ಟಿ20 ವಿಶ್ವಕಪ್ನಲ್ಲಿ (T20 World Cup 2021) ಟೀಮ್ ಇಂಡಿಯಾ (Team India) ಉತ್ತಮ ಆರಂಭ ಪಡೆದಿಲ್ಲ. ಮೊದಲ ಪಂದ್ಯದಲ್ಲಿ ಸೋತಿರುವ ಭಾರತ ಇದೀಗ 2ನೇ ಪಂದ್ಯಕ್ಕಾಗಿ ಭರ್ಜರಿ ತಯಾರಿಯಲ್ಲಿದೆ. ಅದರಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) ನೆಟ್ಸ್ನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ನೆಟ್ ಪ್ರಾಕ್ಟೀಸ್ನಲ್ಲಿ ಬೆವರಿಳಿಸುತ್ತಿರುವ ಕೊಹ್ಲಿ, ಮುಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುವ ಇರಾದೆಯಲ್ಲಿದ್ದಾರೆ.
ಈ ಭರ್ಜರಿ ತಾಲೀಮಿನ ವಿಡಿಯೋವನ್ನು ಐಸಿಸಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ವಿರಾಟ್ ನೆಟ್ ಅಭ್ಯಾಸದ ಸಮಯದಲ್ಲಿ ಭರ್ಜರಿ ಹೊಡೆತಗಳ ಪ್ರಾಕ್ಟೀಸ್ ನಡೆಸುತ್ತಿದ್ದರೆ, ಮತ್ತೊಂದೆಡೆ ಯುವ ಕ್ರಿಕೆಟಿಗ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರು ಕೊಹ್ಲಿಯ ಬ್ಯಾಟಿಂಗ್ ಅನ್ನು ವೀಕ್ಷಿಸುತ್ತಾ ಕೂತಿರುವುದು ಕಾಣಬಹುದು. ಅದರಲ್ಲೂ ಕೆಲ ಹೊಡೆತಗಳನ್ನು ನೋಡಿ ಇಶಾನ್ ಕಿಶನ್ ಮೂಕವಿಸ್ಮಿತರಾಗಿ ವಾಟ್ ಎ ಶಾಟ್ ಎಂದು ಹುರಿದುಂಬಿಸುತ್ತಿರುವುದು ಕಾಣಬಹುದಾಗಿದೆ.
ವಿರಾಟ್ ಕೊಹ್ಲಿಯ ನೆಟ್ ಅಭ್ಯಾಸದ ಈ ವೀಡಿಯೊ ಇದೀಗ ವೈರಲ್ ಆಗಿದ್ದು, ಕೊಹ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನ ಪ್ರಾಕ್ಟೀಸ್ ನೋಡಿ ಫಿದಾ ಆಗಿದ್ದಾರೆ. ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಏಕಾಂಗಿಯಾಗಿ ಭರ್ಜರಿ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, 49 ಎಸೆತಗಳಲ್ಲಿ 57 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸ್ ಸಿಡಿಸಿದ್ದರು. ಇದೀಗ ಭರ್ಜರಿ ಅಭ್ಯಾಸದಲ್ಲಿ ನಿರತಾಗಿರುವ ಕೊಹ್ಲಿ ಅಕ್ಟೋಬರ್ 31 ರಂದು ನ್ಯೂಜಿಲೆಂಡ್ ವಿರುದ್ದ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ: T20 World Cup 2021: ನ್ಯೂಜಿಲೆಂಡ್ ತಂಡಕ್ಕೆ ಬಿಗ್ ಶಾಕ್: ವಿಶ್ವಕಪ್ನಿಂದ ಪ್ರಮುಖ ಆಟಗಾರ ಹೊರಕ್ಕೆ
ಇದನ್ನೂ ಓದಿ: T20 World Cup 2021: ಟಿ20 ರ್ಯಾಂಕಿಂಗ್ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?
ಇದನ್ನೂ ಓದಿ: T20 World Cup 2021: 90 ಕೆ.ಜಿ ವಿಕೆಟ್ ಕೀಪರ್: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಶಹಝಾದ್
(T20 World Cup 2021: Virat Kohli batting in nets, Shreyas Iyer and Ishan Kishan mesmerized VIDEO)
Published On - 9:15 pm, Thu, 28 October 21