ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ಗೆ ಅಫ್ಘಾನಿಸ್ತಾನ್ ಸೋಲುಣಿಸಿದೆ. ದುಬೈಯ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಅಫ್ಘಾನ್ ತಂಡ ಹಝ್ರತುಲ್ಲಾ ಝಝೈ (56) ಹಾಗೂ ಮೊಹಮ್ಮದ್ ಶೆಹಝಾದ್ (54) ಅದ್ಭುತ ಆರಂಭ ಒದಗಿಸಿದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಆರಂಭಿಕ ಜೋಡಿ ಅರ್ಧಶತಕ ಬಾರಿಸುವ ಮೂಲಕ ಮೊದಲ ವಿಕೆಟ್ಗೆ 90 ರನ್ಗಳ ಜೊತೆಯಾಟವಾಡಿದರು. ಬಳಿಕ ಬಂದ ಗುರ್ಬಜ್ (33) ಹಾಗೂ ನಜೀಬುಲ್ಲಾ (23) ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು.
ಈ ಮೊತ್ತವನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಯಾವುದೇ ಹಂತದಲ್ಲೂ ಅಫ್ಘಾನಿಸ್ತಾನ್ ತಂಡಕ್ಕೆ ಸರಿಸಾಟಿಯಾಗಲಿಲ್ಲ. ಮೊದಲ ಓವರ್ ಎಸೆದ ನಾಯಕ ಮೊಹಮ್ಮದ್ ನಬಿ ಲಿಂಡ್ಲ್ ಸಿಮನ್ಸ್ ವಿಕೆಟ್ ಪಡೆಯುವ ಮೂಲಕ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ನಬಿ ಎಸೆತದಲ್ಲಿ ಎವಿನ್ ಲೂಯಿಸ್ ಕೂಡ ವಿಕೆಟ್ ಒಪ್ಪಿಸಿದರು.
ಇದಾದ ಬಳಿಕ ರೋಸ್ಟನ್ ಚೇಸ್ ಎಚ್ಚರಿಕೆಯ ಆಟದೊಂದಿಗೆ 54 ರನ್ಗಳಿಸಿದರೂ ತಂಡವನ್ನು ಗುರಿ ಮುಟ್ಟಿಸಲು ಸಾಧ್ಯವಾಗಿಲ್ಲ. ಅದರಂತೆ ನಿಗದಿತ 20 ಓವರ್ನಲ್ಲಿ ವಿಂಡೀಸ್ ತಂಡವು 5 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಅಫ್ಘಾನ್ ತಂಡವು 56 ರನ್ಗಳ ಭರ್ಜರಿ ಜಯ ಸಾಧಿಸಿತು. ಅಫ್ಘಾನಿಸ್ತಾನ್ ಪರ ಮೊಹಮ್ಮದ್ ನಬಿ 4 ಓವರ್ ಗಳಲ್ಲಿ ಕೇವಲ 2 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.
ಇದನ್ನೂ ಓದಿ: T20 World Cup 2021: ಟಿ20 ಕ್ರಿಕೆಟ್ನಲ್ಲಿ ನಂಬರ್ 1 ಬ್ಯಾಟರ್ ಯಾರು ಗೊತ್ತಾ?
ಇದನ್ನೂ ಓದಿ:T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು?
ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ