T20 World Cup 2021: ಟೀಮ್ ಇಂಡಿಯಾ ಸೆಮಿಫೈನಲ್ ಸಮೀಕರಣ

India Semi Final Scenario: ಒಂದು ವೇಳೆ ನೆಟ್​ ರನ್​ ರೇಟ್ ಮೂಲಕ ಸೆಮಿಫೈನಲ್ ಅವಕಾಶ ಪಡೆದರೆ, ಟೀಮ್ ಇಂಡಿಯಾಗೆ ಹೆಚ್ಚಿನ ಚಾನ್ಸ್​ ಇರಲಿದೆ. ಏಕೆಂದರೆ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ಮತ್ತು ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ 1.619 ನೆಟ್ ರನ್ ರೇಟ್ ಹೊಂದಿದೆ.

T20 World Cup 2021: ಟೀಮ್ ಇಂಡಿಯಾ ಸೆಮಿಫೈನಲ್ ಸಮೀಕರಣ
T20 World Cup 2021
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 07, 2021 | 2:50 PM

ಟಿ20 ವಿಶ್ವಕಪ್ 2021 ಅಂತಿಮ ಹಂತಕ್ಕೆ ತಲುಪಿದೆ. ಸೋಮವಾರ, ಲೀಗ್ ಹಂತದ ಕೊನೆಯ ಪಂದ್ಯ ಭಾರತ ಮತ್ತು ನಮೀಬಿಯಾ ನಡುವೆ ನಡೆಯಲಿದೆ (IND vs NAM T20 World cup 2021). ಆದರೆ ಆ ಪಂದ್ಯವು ಮಹತ್ವ ಪಡೆಯಬೇಕಿದ್ದರೆ, 40ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆಲ್ಲಬೇಕು. ಇಲ್ಲದಿದ್ದರೆ ಟೀಮ್ ಇಂಡಿಯಾ ಪಾಲಿನ ಕೊನೆಯ ಪಂದ್ಯ ಔಪಚಾರಿಕವಾಗಲಿದೆ. ಒಂದು ವೇಳೆ ಅಫ್ಘಾನಿಸ್ತಾನ್ ಗೆದ್ದರೆ ಭಾರತದ ಸೆಮಿಫೈನಲ್‌ ಆಸೆ ಜೀವಂತವಿರಲಿದೆ. ಇದಾಗ್ಯೂ ನ್ಯೂಜಿಲೆಂಡ್ ಅಫ್ಘಾನ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾ ಕೊನೆಯ ಪಂದ್ಯವಾಡುವ ಮೊದಲೇ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ. ಹೀಗಾಗಿ ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.

ಈಗಾಗಲೇ 3 ತಂಡಗಳು ಸೆಮಿಫೈನಲ್ ಪ್ರವೇಶಿಸಿದ್ದು, ಇದೀಗ 4ನೇ ತಂಡ ಯಾವುದೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಗ್ರೂಪ್ 1 ರಿಂದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಗ್ರೂಪ್-2 ನಲ್ಲಿ ಎರಡನೇ ಸ್ಥಾನಕ್ಕಾಗಿ ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ಭಾರತದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇಂದು ನಡೆಯಲಿರುವ ಅಫ್ಘಾನ್ ಹಾಗೂ ನ್ಯೂಜಿಲೆಂಡ್ ತಂಡದ ಫಲಿತಾಂಶದ ಮೇಲೆ ಟೀಮ್ ಇಂಡಿಯಾ ಸೆಮಿಫೈನಲ್ ಹಾದಿ ನಿರ್ಧಾರವಾಗಲಿದೆ.

ಒಂದು ವೇಳೆ ನೆಟ್​ ರನ್​ ರೇಟ್ ಮೂಲಕ ಸೆಮಿಫೈನಲ್ ಅವಕಾಶ ಪಡೆದರೆ, ಟೀಮ್ ಇಂಡಿಯಾಗೆ ಹೆಚ್ಚಿನ ಚಾನ್ಸ್​ ಇರಲಿದೆ. ಏಕೆಂದರೆ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ಮತ್ತು ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ 1.619 ನೆಟ್ ರನ್ ರೇಟ್ ಹೊಂದಿದೆ. ಮತ್ತೊಂದೆಡೆ ಅಫ್ಘಾನಿಸ್ತಾನ್ 1.481 ಮತ್ತು ನ್ಯೂಜಿಲೆಂಡ್‌ 1.277 ನೆಟ್ ರನ್​ ರೇಟ್ ಹೊಂದಿದೆ. ಒಂದು ವೇಳೆ ಇಂದು ಅಫ್ಘಾನಿಸ್ತಾನ್ ಗೆದ್ದು ನೆಟ್​ ರನ್​ ರೇಟ್ ಹೆಚ್ಚಿಸಿಕೊಂಡರೂ ಅಂತಿಮ ಪಂದ್ಯದಲ್ಲಿ ನಮೀಬಿಯಾ ವಿರುದ್ದ ನೆಟ್​ ರನ್​ ರೇಟ್ ಟಾರ್ಗೆಟ್ ಮಾಡಿ ಟೀಮ್ ಇಂಡಿಯಾ ಆಡಲಿದೆ. ಇದರಿಂದ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಭಾರತ ತಂಡಕ್ಕಿರಲಿದೆ.

ಟೀಮ್ ಇಂಡಿಯಾ ಸೆಮಿಫೈನಲ್ ಸಮೀಕರಣಗಳು: – ಭಾರತದ ಸೆಮಿಫೈನಲ್ ಆಸೆ ಜೀವಂತವಿರಬೇಕಾದರೆ, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆಲ್ಲಬೇಕು. – ಒಂದು ವೇಳೆ ಅಫ್ಘಾನಿಸ್ತಾನ್ ಗೆದ್ದರೆ ಭಾರತ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು ದೊಡ್ಡ ಅಂತರದಿಂದ ಸೋಲಿಸಬೇಕಾಗುತ್ತದೆ. – ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿದರೆ, ಭಾರತ ಹಾಗೂ ಅಫ್ಘಾನಿಸ್ತಾನ್ ಟೂರ್ನಿಯಿಂದ ಹೊರಬೀಳಲಿದೆ. ಏಕೆಂದರೆ ನ್ಯೂಜಿಲೆಂಡ್ 5 ಪಂದ್ಯಗಳಲ್ಲಿ 8 ಅಂಕಗಳನ್ನು ಪಡೆದು ನೇರವಾಗಿ ಸೆಮಿಫೈನಲ್​ಗೇರಲಿದೆ. ಇದಾದ ಬಳಿಕ ಭಾರತ ತಂಡ ನಮೀಬಿಯಾವನ್ನು ಸೋಲಿಸಿದರೂ ಕೇವಲ 6 ಅಂಕಗಳನ್ನು ಮಾತ್ರ ಪಡೆಯಲಿದೆ. – ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ, 2 ತಂಡಗಳ ಪಾಯಿಂಟ್ 6 ಆಗಲಿದೆ. ಇತ್ತ ಭಾರತ ನಮೀಬಿಯಾ ವಿರುದ್ದ ಗೆದ್ದರೆ 6 ಪಾಯಿಂಟ್ ಹೊಂದಲಿದೆ. ಇಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದರೆ ಅಫ್ಘಾನಿಸ್ತಾನ್ ಹಾಗೂ ನ್ಯೂಜಿಲೆಂಡ್ ಅನ್ನು ನೆಟ್​ ರನ್​ ರೇಟ್ ಮೂಲಕ ಹಿಂದಿಕ್ಕಿ ಸುಲಭವಾಗಿ ಸೆಮಿಫೈನಲ್​ ಪ್ರವೇಶಿಸಬಹುದು.

ಅಫ್ಘಾನಿಸ್ತಾನಕ್ಕೂ ಅವಕಾಶವಿದೆ: ಒಂದು ವೇಳೆ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಭರ್ಜರಿ ಜಯ ಸಾಧಿಸಿದೆ ನೆಟ್​ ರನ್​ ರೇಟ್​ ಹೆಚ್ಚಳದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಲಿದೆ. ಇದರಿಂದ ಟೀಮ್ ಇಂಡಿಯಾ ನಮೀಬಿಯಾ ವಿರುದ್ದ ನೆಟ್​ ರನ್​ ರೇಟ್ ಟಾರ್ಗೆಟ್​ನೊಂದಿಗೆ ಆಡಬೇಕಾಗುತ್ತದೆ. ಒಂದು ವೇಳೆ ಟೀಮ್ ಇಂಡಿಯಾ ನಮೀಬಿಯಾ ವಿರುದ್ದ ಗೆದ್ದರೂ, ಅಫ್ಘಾನಿಸ್ತಾನ್​ಗಿಂತ ಕಡಿಮೆ ನೆಟ್​ ರನ್​ ರೇಟ್ ಹೊಂದಿದ್ದರೆ ಅಫ್ಘಾನ್ ತಂಡ ಸೆಮಿಫೈನಲ್​ ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಅಫ್ಘಾನಿಸ್ತಾನ್ ಗೆಲ್ಲಬೇಕು, ಆದರೆ ಭರ್ಜರಿ ಜಯ ಸಾಧಿಸಬಾರದು.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(T20 World Cup 2021: Semi-final Qualification Scenarios for India Explained)

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ