ಇನ್ನು ಅಘ್ಘಾನ್ನಲ್ಲಿ ಪಾಕ್ ಪ್ರೇರಿತ ದಬ್ಬಾಳಿಕೆಯನ್ನು ಸಹಿಸದ ಹೊಸ ತಲೆಮಾರಿನ ಯುವಕರು ಭಾರತದ ಮೇಲೆ ವಿಶೇಷ ಪ್ರೀತಿಯನ್ನು ಇಟ್ಟುಕೊಂಡಿದ್ದಾರೆ. ಅದರಲ್ಲೂ ಅಫ್ಘಾನಿಸ್ತಾನಕ್ಕೆ ಭಾರತವು ಸದಾ ಬೆಂಬಲವಾಗಿ ನಿಂತಿದೆ. ಇದೇ ಕಾರಣದಿಂದಾಗಿ ಪಾಕ್-ಭಾರತ ನಡುವಣ ಪಂದ್ಯದ ವೇಳೆ ಬಹುತೇಕ ಅಘ್ಘಾನ್ನರು ಟೀಮ್ ಇಂಡಿಯಾಗೆ ಬೆಂಬಲ ಸೂಚಿಸುತ್ತಾರೆ.
ಇದೀಗ ಇದಕ್ಕೆ ತಾಜಾ ಉದಾಹರಣೆಯಾಗಿ ಅಫ್ಘಾನಿಸ್ತಾನ್ ಕ್ರಿಕೆಟ್ ಪ್ರೇಮಿಗಳ ವಿಡಿಯೋವೊಂದು ವೈರಲ್ ಆಗಿದೆ. ಮೆಲ್ಬೋರ್ನ್ನಲ್ಲಿ ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಅಫ್ಘಾನಿಸ್ತಾನದ ಕಾಬೂಲ್ ನಗರದಲ್ಲಿ ಕ್ರಿಕೆಟ್ ಪ್ರೇಮಿಗಳು ಕೇಕೆ ಹಾಕುತ್ತಾ ಸಂಭ್ರಮಿಸಿದ್ದರು. ಇದರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಒಟ್ಟಿನಲ್ಲಿ ಭಾರತ-ಪಾಕಿಸ್ತಾನ್ ನಡುವಣ ಕದನದಲ್ಲಿ ಭಾರತೀಯರು ಮಾತ್ರವಲ್ಲದೆ, ಅತ್ತ ಅಫ್ಘಾನ್ನರು ಸಂಭ್ರಮಿಸುತ್ತಿರುವುದು ಪಾಕ್ ಕ್ರಿಕೆಟ್ ಪ್ರೇಮಿಗಳ ಕಣ್ಣು ಕೆಂಪಾಗಿಸಿರುವುದಂತು ಸುಳ್ಳಲ್ಲ.
ಟೀಮ್ ಇಂಡಿಯಾಗೆ ರೋಚಕ ಜಯ:
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು. ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.
ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ
ಹ್ಯಾರಿಸ್ ರೌಫ್ ಎಸೆದ 19ನೇ ಓವರ್ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್ನಲ್ಲಿ 16 ರನ್ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿತು. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದೆ.