AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಕಳಪೆ ಬ್ಯಾಟಿಂಗ್ ಮೂಲಕ ಹೀಗೊಂದು ಹೀನಾಯ ದಾಖಲೆ ಬರೆದ ಟೀಮ್ ಇಂಡಿಯಾ

India vs New Zealand: ಈ ಹೀನಾಯ ದಾಖಲೆಗೆ ನಮೀಬಿಯಾ, ಸ್ಕಾಟ್ಲೆಂಡ್, ಸೇರಿದಂತೆ ಅರ್ಹತಾ ಸುತ್ತಿನ ತಂಡಗಳ ಪ್ರದರ್ಶನಗಳನ್ನು ಪರಿಗಣಿಸಲಾಗಿತ್ತು. ಆದರೆ ಈ ಎಲ್ಲಾ ತಂಡಗಳು 7 ರಿಂದ 15 ಓವರ್​ಗಳ ನಡುವೆ ಬೌಂಡರಿ ಬಾರಿಸಿದ್ದವು.

T20 World Cup 2021: ಕಳಪೆ ಬ್ಯಾಟಿಂಗ್ ಮೂಲಕ ಹೀಗೊಂದು ಹೀನಾಯ ದಾಖಲೆ ಬರೆದ ಟೀಮ್ ಇಂಡಿಯಾ
Team India
TV9 Web
| Edited By: |

Updated on: Oct 31, 2021 | 10:29 PM

Share

ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನ (T20 World Cup 2021) 28ನೇ ಪಂದ್ಯದಲ್ಲಿ ಟೀಮ್ ಇಂಡಿಯಾ (India vs New Zealand) ನ್ಯೂಜಿಲೆಂಡ್ ವಿರುದ್ದ ಮುಗ್ಗರಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಬೌಲಿಂಗ್ ಆಯ್ದುಕೊಂಡರು. ಆದರೆ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ (Team India) ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 11 ಆಗಿದ್ದ ವೇಳೆ ಆರಂಭಿಕ ಇಶಾನ್ ಕಿಶನ್ ಔಟಾದರೆ, 18 ರನ್​ಗಳಿಸಿದ ಕೆಎಲ್ ರಾಹುಲ್ ಕೂಡ ವಿಕೆಟ್ ಒಪ್ಪಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ 14 ರನ್ ಬಾರಿಸಿ ಹೊರನಡೆದರೆ, ನಾಯಕ ವಿರಾಟ್ ಕೊಹ್ಲಿ 9 ರನ್​ಗಳಿಸಿ ನಿರ್ಗಮಿಸಿದರು.

ಅಷ್ಟರಲ್ಲಾಗಲೇ ಟೀಮ್ ಇಂಡಿಯಾ 48 ರನ್​ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇತ್ತ ಆರಂಭಿಕ ಆಘಾತಕ್ಕೆ ಸಿಲುಕಿದ್ದ ಟೀಮ್ ಇಂಡಿಯಾ ಎಚ್ಚರಿಕೆಯ ಆಟಕ್ಕೆ ಒತ್ತು ನೀಡಿತು. ಪರಿಣಾಮ 7 ರಿಂದ 15 ಓವರ್​ಗಳ ನಡುವೆ ಟೀಮ್ ಇಂಡಿಯಾ ಬ್ಯಾಟರ್​ಗಳಿಂದ ಒಂದೇ ಒಂದು ಬೌಂಡರಿ ಬಂದಿರಲಿಲ್ಲ. ಇದರೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ 7 ರಿಂದ 15 ಓವರ್​ಗಳ ನಡುವೆ ಒಂದೇ ಒಂದು ಫೋರ್ ಅಥವಾ ಸಿಕ್ಸ್ ಬಾರಿಸಿದ ತಂಡ ಎಂಬ ಅಪಖ್ಯಾತಿ ಟೀಮ್ ಇಂಡಿಯಾ ಪಾಲಾಯಿತು.

ಈ ಹೀನಾಯ ದಾಖಲೆಗೆ ನಮೀಬಿಯಾ, ಸ್ಕಾಟ್ಲೆಂಡ್, ಸೇರಿದಂತೆ ಅರ್ಹತಾ ಸುತ್ತಿನ ತಂಡಗಳ ಪ್ರದರ್ಶನಗಳನ್ನು ಪರಿಗಣಿಸಲಾಗಿತ್ತು. ಆದರೆ ಈ ಎಲ್ಲಾ ತಂಡಗಳು 7 ರಿಂದ 15 ಓವರ್​ಗಳ ನಡುವೆ ಬೌಂಡರಿ ಬಾರಿಸಿದ್ದವು. ಇದಾಗ್ಯೂ ಭಾರತ ತಂಡವು ಪವರ್​ಪ್ಲೇ ಬಳಿಕ ಮತ್ತೆ ಬೌಂಡರಿ ಬಾರಿಸಿದ್ದು 16ನೇ ಓವರ್​ನಲ್ಲಿ. ಇನ್ನು 7 ರಿಂದ 15 ಓವರ್​ಗಳ ನಡುವೆ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು ಕೇವಲ 38 ರನ್​ ರನ್ ಮಾತ್ರ ಕಲೆಹಾಕಲು ಶಕ್ತರಾಗಿದ್ದರು. ಈ ವೇಳೆ ಬೌಂಡರಿ ಬಾರಿಸಲಾಗದೇ ಟಿ20 ವಿಶ್ವಕಪ್​ 2021ರ ಕಳಪೆ ದಾಖಲೆಯೊಂದು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿತು.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(T20 World Cup 2021:  India Not hit a boundary between overs 7 and 15)

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು