T20 World Cup: ಭಾರತ- ಇಂಗ್ಲೆಂಡ್ ಟೆಸ್ಟ್​ ನಡುವೆಯೇ ಟಿ-20 ವಿಶ್ವಕಪ್ ಕುರಿತು ಗಂಗೂಲಿ-ಕೊಹ್ಲಿ ಚರ್ಚೆ

ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಮುಂಬರಲಿರುವ ಟಿ-20 ವಿಶ್ವಕಪ್ ಟೂರ್ನಿಯ ಕುರಿತು ಚರ್ಚೆ ನಡೆಸಿದ್ದಾರೆ.

T20 World Cup: ಭಾರತ- ಇಂಗ್ಲೆಂಡ್ ಟೆಸ್ಟ್​ ನಡುವೆಯೇ ಟಿ-20 ವಿಶ್ವಕಪ್ ಕುರಿತು ಗಂಗೂಲಿ-ಕೊಹ್ಲಿ ಚರ್ಚೆ
ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ(ಸಾಂದರ್ಭಿಕ ಚಿತ್ರ)
Follow us
TV9 Web
| Updated By: Vinay Bhat

Updated on: Aug 21, 2021 | 10:26 AM

ಬಹುನಿರೀಕ್ಷಿತ ಐಸಿಸಿ ಟಿ-20 ವಿಶ್ವಕಪ್ (T20 World Cup) ಟೂರ್ನಿಯ ಆರಂಭಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಮೊನ್ನೆಯಷ್ಟೆ ಐಸಿಸಿ ವೇಳಾಪಟ್ಟಿಯನ್ನು ಕೂಡ ಪ್ರಕಟಮಾಡಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಸೇರಿದಂತೆ ಕೆಲ ತಂಡಗಳು ಈಗಾಗಲೇ ಆಟಗಾರರ ಹೆಸರನ್ನು ಕೂಡ ಬಿಡುಗಡೆ ಮಾಡಿದೆ. ಟೀಮ್ ಇಂಡಿಯಾ (Team India) ಸೆಪ್ಟೆಂಬರ್ ಮೊದಲ ವಾರದಲ್ಲಿ 15 ಮಂದಿ ಸದಸ್ಯರ ಹೆಸರನ್ನು ಬಹಿರಂಗ ಪಡಿಸಲಿದೆ. ಹೀಗಿರುವಾಗ ಟಿ-20 ವಿಶ್ವಕಪ್ ಕುರಿತ ಚರ್ಚೆಗಳು ಶುರು ಆಗಿದೆ. ಭಾರತ (India) ಕೂಡ ಮಾಸ್ಟರ್ ಪ್ಲಾನ್ ಸಿದ್ದ ಪಡಿಸುತ್ತಿದ್ದು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಡೆವೆಯೇ ಯೋಜನೆ ಹಾಕಿಕೊಳ್ಳುತ್ತಿದೆ.

ಹೌದು, ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕಾದುಕುಳಿತಿರುವ ಟಿ-20 ವಿಶ್ವಕಪ್ ಟೂರ್ನಿ ಆರಂಭವಾಗಲು ಇನ್ನೆರಡು ತಿಂಗಳು ಮಾತ್ರ ಸಮಯವಿದೆ. ಇದರ ನಡುವೆ ಟೀಮ್ ಇಂಡಿಯಾ ಯಾವುದೇ ದೇಶದ ಜೊತೆ ಕೂಡ ಟಿ-20 ಸರಣಿಯಿಲ್ಲ. ಬದಲಾಗಿ ಐಪಿಎಲ್ ಟೂರ್ನಿಯಲ್ಲಿ ಆಟವನ್ನು ಆಡಲಿದ್ದು ಇಲ್ಲಿಯೇ ವಿಶ್ವಕಪ್ ಟೂರ್ನಿಗೆ ತರಬೇತಿ ಪಡೆಯಬೇಕಿದೆ.

ಇತ್ತೀಚೆಗಷ್ಟೇ ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಮುಂಬರಲಿರುವ ಟಿ-20 ವಿಶ್ವಕಪ್ ಟೂರ್ನಿಯ ಕುರಿತು ಚರ್ಚೆ ನಡೆಸಿದ್ದಾರೆ.

ಲಾರ್ಡ್ಸ್ ಟೆಸ್ಟ್​ಗೆ ಹಾಜರಿದ್ದ ಗಂಗೂಲಿ, ಈ ವೇಳೆ ಕೆಲ ಸಮಯಗಳ ಕಾಲ ಭೇಟಿಯಾದ ವಿರಾಟ್ ಕೊಹ್ಲಿ  ಜೊತೆ ಮುಂಬರಲಿರುವ ಟಿ-20 ವಿಶ್ವಕಪ್ ಟೂರ್ನಿಗೆ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಮತ್ತು ಯಾವ ರೀತಿಯ ಮಾರ್ಗಸೂಚಿಗಳನ್ನು ತಯಾರಿಸಿಕೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪ್ರಸಕ್ತ 2021ರ ಐಸಿಸಿ ಪುರುಷರ ಟಿ-20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯು ಎರಡು ಹಂತದಲ್ಲಿ ನಡೆಯಲಿದ್ದು, ಮೊದಲನೇ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆದರೆ, ಎರಡನೇ ಸುತ್ತಿನಲ್ಲಿ ಸೂಪರ್‌ 12ರ ಹಂತದ ಪಂದ್ಯಗಳು ಜರುಗಲಿವೆ. ಯುಎಇ ಹಾಗೂ ಒಮನ್‌ನಲ್ಲಿ ಅಕ್ಟೋಬರ್‌ 17ರಿಂದ ಆರಂಭಗೊಂಡು, ನವೆಂಬರ್‌ 14 ರಂದು ದುಬೈನಲ್ಲಿ ಫೈನಲ್‌ ಹಣಾಹಣಿಯ ಮೂಲಕ ಅಂತ್ಯವಾಗಲಿದೆ. ಅಕ್ಟೋಬರ್‌ 24 ರಂದು ಭಾರತ ತಂಡ ಪಾಕಿಸ್ತಾನ ವಿರುದ್ಧ ದುಬೈನಲ್ಲಿ ಕಾದಾಡುವ ಮೂಲಕ ಅಭಿಯಾನ ಆರಂಭಿಸಲಿದೆ.

IPL 2021: ರಿಚರ್ಡ್​​ಸನ್​ ಅಲಭ್ಯ: ಆರ್​ಸಿಬಿ ಆಯ್ಕೆ ಮಾಡಲಿರುವ ಬದಲಿ ಆಟಗಾರ ಯಾರು ಗೊತ್ತಾ?

IPL 2021: ಮೈದಾನಕ್ಕಿಳಿದು ತಂಡದ ಯುವ ಆಟಗಾರರಿಗೆ ಖುದ್ದು ಧೋನಿಯಿಂದಲೇ ಬ್ಯಾಟಿಂಗ್ ಪ್ರ್ಯಾಕ್ಟೀಸ್

(T20 World Cup 2021 Virat Kohli BCCI brass informally chat over roadmap for T20 World Cup)

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ