T20 World Cup 2021: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

India vs New Zealand Predicted Playing 11: ಈ ಪಂದ್ಯ ಕೂಡ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲೇ ನಡೆಯಲಿದೆ. ಇಲ್ಲಿ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿದೆ. ಒಂದು ವೇಳೆ ವಿರಾಟ್ ಕೊಹ್ಲಿ ಟಾಸ್ ವಿಫಲವಾದರೆ, ಅನುಭವಿ ಬೌಲರುಗಳ ಅವಶ್ಯಕತೆಯಿದೆ.

T20 World Cup 2021: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 30, 2021 | 10:34 PM

ಭಾನುವಾರ T20 World Cup 2021 ನಲ್ಲಿ ಭಾರತ-ನ್ಯೂಜಿಲೆಂಡ್ (India vs New Zealand) ತಂಡಗಳು ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿಯೇ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲಿದೆ. ಇದಾಗ್ಯೂ ಭಾರತ ತಂಡದಲ್ಲಿ (India Playing 11) ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ.

ಏಕೆಂದರೆ ಹಾರ್ದಿಕ್ ಪಾಂಡ್ಯ ನೆಟ್ಸ್​ನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಹೀಗಾಗಿ ಅವರನ್ನೇ ಕಣಕ್ಕಿಳಿಸಬಹುದು. ಹೀಗಾಗಿ ಶಾರ್ದೂಲ್ ಠಾಕೂರ್​ಗೆ ಸ್ಥಾನ ಸಿಗೋದು ಅನುಮಾನ. ಒಂದು ವೇಳೆ ಶಾರ್ದೂಲ್​ಗೆ ಅವಕಾಶ ನೀಡಲು ನಿರ್ಧರಿಸಿದರೆ ಭುವನೇಶ್ವರ್​ ಕುಮಾರ್ ಅವರನ್ನು ಕೈ ಬಿಡಬಹುದು. ಆ ಮೂಲಕ ಶಾರ್ದೂಲ್​ಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡುವ ಸಾಧ್ಯತೆ ಕೂಡ ಇದೆ.

ಇನ್ನು ಬದಲಾವಣೆ ಮಾಡಿದ್ರೆ ಸ್ಪಿನ್ನರ್ ಸ್ಥಾನದಿಂದ ವರುಣ್ ಚಕ್ರವರ್ತಿಯನ್ನು ಕೈ ಬಿಡಬಹುದು. ಅವರ ಬದಲಿಗೆ ಅಶ್ವಿನ್​ಗೆ ಚಾನ್ಸ್​ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಅನುಭವಿ ಸ್ಪಿನ್ನರ್​ ಆಗಿರುವ ಅಶ್ವಿನ್ ಇಬ್ಬನಿ ಇದ್ದರೂ ಉತ್ತಮವಾಗಿ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಅವರನ್ನೇ ಆಡಿಸಬಹುದು.

ಏಕೆಂದರೆ ಈ ಪಂದ್ಯ ಕೂಡ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲೇ ನಡೆಯಲಿದೆ. ಇಲ್ಲಿ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿದೆ. ಒಂದು ವೇಳೆ ವಿರಾಟ್ ಕೊಹ್ಲಿ ಟಾಸ್ ವಿಫಲವಾದರೆ, ಅನುಭವಿ ಬೌಲರುಗಳ ಅವಶ್ಯಕತೆಯಿದೆ. ಹೀಗಾಗಿ ಪಾಕ್ ವಿರುದ್ದದ ಪಂದ್ಯದಲ್ಲಿ ಯಶಸ್ವಿಯಾಗದ ವರುಣ್ ಚಕ್ರವರ್ತಿಯನ್ನು ಕೈಬಿಟ್ಟು ಅವರ ಸ್ಥಾನದಲ್ಲಿ ಅಶ್ವಿನ್ ಅವರನ್ನು ಕಣಕ್ಕಿಳಿಸಬಹುದು. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ , ಅಶ್ವಿನ್ , ಜಸ್​ಪ್ರೀತ್​ ಬುಮ್ರಾ.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(T20 World Cup 2021 India vs New Zealand Predicted Playing 11)

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ