T20 World Cup 2021: ಟಿ20 ವಿಶ್ವಕಪ್ ಗೆಲ್ಲುವ ತಂಡ ಹೆಸರಿಸಿದ ವೀರೇಂದ್ರ ಸೆಹ್ವಾಗ್

| Updated By: ಝಾಹಿರ್ ಯೂಸುಫ್

Updated on: Oct 28, 2021 | 10:31 PM

Virender Sehwag: ಪಾಕಿಸ್ತಾನ್ ವಿರುದ್ದದ ಮೊದಲ ಪಂದ್ಯದ ಸೋಲಿನ ಹೊರತಾಗಿಯೂ ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

T20 World Cup 2021: ಟಿ20 ವಿಶ್ವಕಪ್ ಗೆಲ್ಲುವ ತಂಡ ಹೆಸರಿಸಿದ ವೀರೇಂದ್ರ ಸೆಹ್ವಾಗ್
ವೀರೇಂದ್ರ ಸೆಹ್ವಾಗ್
Follow us on

T20 World Cup 2021: ಟಿ20 ವಿಶ್ವಕಪ್​ ಸೂಪರ್ 12 ಪಂದ್ಯಗಳು ರೋಚಕತೆಯತ್ತ ಸಾಗುತ್ತಿದೆ. ಮೊದಲ ಎರಡು ಪಂದ್ಯಗಳನ್ನು ಗೆದ್ದು ಪಾಕಿಸ್ತಾನ್ ಬಲಿಷ್ಠವಾಗಿ ಮುನ್ನುಗ್ಗುತ್ತಿದ್ದರೆ, ಇತ್ತ ಟೀಮ್ ಇಂಡಿಯಾ ನ್ಯೂಜಿಲೆಂಡ್ (India vs New Zealand) ವಿರುದ್ದ ಗೆಲುವು ದಾಖಲಿಸಿ ಸೆಮಿಫೈನಲ್​ ರೇಸ್​ಗೆ ಎಂಟ್ರಿ ಕೊಡುವ ಇರಾದೆಯಲ್ಲಿದೆ. ಇನ್ನೊಂದೆಡೆ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಗೆಲುವಿನ ಖಾತೆ ತೆರೆದು ಸೆಮಿಫೈನಲ್​ಗೇರುವ ವಿಶ್ವಾಸದಲ್ಲಿದೆ. ಇದಾಗ್ಯೂ ಇನ್ನು ಕೂಡ ಹಲವು ಪಂದ್ಯಗಳು ಬಾಕಿ ಉಳಿದಿದ್ದು, ಹೀಗಾಗಿ ಅಂತಿಮವಾಗಿ ಯಾವ ತಂಡ ಸೆಮಿಫೈನಲ್​ ಪ್ರವೇಶಿಸಲಿದೆ ಎಂಬ ಕುತೂಹಲದಲ್ಲಿ ಕ್ರಿಕೆಟ್ ಪ್ರೇಮಿಗಳಿದ್ದಾರೆ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತೆ ಈ ಸಲ ಕಪ್ ಗೆಲ್ಲುವ ತಂಡ ಯಾವುದೆಂದು ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ( Virender Sehwag) ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸೆಹ್ವಾಗ್, ಪಾಕಿಸ್ತಾನ್ ವಿರುದ್ದದ ಮೊದಲ ಪಂದ್ಯದ ಸೋಲಿನ ಹೊರತಾಗಿಯೂ ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಭಾರತವು ಮುಂದಿನ ಪಂದ್ಯಗಳಲ್ಲಿ ಗೆಲ್ಲುವುದು ಖಚಿತ. ಇದಕ್ಕಾಗಿ ಟೀಮ್ ಇಂಡಿಯಾ ಉತ್ತಮವಾಗಿ ಆಡಬೇಕಷ್ಟೆ. ನಮ್ಮ ತಂಡ ಗೆದ್ದಾಗ ನಾವು ಯಾವಾಗಲೂ ಹುರಿದುಂಬಿಸುತ್ತೇವೆ. ಆದರೆ ಸೋತಾಗ ನಾವು ಅವರನ್ನು ಇನ್ನಷ್ಟು ಬೆಂಬಲಿಸಬೇಕು ಎಂದರು.

ಅಷ್ಟೇ ಅಲ್ಲದೆ ನನ್ನ ಪ್ರಕಾರ ಭಾರತ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಲಿದೆ. ಆ ಬಳಿಕ ಫೈನಲ್​ಗೇರುವ ವಿಶ್ವಾಸ ಕೂಡ ನನಗಿದೆ. ಈ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ. ಟೀಮ್ ಇಂಡಿಯಾ ಮುಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಆ ಬಳಿಕ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ವಿರುದ್ದ ಆಡಲಿದೆ. ಈ ಎಲ್ಲಾ ಪಂದ್ಯಗಳನ್ನು ಗೆದ್ದರೆ ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಬಹುದು.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(T20 World Cup 2021: Virender Sehwag picks this team as the T20 World Cup champions)