IND vs ENG Warm-Up Match: ಇಂದು ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ ಪ್ರಾರಂಭ?, ಲೈವ್ ವೀಕ್ಷಿಸುವುದು ಹೇಗೆ?

How to Watch India vs England Warm-Up Match: ಟಿ20 ವಿಶ್ವಕಪ್​ನಲ್ಲಿರುವ ಟೀಮ್ ಇಂಡಿಯಾದ ಆಟಗಾರರಿಗೆ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯ ಅಗ್ನಿಪರೀಕ್ಷೆಯಾಗಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯ ದುಬೈನಲ್ಲಿರುವ ಐಸಿಸಿ ಅಕಾಡೆಮಿ ಗ್ರೌಂಡ್​ನಲ್ಲಿ ನಡೆಯಲಿದೆ.

IND vs ENG Warm-Up Match: ಇಂದು ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ ಪ್ರಾರಂಭ?, ಲೈವ್ ವೀಕ್ಷಿಸುವುದು ಹೇಗೆ?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯ ದುಬೈನಲ್ಲಿರುವ ಐಸಿಸಿ ಅಕಾಡೆಮಿ ಗ್ರೌಂಡ್ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.
Follow us
TV9 Web
| Updated By: Vinay Bhat

Updated on: Oct 18, 2021 | 9:21 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಮುಗಿಸಿ ಟಿ20 ವಿಶ್ವಕಪ್​ಗೆ (T20 World Cup) ಆಯ್ಕೆಯಾಗಿದ್ದ ಆಟಗಾರರು ಟೀಮ್ ಇಂಡಿಯಾ (Team India) ಸೇರಿಕೊಂಡಿದ್ದಾಗಿದೆ. ಸೋಮವಾರ ವಿರಾಟ್ ಕೊಹ್ಲಿ (Virat Kohli) ಪಡೆ ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಅತ್ತ ಕಡೆ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿದ್ದರೆ ಇತ್ತ ಅಭ್ಯಾಸ ಪಂದ್ಯಕೂಡ ರೋಚಕತೆ ಸೃಷ್ಟಿಸಿದೆ. ಪಂದ್ಯ ರಂಗೇರಲು ತಂಡದ ಸೂಕ್ತ ಕಾಂಬಿನೇಶನ್‌ ಒಂದನ್ನು ರಚಿಸುವುದು ಅಭ್ಯಾಸ ಪಂದ್ಯದ ಗುರಿಯಾಗಿದೆ. ಸೂಪರ್‌-12ರ (Super 12) ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿರುವ ಒಟ್ಟು 8 ತಂಡಗಳು ತಲಾ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಇಂದು ತನ್ನ ಮೊದಲ ಪಂದ್ಯ (India vs England) ಆಡಿದರೆ ಬುಧವಾರ ಆಸ್ಟ್ರೇಲಿಯ ವಿರುದ್ಧ ಎರಡನೇ ಪ್ಯಾಕ್ಟೀಸ್ ಮ್ಯಾಚ್​ನಲ್ಲಿ (India vs Australia) ಕಣಕ್ಕಿಳಿಯಲಿದೆ. ವಿರಾಟ್ ಪಡೆ ಅಭ್ಯಾಸ ಪಂದ್ಯವನ್ನು ಹಗುರವಾಗಿ ತೆಗೆದುಕೊಳ್ಳದೆ ಸಾಕಷ್ಟು ಪ್ರಯೋಗಕ್ಕಿಳಿಯಲಿದೆ.

ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆದುಕೊಂಡಿರುವ ಟೀಮ್ ಇಂಡಿಯಾದ ಎಲ್ಲ ಆಟಗಾರರಿಗೆ ಈಗಾಗಲೇ ಯುಎಇ ಪಿಚ್ ಬಗ್ಗೆ ಚೆನ್ನಾಗಿಯೇ ಅರಿವಿದೆ. ಆದರೆ, ಆಡುವ ಬಳಗದ್ದೇ ನಾಯಕ ಮತ್ತು ಮ್ಯಾನೇಜ್​ಮೆಂಟ್​ಗೆ ತಲೆನೋವಾಗಿರುವುದು. ಪ್ರಮುಖವಾಗಿ ಓಪನರ್​ಗಳಾಗಿ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಅಥವಾ ಕೆ. ಎಲ್ ರಾಹುಲ್ ಪೈಕಿ ಯಾರಿಗೆ ಸ್ಥಾನ ಎಂಬುವುದೇ ಸವಾಲಾಗಿದೆ. ಐಪಿಎಲ್‌ನಲ್ಲಿ 30 ಸಿಕ್ಸರ್‌ ಸೇರಿದಂತೆ 626 ರನ್‌ ಪೇರಿಸಿರುವ ರಾಹುಲ್‌ ಅವರೇ ಮೊದಲ ಆಯ್ಕೆಗೆ ಸಿಗಬಹುದು. ಆಗ ಇಶಾನ್‌ ಕಿಶನ್‌ 6ನೇ ಕ್ರಮಾಂಕದಲ್ಲಿ ಆಡಲಿಳಿಯಬಹುದು.

ಟೀಮ್ ಇಂಡಿಯಾದ ಎಲ್ಲ ಆಟಗಾರರಿಗೆ ಈ ಅಭ್ಯಾಸ ಪಂದ್ಯ ಅಗ್ನಿಪರೀಕ್ಷೆಯಾಗಿದೆ. ಅಕ್ಟೋಬರ್‌ 24ರಂದು ಪಾಕಿಸ್ತಾನದ ಎದುರು ತನ್ನ ಅಭಿಯಾನ ಆರಂಭಿಸಲಿರುವ ಭಾರತ ತಂಡವು ಹನ್ನೊಂದರ ಬಳಗವನ್ನು ಈ ಅಭ್ಯಾಸ ಪಂದ್ಯದ ಮೂಲಕ ನಿರ್ಧರಿಸಬೇಕಿದೆ. ಎರಡು ಅಭ್ಯಾಸ ಪಂದ್ಯಗಳಲ್ಲಿ ಉತ್ತಮವಾಗಿ ಆಡುವವರಿಗೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚು. ಮಾಜಿ ನಾಯಕ ಎಂ. ಎಸ್ ಧೋನಿ ಹೊಸ ಮಾರ್ಗದರ್ಶಕರಾಗಿ ಕೋಚ್​ ರವಿಶಾಸ್ತ್ರಿ ಮತ್ತು ತಂಡದ ಸಹಾಯಕ ಸಿಬ್ಬಂದಿಯೊಂದಿಗೆ ಸೇರಿ ತಂಡಕ್ಕೆ ಸ್ಪೂರ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಹೊಸ ಸಮವಸ್ತ್ರದೊಂದಿಗೆ ಕಣಕ್ಕಿಳಿಯಲಿದೆ. ಹೊಸ ಸಮವಸ್ತ್ರದೊಂದಿಗೆ ಭಾರತ ತಂಡ ಶುಭಾರಂಭ ಮಾಡುವುದೇ ಎಂಬುದನ್ನು ತಿಳಿಯಲು ಕ್ರಿಕೆಟ್‌ ಪ್ರಿಯರು ಬಹಳಾ ಕಾತುರದಿಂದ ಎದುರು ನೋಡುತ್ತಿದ್ದಾರೆ. ಹಾಗಾದ್ರೆ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?, ಪಂದ್ಯ ನಡೆಯುತ್ತಿರುವುದು ಎಲ್ಲಿ?, ಯಾವುದರಲ್ಲಿ ನೇರಪ್ರಸಾರ? ಎಂಬ ಕುರಿತ ಮಾಹಿತಿ ಇಲ್ಲಿದೆ ನೋಡಿ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯ ದುಬೈನಲ್ಲಿರುವ ಐಸಿಸಿ ಅಕಾಡೆಮಿ ಗ್ರೌಂಡ್​ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ನೇರಪ್ರಸಾರವನ್ನು ಸ್ಟಾರ್ ಸ್ಫೋರ್ಸ್ಟ್​ ನೆಟ್​ವರ್ಕ್ ಮತ್ತು ಹಾಟ್​​ಸ್ಟಾರ್​ನಲ್ಲಿ ವೀಕ್ಷಿಸಬಹುದಾಗಿದೆ.

ICC Mens T20 World Cup: ಟಿ20 ವಿಶ್ವಕಪ್​ನಲ್ಲಿಂದು ಎರಡು ಪಂದ್ಯ: ಐರ್ಲೆಡ್ vs ನೆದರ್ಲೆಂಡ್ಸ್​ ಮತ್ತು ಶ್ರೀಲಂಕಾ vs ನಬಿಯಾ

Bangladesh vs Scotland: ಟಿ20 ವಿಶ್ವಕಪ್ ಆರಂಭದ ಮೊದಲ ದಿನವೇ ಅಚ್ಚರಿ ಫಲಿತಾಂಶ: ಬಾಂಗ್ಲಾಕ್ಕೆ ಶಾಕ್ ನೀಡಿದ ಸ್ಕಾಟ್ಲೆಂಡ್

(T20 World Cup 2021 How to Watch Live Streaming Viart Kohli Team India vs Eion Morgan England Warm-Up Match)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್