T20 World Cup 2021: ಟೀಮ್ ಇಂಡಿಯಾದಲ್ಲಿ ಎರಡು ಗುಂಪು: ಮಾಜಿ ಕ್ರಿಕೆಟಿಗನ ಗಂಭೀರ ಆರೋಪ

Team India: ಈ ಎಲ್ಲಾ ಕಾರಣಗಳಿಂದಾಗಿಯೇ ನಾನು ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳುತ್ತಿರುವುದು. ಇಲ್ಲಿ ಒಂದಷ್ಟು ಆಟಗಾರರು ಕೊಹ್ಲಿ ಪರವಾಗಿದ್ದರೆ, ಮತ್ತೊಂದಷ್ಟು ಮಂದಿ ಕೊಹ್ಲಿ ವಿರುದ್ದವಾಗಿದ್ದಾರೆ.

T20 World Cup 2021: ಟೀಮ್ ಇಂಡಿಯಾದಲ್ಲಿ ಎರಡು ಗುಂಪು: ಮಾಜಿ ಕ್ರಿಕೆಟಿಗನ ಗಂಭೀರ ಆರೋಪ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 03, 2021 | 5:46 PM

ಟಿ20 ಕ್ರಿಕೆಟ್​ನ ಬಲಿಷ್ಠ ತಂಡ ಎನಿಸಿಕೊಂಡಿದ್ದ ಟೀಮ್ ಇಂಡಿಯಾ (Team India) ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ (T20 World Cup 2021) ಆಡಿದ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಅದರಲ್ಲೂ ಪಾಕಿಸ್ತಾನ್ ವಿರುದ್ದ ಹೀನಾಯ ಸೋಲನುಭವಿಸಿದರೆ, ನ್ಯೂಜಿಲೆಂಡ್ ವಿರುದ್ದ ನೀರಸ ಪ್ರದರ್ಶನ ನೀಡಿ ಸೋಲೊಪ್ಪಿಕೊಂಡಿತು. ಭಾರತ ತಂಡದ ಮೊದಲೆರೆಡು ಪಂದ್ಯಗಳ ಪ್ರದರ್ಶನಗಳ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿತ್ತು. ಇದೀಗ ಟೀಮ್ ಇಂಡಿಯಾ ಸೋಲಿಗೆ ತಂಡದಲ್ಲಿರುವ ಗುಂಪುಗಾರಿಕೆ ಕಾರಣ ಎಂದಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಶೊಯೇಬ್ ಅಖ್ತರ್ (Shoaib Akhtar).

ಭಾರತ ತಂಡದ ಪ್ರಸ್ತುತ ಪ್ರದರ್ಶನ ನೋಡಿದರೆ, ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟ. ಇಲ್ಲಿ ಒಂದು ಗುಂಪು ಕೊಹ್ಲಿ ಪರವಾಗಿದ್ದರೆ, ಮತ್ತೊಂದು ಗುಂಪು ಕೊಹ್ಲಿ ವಿರುದ್ದವಾಗಿದೆ. ಹೀಗಾಗಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದೆ ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ ಟೀಮ್ ಇಂಡಿಯಾ ಇಬ್ಭಾಗವಾಗಿದೆ. ತಂಡದಲ್ಲಿ ಈ ರೀತಿಯಾಗಿ ಯಾಕೆ ನಡೆಯುತ್ತಿದೆ ನನಗೆ ತಿಳಿದಿಲ್ಲ. ಬಹುಶಃ ಇದು ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲಿ ಕೊನೆಯ ಟಿ20 ವಿಶ್ವಕಪ್. ಅವರು ಕೆಲ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿರಬಹುದು. ಆದರೆ ಅವರು ಶ್ರೇಷ್ಠ ಕ್ರಿಕೆಟಿಗ. ಹೀಗಾಗಿ ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಅಖ್ತರ್ ತಿಳಿಸಿದರು.

ಟೀಮ್ ಇಂಡಿಯಾ ನ್ಯೂಜಿಲೆಂಡ್​ ವಿರುದ್ದ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ದಾರೆ. ವಿರಾಟ್ ಕೊಹ್ಲಿ ಟಾಸ್ ಸೋಲುತ್ತಿದ್ದಂತೆ, ಎಲ್ಲರೂ ತಲೆ ತಗ್ಗಿಸಿದ್ದಾರೆ. ಆ ಹೊತ್ತಿಗೆ ಭಾರತ ತಂಡ ಟಾಸ್ ಮಾತ್ರ ಸೋತಿದ್ದೀರಿ. ಇಡೀ ಪಂದ್ಯವನ್ನಲ್ಲ ಎಂಬುದು ಅವರಿಗೆ ತಿಳಿದಿಲ್ಲವೇ. ಇದಾಗ್ಯೂ ಟೀಮ್ ಇಂಡಿಯಾ ಯಾವುದೇ ಗೇಮ್‌ಪ್ಲಾನ್ ಹೊಂದಿರಲಿಲ್ಲ ಎಂದು ಅಖ್ತರ್ ಹೇಳಿದರು.

ಈ ಎಲ್ಲಾ ಕಾರಣಗಳಿಂದಾಗಿಯೇ ನಾನು ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳುತ್ತಿರುವುದು. ಇಲ್ಲಿ ಒಂದಷ್ಟು ಆಟಗಾರರು ಕೊಹ್ಲಿ ಪರವಾಗಿದ್ದರೆ, ಮತ್ತೊಂದಷ್ಟು ಮಂದಿ ಕೊಹ್ಲಿ ವಿರುದ್ದವಾಗಿದ್ದಾರೆ. ಇದುವೇ ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ ಎಂದು ಶೊಯೇಬ್ ಅಖ್ತರ್ ನೇರವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

(T20 World Cup 2021: Team India divided into two groups, says Shoaib Akhtar)

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ