IND vs PAK, T20 World Cup 2021: ಟೆನ್ಶನ್ ಇದೆಯಾ?: ಫೋಟೋ ಮೂಲಕ ಮಸ್ತ್ ಉತ್ತರ ನೀಡಿದ ಕೊಹ್ಲಿ

India vs Pakistan: ಟಿ20 ವಿಶ್ವಕಪ್‌ನ ಭಾರತ-ಪಾಕ್ 5 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಟೀಮ್ ಇಂಡಿಯಾ ಪಾಕಿಸ್ತಾನವನ್ನು 5 ಬಾರಿ ಕೂಡ ಸೋಲಿಸಿದೆ. ಇನ್ನು ಉಭಯ ತಂಡಗಳು ಟಿ20ಯಲ್ಲಿ ಒಟ್ಟು 8 ಪಂದ್ಯಗನ್ನು ಆಡಿದ್ದು, ಅದರಲ್ಲಿ ಟೀಮ್ ಇಂಡಿಯಾ 7ರಲ್ಲಿ ಗೆದ್ದಿದೆ.

IND vs PAK, T20 World Cup 2021: ಟೆನ್ಶನ್ ಇದೆಯಾ?: ಫೋಟೋ ಮೂಲಕ ಮಸ್ತ್ ಉತ್ತರ ನೀಡಿದ ಕೊಹ್ಲಿ
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 23, 2021 | 3:36 PM

India vs Pakistan, T20 World cup 2021: ಐಸಿಸಿ ಟಿ20 ವಿಶ್ವಕಪ್ 2021ರ ರೋಚಕ ಕದನ ಅಕ್ಟೋಬರ್ 24 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿದೆ. ಹೀಗಾಗಿಯೇ ಉಭಯ ದೇಶಗಳ ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರ ನಡುವೆ ಮಾತು ಸಮರ ಮುಂದುವರೆದಿದೆ. ಅದರಲ್ಲೂ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ (Babar Azam) ಕೆಲ ದಿನಗಳ ಹಿಂದೆಯಷ್ಟೇ ಈ ಬಾರಿ ನಾವೇ ಗೆಲ್ಲಲಿದ್ದೇವೆ ಎಂದು ಸಾರಿದ್ದಾರೆ. ಅಷ್ಟೇ ಅಲ್ಲದೆ ಭಾರತ ಹೆಚ್ಚಿನ ಒತ್ತಡದಲ್ಲಿದೆ. ಹೀಗಾಗಿ ಭಾರತ (Team India) ವಿರುದ್ದ ಗೆದ್ದೇ ಗೆಲ್ಲುತ್ತೇವೆ ಎಂದಿದ್ದಾರೆ.

ಇತ್ತ ಭಾರತ ತಂಡ ಒತ್ತಡದಲ್ಲಿದೆ ಎಂಬ ಪಾಕ್​ ನಾಯಕನ ಹೇಳಿಕೆ ಬೆನ್ನಲ್ಲೇ, ಪಾಕಿಸ್ತಾನದ ಮಾಜಿ ಕ್ರಿಕೆಟರುಗಳು ಕೂಡ ಟೀಮ್ ಇಂಡಿಯಾ ಒತ್ತಡದಲ್ಲಿದೆ ಎಂಬುದಕ್ಕೆ ಧ್ವನಿಗೂಡಿಸಿದ್ದಾರೆ. ಈ ಹೇಳಿಕೆಗಳು ವೈರಲ್ ಆಗುತ್ತಿದ್ದಂತೆ ಇತ್ತ ಸೋಷಿಯಲ್ ಮೀಡಿಯಾ ಮೂಲಕ ವಿರಾಟ್ ಕೊಹ್ಲಿ ಒಂದು ಒಂದೇ ಒಂದು ಪೋಸ್ಟ್ ಮೂಲಕ ಉತ್ತರ ನೀಡಿದ್ದಾರೆ.

ಈ ರೋಚಕ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ತಮ್ಮ ಭಾವಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ  ಭಾನುವಾರ ಮಹತ್ವದ ಪಂದ್ಯವಿದೆ. ನೀವು ನರ್ವಸ್ ಆಗಿದ್ದೀರಿ ಅಲ್ವಾ? ಎಂದು ಕೇಳಿರುವ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಕೊಹ್ಲಿ ರೋನ್​ ಟಿಶರ್ಟ್ ಧರಿಸಿದ ಫೋಟೋ ಹಾಕಿ ಉತ್ತರ ನೀಡಿದ್ದಾರೆ. ಅಂದರೆ ಖಂಡಿತವಾಗಿಯೂ ಇಲ್ಲ ಎನ್ನುವ ಮೂಲಕ ಕೊಹ್ಲಿ ಟೀಮ್ ಇಂಡಿಯಾ ನಾಯಕ ಹಾಗೂ ತಂಡ ಟೆನ್ಶನ್​ನಲ್ಲಿದೆ ಎಂಬ ಹೇಳಿಕೆಗಳಿಗೆ ಒಂದೇ ಒಂದು ಫೋಟೋ ಮೂಲಕ ಉತ್ತರ ನೀಡಿದ್ದಾರೆ. ಅಂದಹಾಗೆ ರೋನ್​ ಎಂಬುದು ವಿರಾಟ್ ಕೊಹ್ಲಿಯ ಲೈಫ್​ಸ್ಟೈಲ್ ಬ್ರಾಂಡ್ ಕೂಡ ಹೌದು. ಈ ಮೂಲಕ ಹೇಳಿಕೆಗಳನ್ನು ನೀಡುವವರಿಗೆ ಉತ್ತರ ಹಾಗೂ ತನ್ನ ಬ್ರಾಂಡ್​ನ ಪ್ರಚಾರ ಎರಡನ್ನೂ ಕೊಹ್ಲಿ ಒಂದೇ ಪೋಸ್ಟ್ ಮೂಲಕ ಮಾಡಿ ಮುಗಿಸಿದ್ದಾರೆ.

ಟಿ20 ವಿಶ್ವಕಪ್‌ನ ಭಾರತ-ಪಾಕ್ 5 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಟೀಮ್ ಇಂಡಿಯಾ ಪಾಕಿಸ್ತಾನವನ್ನು 5 ಬಾರಿ ಕೂಡ ಸೋಲಿಸಿದೆ. ಇನ್ನು ಉಭಯ ತಂಡಗಳು ಟಿ20ಯಲ್ಲಿ ಒಟ್ಟು 8 ಪಂದ್ಯಗನ್ನು ಆಡಿದ್ದು, ಅದರಲ್ಲಿ ಟೀಮ್ ಇಂಡಿಯಾ 7ರಲ್ಲಿ ಗೆದ್ದಿದೆ. ಹೀಗಾಗಿ ಈ ಬಾರಿ ಕೂಡ ಗೆಲ್ಲುವ ಫೇವರೇಟ್ ತಂಡವಾಗಿ ಭಾರತ ಮುಂಚೂಣಿಯಲ್ಲಿದೆ.

ಇದನ್ನೂ ಓದಿ: India vs Pakistan, T20 World cup 2021: ಒಂದು ದಿನ ಮೊದಲೇ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್

ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(T20 World Cup 2021: Virat Kohli’s ‘Big Match’ post sparks hilarious meme)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್