Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

Waqar Younis Controversy: ಭಾರತ-ಪಾಕ್ ನಡುವಣ ಪಂದ್ಯದ ಇನಿಂಗ್ಸ್​ ಬ್ರೇಕ್ ವೇಳೆ ಪಾಕಿಸ್ತಾನ್ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಮೈದಾನದಲ್ಲೇ ನಮಾಜ್ ಮಾಡಿದ್ದರು.

T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ
Rizwan Prayer
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 27, 2021 | 2:29 PM

T20 World Cup 2021: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಪಂದ್ಯ ನಡೆದು ದಿನಗಳು ಕಳೆದರೂ ಅದರ ಚರ್ಚೆಗಳು ಮಾತ್ರ ಇನ್ನೂ ಮುಗಿದಿಲ್ಲ. ಇದೇ ಮೊದಲ ಬಾರಿ ಭಾರತವನ್ನು ಮಣಿಸಿರುವ ಪಾಕ್​ ತಂಡಕ್ಕೆ ಭಾರೀ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಹೀಗೆ ಪ್ರಶಂಸೆ ವ್ಯಕ್ತಪಡಿಸುವ ಭರದಲ್ಲಿ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ವಕಾರ್ ಯೂನಿಸ್ (Waqar Younis) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತ-ಪಾಕ್ ನಡುವಣ ಪಂದ್ಯದ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದ ವಕಾರ್, ನನಗೆ ಪಾಕ್ ಆಟಗಾರ ರಿಜ್ವಾನ್ (Mohammad Rizwan) ಹಿಂದೂಗಳ ನಡುವೆ ನಮಾಜ್ ಮಾಡಿದ್ದು ವಿಶೇಷವಾಗಿತ್ತು ಎಂದು ಬಾಯಿ ಹರಿಬಿಟ್ಟಿದ್ದಾರೆ. ಈ ಹೇಳಿಕೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಇದೀಗ ವಕಾರ್ ಯೂನಿಸ್ ತಮ್ಮ ಹೇಳಿಕೆಗಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದಾರೆ.

ಭಾರತ-ಪಾಕ್ ನಡುವಣ ಪಂದ್ಯದ ಇನಿಂಗ್ಸ್​ ಬ್ರೇಕ್ ವೇಳೆ ಪಾಕಿಸ್ತಾನ್ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಮೈದಾನದಲ್ಲೇ ನಮಾಜ್ ಮಾಡಿದ್ದರು. ಈ ವಿಡಿಯೋ ಭಾರೀ ವೈರಲ್ ಆಗಿತ್ತು. ಪಾಕ್-ಭಾರತ ಪಂದ್ಯದ ಚರ್ಚೆಯ ವೇಳೆ ಈ ವಿಷಯವನ್ನು ಪ್ರಸ್ತಾಪಿಸಿ ವಕಾರ್ ಯೂನಿಸ್, ಹಿಂದೂಗಳಿಂದ ಸುತ್ತುವರಿದ ಮೈದಾನದಲ್ಲಿ ರಿಜ್ವಾನ್ ನಮಾಜ್ ಮಾಡಿದ್ದು, ನಿಜವಾಗಿಯೂ ನನಗೆ ತುಂಬಾ ವಿಶೇಷವಾಗಿತ್ತು ಎಂದಿದ್ದರು.

ಈ ಬಗ್ಗೆ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಕ್ರೀಡೆಯಲ್ಲೂ ಧರ್ಮವನ್ನು ಎಳೆದು ತರುತ್ತಿರುವ ಬಗ್ಗೆ ವಕಾರ್ ವಿರುದ್ದ ಭಾರೀ ಟೀಕೆ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪಾಕ್ ಮಾಜಿ ಕ್ರಿಕೆಟಿಗನ ವಿರುದ್ದ ಆಕ್ರೋಶಗಳು ಕೇಳಿ ಬರುತ್ತಿದ್ದಂತೆ ಇದೀಗ ವಕಾರ್ ತಮ್ಮ ವರಸೆ ಬದಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವಕಾರ್ ಯೂನಿಸ್, ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿರಲಿಲ್ಲ. ನನ್ನ ಹೇಳಿಕೆ ಅನೇಕರ ಭಾವನೆಗಳಿಗೆ ನೋವುಂಟು ಮಾಡಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಹೇಳಿಕೆಯ ಉದ್ದೇಶ ಅದಾಗಿರಲಿಲ್ಲ. ಕ್ರೀಡೆಗಳು ಜಾತಿ, ಧರ್ಮ ಇತ್ಯಾದಿಗಳನ್ನು ಲೆಕ್ಕಿಸದೆ ಜನರನ್ನು ಒಂದುಗೂಡಿಸುತ್ತದೆ ಎಂದು ವಕಾರ್ ಕ್ಷಮೆಯಾಚಿಸಿ ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಭಾರತದ ಮೊದಲ ಗೆಲುವಿನ ಗುಂಗಿನಲ್ಲಿ ವಕಾರ್ ಯೂನಿಸ್ ನೀಡಿರುವ ಹೇಳಿಕೆಯ ವಿರುದ್ದ ಪರ ವಿರುದ್ದ ಚರ್ಚೆಗಳು ಮುಂದುವರೆದಿದೆ.

ಇದನ್ನೂ ಓದಿ: T20 World Cup 2021: ನ್ಯೂಜಿಲೆಂಡ್ ತಂಡಕ್ಕೆ ಬಿಗ್ ಶಾಕ್: ವಿಶ್ವಕಪ್​ನಿಂದ ಪ್ರಮುಖ ಆಟಗಾರ ಹೊರಕ್ಕೆ

ಇದನ್ನೂ ಓದಿ:  ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

ಇದನ್ನೂ ಓದಿ: T20 World Cup 2021: 90 ಕೆ.ಜಿ ವಿಕೆಟ್ ಕೀಪರ್: ಅದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಶಹಝಾದ್

(T20 World Cup 2021: Waqar Younis apologises for Namaz in front of Hindus remark)