೇ ಗ್ರೂಪ್​ನಲ್ಲಿ ಇರೋದು. ಹೀಗಾಗಿ ಲೀಗ್​ ಹಂತದಿಂದಲೇ ಭಾರತ-ನ್ಯೂಜಿಲೆಂಡ್ ನಡುವಣ ಪಂದ್ಯವು ಧೋನಿ-ಫ್ಲೆಮಿಂಗ್ ತಂತ್ರ-ಪ್ರತಿತಂತ್ರಕ್ಕೆ ಸಾಕ್ಷಿಯಾಗಲಿದೆ. ಅದರಂತೆ ಅಕ್ಟೋಬರ್ 31 ರಂದು ಭಾರತ-ನ್ಯೂಜಿಲೆಂಡ್ ಮುಖಾಮುಖಿಯಾಗಲಿದ್ದು, ಈ ಪಂದ್ಯ ಕೂಡ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಮುಖಾಮುಖಿಯಲ್ಲಿ ಧೋನಿ ಗೆಲ್ಲಲಿದ್ದಾರಾ ಅಥವಾ ಸ್ಟೀಫನ್ ಫ್ಲೆಮಿಂಗ್ ಮೇಲುಗೈ ಸಾಧಿಸಲಿದ್ದಾರಾ ಕಾದು ನೋಡಬೇಕಿದೆ.

ಗ್ರೂಪ್-1 ತಂಡಗಳು ಹೀಗಿವೆ: ಇಂಗ್ಲೆಂಡ್ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ಅರ್ಹತಾ ಸುತ್ತಿನ ಗ್ರೂಪ್ ಎ1 ತಂಡ ಅರ್ಹತಾ ಸುತ್ತಿನ ಗ್ರೂಪ್ ಬಿ2 ತಂಡ

ಗ್ರೂಪ್-2 ತಂಡಗಳು ಹೀಗಿವೆ: ಭಾರತ ಪಾಕಿಸ್ತಾನ ನ್ಯೂಜಿಲೆಂಡ್ ಅಪ್ಘಾನಿಸ್ತಾನ ಅರ್ಹತಾ ಸುತ್ತಿನ ಗ್ರೂಪ್ ಎ2 ತಂಡ ಅರ್ಹತಾ ಸುತ್ತಿನ ಗ್ರೂಪ್ ಬಿ1 ತಂಡ

ಅರ್ಹತಾ ಸುತ್ತಿನ ತಂಡಗಳು ಹೀಗಿವೆ: ಗ್ರೂಪ್ ಎ: ಶ್ರೀಲಂಕಾ, ಐರ್ಲೆಂಡ್, ನೆದರ್ಲ್ಯಾಂಡ್ಸ್, ನಮೀಬಿಯಾ ಗ್ರೂಪ್ ಬಿ: ಬಾಂಗ್ಲಾದೇಶ, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಓಮನ್

ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ

ಇದನ್ನೂ ಓದಿ: IPL 2021: ಈ ಬಾರಿಯ ಐಪಿಎಲ್​ನಲ್ಲಿ ಕಾರು ಸಿಕ್ಕಿದ್ದು ಯಾರಿಗೆ ಗೊತ್ತಾ?

ಇದನ್ನೂ ಓದಿ: IPL 2021 award winners: ಯಾರಿಗೆ ಯಾವ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

(T20 World Cup 2021: CSK coach Stephen Fleming joins New Zealand)

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ