India vs Pakistan: 2007ರ ಟಿ20 ವಿಶ್ವಕಪ್ ಫೈನಲ್ ಆಡಿದ್ದ ಇಬ್ಬರು ಆಟಗಾರರ ಮುಖಾಮುಖಿ

T20 World Cup 2021, IND vs PAK: ಈ ರೋಚಕ ಪಂದ್ಯದಲ್ಲಿ ಭಾರತವು 5 ರನ್​ಗಳಿಂದ ಜಯಗಳಿಸುವ ಮೂಲಕ ಚೊಚ್ಚಲ ಟಿ20 ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು. ಈ ರೋಚಕ ಕದನ ನಡೆದು 14 ವರ್ಷಗಳು ಕಳೆದಿವೆ.

India vs Pakistan: 2007ರ ಟಿ20 ವಿಶ್ವಕಪ್ ಫೈನಲ್ ಆಡಿದ್ದ ಇಬ್ಬರು ಆಟಗಾರರ ಮುಖಾಮುಖಿ
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 24, 2021 | 2:25 PM

T20 World Cup 2021: ಭಾರತ ಮತ್ತು ಪಾಕಿಸ್ತಾನ ತಂಡ (India vs Pakistan) ಮತ್ತೊಮ್ಮೆ T20 ವಿಶ್ವಕಪ್ ಮೂಲಕಮ ಮುಖಾಮುಖಿಯಾಗುತ್ತಿದೆ.ಸೆಪ್ಟೆಂಬರ್ 14, 2007 ರಂದು ನಡೆದ ಟಿ20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡವು ಮೊದಲ ಬಾರಿಗೆ ಮುಖಾಮುಖಿಯಾಗಿತ್ತು. ಆ ಪಂದ್ಯವು ಟೈಯಾದ ಕಾರಣ ಬಾಲ್ ಔಟ್ ನಡೆಸಲಾಗಿತ್ತು. ಇದರಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಮೊದಲ ಬಾರಿಗೆ ಟಿ20ಯಲ್ಲಿ ಪಾಕ್ ತಂಡವನ್ನು ಮಣಿಸಿತ್ತು. ಆ ಬಳಿಕ ಅದೇ ವಿಶ್ವಕಪ್​ನಲ್ಲಿ ಉಭಯ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಿತ್ತು. ಕೊನೆಯ ಎಸೆತದವರೆಗೆ ಸಾಗಿದ್ದ ಈ ರೋಚಕ ಪಂದ್ಯದಲ್ಲಿ ಭಾರತವು 5 ರನ್​ಗಳಿಂದ ಜಯಗಳಿಸುವ ಮೂಲಕ ಚೊಚ್ಚಲ ಟಿ20 ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು. ಈ ರೋಚಕ ಕದನ ನಡೆದು 14 ವರ್ಷಗಳು ಕಳೆದಿವೆ. ಆದರೆ ಅಂದು ತಂಡದಲ್ಲಿದ್ದ ಇಬ್ಬರು ಆಟಗಾರರು ಈ ಬಾರಿ ಕೂಡ ತಂಡದಲ್ಲಿರುವುದು ವಿಶೇಷ.

ಹೌದು, ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹಾಗೂ ಪಾಕ್ ತಂಡ ಆಲ್​ರೌಂಡರ್ ಶೊಯೇಬ್ ಮಲಿಕ್ 2007 ರ ವಿಶ್ವಕಪ್​ ಫೈನಲ್​ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ 14 ವರ್ಷಗಳ ಬಳಿಕ ಈ ಇಬ್ಬರು ಆಟಗಾರರು ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲೂ ಮುಖಾಮುಖಿಯಾಗಲಿದ್ದಾರೆ.

2007ರ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಕ್ವಾರ್ಟರ್ ಫೈನಲ್‌ನಲ್ಲಿ ಅಜೇಯ 50 ರನ್ ಗಳಿಸಿದ್ದರು. ಹಾಗೆಯೇ ಪಾಕಿಸ್ತಾನದ ವಿರುದ್ಧದ ಫೈನಲ್‌ನಲ್ಲಿ 16 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ ಭಾರತದ ಐತಿಹಾಸಿಕ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.

ಇನ್ನು ಶೋಯೆಬ್ ಮಲಿಕ್ ಸ್ಕಾಟ್ಲೆಂಡ್ ವಿರುದ್ಧ 11 ರನ್, ಭಾರತದ ವಿರುದ್ಧ 20 ರನ್, ಶ್ರೀಲಂಕಾ ವಿರುದ್ಧ ಸೂಪರ್ 8 ಪಂದ್ಯದಲ್ಲಿ 31 ಎಸೆತಗಳಲ್ಲಿ 57 ರನ್, ಆಸ್ಟ್ರೇಲಿಯಾ ವಿರುದ್ಧ ಅಜೇಯ 52, ಬಾಂಗ್ಲಾದೇಶ ವಿರುದ್ಧ 15 ರನ್‌ಗಳಿಗೆ 2 ವಿಕೆಟ್, ನ್ಯೂಜಿಲೆಂಡ್ ವಿರುದ್ಧ 26 ಮತ್ತು ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ 8 ರನ್ ಗಳಿಸಿದ್ದರು. ಅಷ್ಟೇ ಅಲ್ಲದೆ ಅಂದು ಪಾಕಿಸ್ತಾನ್ ತಂಡವನ್ನು ಮುನ್ನಡೆಸಿದ್ದು ಶೊಯೇಬ್ ಮಲಿಕ್ ಎಂಬುದು ವಿಶೇಷ.

ಇದೀಗ 14 ವರ್ಷಗಳ ಬಳಿಕ ರೋಹಿತ್ ಶರ್ಮಾ ಉಪನಾಯಕನಾಗಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡರೆ, ಅಂದು ನಾಯಕರಾಗಿದ್ದ ಶೊಯೇಬ್ ಮಲಿಕ್ ಕೇವಲ ಆಟಗಾರನಾಗಿ ಪಾಕಿಸ್ತಾನ್​ ತಂಡದಲ್ಲಿ ಆಡುತ್ತಿರುವುದು ವಿಶೇಷ.

ಇದನ್ನೂ ಓದಿ: India vs Pakistan, T20 World cup 2021: ಒಂದು ದಿನ ಮೊದಲೇ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್

ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(T20 World Cup 2021: only 2 player in current team from 2007 t20 world cup ind vs pak)

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು