
ಟಿ20 ವಿಶ್ವಕಪ್ (T20 World Cup 2021) ಶುರುವಾಗಿದೆ. ಅಕ್ಟೋಬರ್ 17 ರಿಂದ ಚಾಲನೆ ಸಿಕ್ಕಿರುವ ಚುಟುಕು ಕ್ರಿಕೆಟ್ ಕದನದ ಅರ್ಹತಾ ಸುತ್ತಿನ ಪಂದ್ಯಗಳು ಓಮಾನ್ನಲ್ಲಿ ನಡೆಯುತ್ತಿದ್ದರೆ, ಇತ್ತ ಯುಎಇನಲ್ಲಿ ಟೀಮ್ ಇಂಡಿಯಾ (Team India) ಸೇರಿದಂತೆ ಸೂಪರ್ 12 ಹಂತದಲ್ಲಿರುವ ತಂಡಗಳು ಅಭ್ಯಾಸ ಪಂದ್ಯಗಳಲ್ಲಿ ತೊಡಗಿಸಿಕೊಂಡಿದೆ. ಅದರಂತೆ ಭಾರತ ತಂಡವು ಮೊದಲ ಅಭ್ಯಾಸ ಪಂದ್ಯವನ್ನು ಇಂಗ್ಲೆಂಡ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡರು. ಇದೇ ವೇಳೆ ಟೀಮ್ ಕಾಂಬಿನೇಷನ್ ಬಗ್ಗೆ ಮನಬಿಚ್ಚಿ ಮಾತನಾಡಿದರು. ಅದರಲ್ಲೂ ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.
ಈ ಹಿಂದೆ ಇಂಗ್ಲೆಂಡ್ ವಿರುದ್ದದ ಟಿ20 ಸರಣಿ ವೇಳೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಇದೇ ವೇಳೆ ಟಿ20 ವಿಶ್ವಕಪ್ನಲ್ಲೂ ನಾನು ಓಪನರ್ ಆಗಿ ಆಡಲಿದ್ದೇನೆ ಎಂದಿದ್ದರು. ಅದರಂತೆ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಆರ್ಸಿಬಿ ಪರ ಆರಂಭಿಕರಾಗಿ ಆಡಿದ್ದರು. ಹೀಗಾಗಿ ಟಿ20 ವಿಶ್ವಕಪ್ನಲ್ಲೂ ಕೊಹ್ಲಿ ಆರಂಭಿಕರಾಗಿ ಆಡಲಿದ್ದಾರೆ ಎನ್ನಲಾಗಿತ್ತು.
ಇನ್ನೊಂದೆಡೆ ಕೊಹ್ಲಿ ಐಪಿಎಲ್ ವೇಳೆ ಟಿ20 ವಿಶ್ವಕಪ್ ಆರಂಭಿಕನಾಗಿ ನೀನು ಕಣಕ್ಕಿಳಿಯಬೇಕು. ಅದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಆರಂಭಿಸು ಇಶಾನ್ ಕಿಶನ್ಗೆ ಸೂಚಿಸಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡದ ಕೊನೆಯ 2 ಪಂದ್ಯಗಳಲ್ಲಿ ಕಿಶನ್ ಓಪನರ್ ಆಗಿ ಬ್ಯಾಟ್ ಬೀಸಿದ್ದರು. ರಾಜಸ್ತಾನ್ ರಾಯಲ್ಸ್ ವಿರುದ್ದ ಕಿಶನ್ ಕೇವಲ 25 ಎಸೆತಗಳಿಗೆ 50 ರನ್ ಬಾರಿಸಿ ಮಿಂಚಿದರು. ಅಷ್ಟೇ ಅಲ್ಲದೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 32 ಎಸೆತಗಳಿಗೆ 11 ಬೌಂಡರಿ ಮತ್ತು 4 ಸಿಕ್ಸರ್ನೊಂದಿಗೆ 84 ರನ್ ಚಚ್ಚಿದ್ದಾರೆ. ಹೀಗಾಗಿ ಕಿಶನ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಲಿದ್ದಾರೆ ಎನ್ನಲಾಗಿತ್ತು.
ಆದರೆ ಇಡೀ ಟೂರ್ನಿಯಲ್ಲಿ ಅಬ್ಬರಿಸಿ ಬೊಬ್ಬಿರಿಯುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ 13 ಪಂದ್ಯಗಳಿಂದ 626 ರನ್ ಬಾರಿಸಿದ್ದರು. ಇದೇ ಕಾರಣದಿಂದ ಇದೀಗ ವಿರಾಟ್ ಕೊಹ್ಲಿ ಮನಸು ಬದಲಿಸಿದ್ದಾರೆ. ಇಂಗ್ಲೆಂಡ್ ವಿರುದ್ದದ ಅಭ್ಯಾಸ ಪಂದ್ಯದ ವೇಳೆ ಮಾತನಾಡಿದ ಕೊಹ್ಲಿ, ಟಿ20 ವಿಶ್ವಕಪ್ನಲ್ಲಿ ನಾನು 3ನೇ ಕ್ರಮಾಂಕದಲ್ಲಿ ಆಡಲಿದ್ದೇನೆ. ಹಾಗಾಗಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರು ಯಾರು ಎಂಬ ಗೊಂದಲಕ್ಕೆ ತೆರೆಬಿದ್ದಂತಾಗಿದೆ.
ಇದನ್ನೂ ಓದಿ: T20 World Cup 2021: ಕೆಎಲ್ ರಾಹುಲ್ ಆರಂಭಿಕನಲ್ವಾ: ಕೊಹ್ಲಿ ಸಜ್ಜಾಗಿರಲು ಹೇಳಿದ್ದು ಯಾರಿಗೆ?
ಇದನ್ನೂ ಓದಿ:T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು?
ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ
(T20 World Cup 2021: I will be batting at 3 Says Virat Kohli)