AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕೊಹ್ಲಿಗೆ ಹಸ್ತಲಾಘವ ನೀಡಿದ ಗಿಲ್​ಕ್ರಿಸ್ಟ್​: ಕೈ ಮುರಿದು ಹೋಗ್ಬಹುದು ಎಂದ ನೆಟ್ಟಿಗರು..!

T20 World Cup 2022: ಟೀಮ್ ಇಂಡಿಯಾ ಈಗಾಗಲೇ 2 ಪಂದ್ಯಗಳನ್ನು ಆಡಿದ್ದು, 3ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.

VIDEO: ಕೊಹ್ಲಿಗೆ ಹಸ್ತಲಾಘವ ನೀಡಿದ ಗಿಲ್​ಕ್ರಿಸ್ಟ್​: ಕೈ ಮುರಿದು ಹೋಗ್ಬಹುದು ಎಂದ ನೆಟ್ಟಿಗರು..!
Virat Kohli - Adam Gilchrist
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 29, 2022 | 3:03 PM

T20 World Cup 2022:  ನೆದರ್​ಲ್ಯಾಂಡ್ಸ್​​ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಭಾರತ ತಂಡ 56 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತಕ್ಕೆ ಇದು ಸತತ ಎರಡನೇ ಗೆಲುವು. ಈ ಪಂದ್ಯದಲ್ಲೂ ಕಿಂಗ್ ಕೊಹ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಈ ಪಂದ್ಯಕ್ಕೂ ಮುನ್ನ ಅವರು ಮೈದಾನದಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಡೇಲ್ ಸ್ಟೇನ್ ಅವರನ್ನು ಭೇಟಿಯಾಗಿದ್ದರು. ಏತನ್ಮಧ್ಯೆ, ಆಸ್ಟ್ರೇಲಿಯಾದ ಮಾಜಿ ದಂತಕಥೆ ಆ್ಯಡಂ ಗಿಲ್‌ಕ್ರಿಸ್ಟ್ ಕೂಡ ಇದೇ ವೇಳೆ ಬಂದು ವಿರಾಟ್ ಕೊಹ್ಲಿಗೆ ಹಸ್ತಲಾಘವ ಮಾಡಿದ್ದರು.

ಪಾಕಿಸ್ತಾನದ ವಿರುದ್ಧ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿಯನ್ನು ಭೇಟಿಯಾದ ಗಿಲ್​ಕ್ರಿಸ್ಟ್​, ಹಸ್ತಲಾಘವ ಮಾಡಿ ಬೆನ್ನು ತಟ್ಟಿದರು. ಆದರೆ ಈ ವೇಳೆ ಮಾಡಿದ ಹಸ್ತಲಾಘವ ಇದೀಗ ವೈರಲ್ ಆಗಿದೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಹಸ್ತಲಾಘವ ಮಾಡಿದ್ದ ಗಿಲ್​ಕ್ರಿಸ್ಟ್​, ವಿರಾಟ್ ಕೊಹ್ಲಿಯ ಕೈಯನ್ನು ಶಕ್ತಿಯುತವಾಗಿ ಕುಲುತ್ತಿರುವುದು ಕಾಣಬಹುದು. ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಹಾಸ್ಯಚಟಾಕಿಗಳು ಹರಿದಾಡಲಾರಂಭಿಸಿದೆ.

ವಿರಾಟ್ ಕೊಹ್ಲಿಗೆ ಇನ್ನೂ ಪಂದ್ಯಗಳಿವೆ, ಮೆಲ್ಲನೆ ಕೈಕುಲುಕುವಂತೆ ಕೆಲವರು ಗಿಲ್​ಕ್ರಿಸ್ಟ್​ಗೆ ಸಲಹೆ ನೀಡಿದ್ದಾರೆ. ಇನ್ನು ಕೆಲವರು ಕೈ ಮುರಿದು ಹೋಗಬಹುದು..ಈ ರೀತಿ ಯಾರಾದರೂ ಪ್ರಶಂಸೆ ವ್ಯಕ್ತಪಡಿಸುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಮತ್ತೆ ಕೆಲವರು ಕೈಕುಲುಕಿದ ಬಳಿಕ ಕೊಹ್ಲಿ ಫಿಸಿಯೋನ ಭೇಟಿಯಾಗಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಒಟ್ಟಿನಲ್ಲಿ ಆ್ಯಡಂ ಗಿಲ್​ಕ್ರಿಸ್ಟ್ ಅವರ ಹಸ್ತಲಾಘವ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹೊಸ ತರಂಗ ಸೃಷ್ಟಿಸಿದೆ. ಇನ್ನು ಟೀಮ್ ಇಂಡಿಯಾ ಈಗಾಗಲೇ 2 ಪಂದ್ಯಗಳನ್ನು ಆಡಿದ್ದು, 3ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಏಕೆಂದರೆ ಭಾರತ ತಂಡದ ಮುಂದಿನ ಎದುರಾಳಿಗಳು ಜಿಂಬಾಬ್ವೆ ಹಾಗೂ ಬಾಂಗ್ಲಾದೇಶ್. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ ಟೀಮ್ ಇಂಡಿಯಾ.

Published On - 3:00 pm, Sat, 29 October 22

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್