T20 World Cup 2022: ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರನಿಗೆ ಕೊರೋನಾ

| Updated By: ಝಾಹಿರ್ ಯೂಸುಫ್

Updated on: Oct 25, 2022 | 4:13 PM

T20 World Cup 2022: ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಹೀನಾಯವಾಗಿ ಸೋಲನುಭವಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

T20 World Cup 2022: ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರನಿಗೆ ಕೊರೋನಾ
Australia
Follow us on

T20 World Cup 2022: ಟಿ20 ವಿಶ್ವಕಪ್​ನಲ್ಲಿನ 19ನೇ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ (Australia) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಆ್ಯಡಂ ಝಂಪಾ (Adam Zampa) ಕೊರೋನಾ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ. ವಿಶೇಷ ಎಂದರೆ ಇಂದು ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಬೇಕಿದ್ದು, ಅದಕ್ಕೂ ಮುನ್ನ ತಂಡದ ಪ್ರಮುಖ ಸ್ಪಿನ್ನರ್ ಕೊರೋನಾ ಕಾರಣ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಪರ್ತ್​ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆ್ಯಡಂ ಝಂಪಾಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಮೊದಲೇ ಅನಾರೋಗ್ಯ ಸಮಸ್ಯೆಗೆ ತುತ್ತಾಗಿದ್ದ ಝಂಪಾ ಅವರನ್ನು ಕೊರೋನಾ ಟೆಸ್ಟ್​ಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕು ದೃಢಪಟ್ಟಿದೆ.

ಟಿ20 ವಿಶ್ವಕಪ್ ಕೊರೋನಾ ನಿಯಮ:

ಇದನ್ನೂ ಓದಿ
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಟಿ20 ವಿಶ್ವಕಪ್‌ಗಾಗಿ ಕೊರೋನಾ ನಿಯಮಗಳಲ್ಲಿ ಐಸಿಸಿ ಮಾಡಿದ ಬದಲಾವಣೆಗಳ ಪ್ರಕಾರ, ಆಟಗಾರನಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಕಂಡುಬಂದರೆ, ಅವರು ಕಡ್ಡಾಯ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಅಥವಾ ಪ್ರತ್ಯೇಕವಾಗಿ ಕ್ವಾರಂಟೈನ್​ನಲ್ಲಿ ಇರಬೇಕಿಲ್ಲ. ಬದಲಾಗಿ ಪಂದ್ಯವಾಡಲು ವೈದ್ಯರಿಂದ ಫಿಟ್​ನೆಸ್ ಟೆಸ್ಟ್ ಮಾಡಿಸಿಕೊಂಡು ಕಣಕ್ಕಿಳಿಯಬಹುದು. ಹೀಗಾಗಿ ಕೊರೋನಾ ಸೋಂಕಿಗೆ ಒಳಗಾದರೆ ತಂಡದ ವೈದ್ಯರ ನಿರ್ಧಾರ ಅಂತಿಮವಾಗಿರಲಿದೆ.

ಆದರೆ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ಪಾಲಿಗೆ ಆ್ಯಡಂ ಝಂಪಾ ಅನಿವಾರ್ಯ. ಏಕೆಂದರೆ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಹೀನಾಯವಾಗಿ ಸೋಲನುಭವಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಆಸ್ಟ್ರೇಲಿಯಾ ತಂಡ ಹೀಗಿದೆ:

ಆರೋನ್ ಫಿಂಚ್ (ನಾಯಕ), ಪ್ಯಾಟ್ ಕಮ್ಮಿನ್ಸ್ (ಉಪನಾಯಕ), ಆಷ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಆ್ಯಡಂ ಝಂಪಾ.