AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಪ್ರಮುಖ ಆಟಗಾರ ಔಟ್: ಆಸ್ಟ್ರೇಲಿಯಾ ತಂಡಕ್ಕೆ ಸ್ಪೋಟಕ ದಾಂಡಿಗ ಎಂಟ್ರಿ..!

T20 World Cup 2022: ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿರುವ ಗ್ಲೆನ್ ಮ್ಯಾಕ್ಸ್​​ವೆಲ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ.

T20 World Cup 2022: ಪ್ರಮುಖ ಆಟಗಾರ ಔಟ್: ಆಸ್ಟ್ರೇಲಿಯಾ ತಂಡಕ್ಕೆ ಸ್ಪೋಟಕ ದಾಂಡಿಗ ಎಂಟ್ರಿ..!
australia team
TV9 Web
| Edited By: |

Updated on: Oct 20, 2022 | 2:47 PM

Share

T20 World Cup 2022:  ಟಿ20 ವಿಶ್ವಕಪ್​ ಶುರವಾದ ಬೆನ್ನಲ್ಲೇ ಆಸ್ಟ್ರೇಲಿಯಾ (Australia) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ (Josh Inglis) ಗಾಯದಿಂದಾಗಿ ಹೊರಬಿದ್ದಿದ್ದಾರೆ. ಗಾಲ್ಫ್ ಆಡುವ ವೇಳೆ ಇಂಗ್ಲಿಷ್ ಅವರ ಬಲಗೈಗೆ ಗಾಯವಾಗಿದ್ದು, ಹೀಗಾಗಿ ಟಿ20 ವಿಶ್ವಕಪ್​ನಿಂದ ಔಟ್ ಆಗಿದ್ದಾರೆ. ಇದೀಗ ಅವರ ಸ್ಥಾನದಲ್ಲಿ ಆಲ್​ರೌಂಡರ್ ಆಟಗಾರನಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಮಣೆಹಾಕಿದೆ. ಅದರಂತೆ ಸೂಪರ್-12 ಪಂದ್ಯಕ್ಕೂ ಮುನ್ನ ಯುವ ಆಟಗಾರ ಕ್ಯಾಮರೊನ್ ಗ್ರೀನ್ ಆಸೀಸ್ ಬಳಗವನ್ನು ಸೇರಿಕೊಳ್ಳಲಿದ್ದಾರೆ.

ಇತ್ತೀಚೆಗೆ ಆಡಲಾಗಿದ್ದ ಟೀಮ್ ಇಂಡಿಯಾ ವಿರುದ್ಧದ ಸರಣಿಯಲ್ಲಿ ಕ್ಯಾಮರೊನ್ ಗ್ರೀನ್ ಬದಲಿ ಆಟಗಾರನಾಗಿ ಕಾಣಿಸಿಕೊಂಡಿದ್ದರು. ತಂಡದಿಂದ ಹೊರಗುಳಿದಿದ್ದ ಮಾರ್ಕಸ್ ಸ್ಟೊಯಿನಿಸ್ ಬದಲು ಅವಕಾಶ ಪಡೆದಿದ್ದ ಗ್ರೀನ್ ಭರ್ಜರಿ ಪ್ರದರ್ಶನ ನೀಡಿದ್ದರು. ಅದರಲ್ಲೂ ಪವರ್​ಪ್ಲೇನಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಬೆಂಡೆತ್ತುವ ಮೂಲಕ ಎರಡು ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ ಸ್ಟೊಯಿನಿಸ್ ಎಂಟ್ರಿಯೊಂದಿಗೆ ಕ್ಯಾಮರೊನ್ ಗ್ರೀನ್ ತಂಡದಿಂದ ಹೊರಬಿದ್ದಿದ್ದರು.

ಇದೀಗ ಜೋಶ್ ಇಂಗ್ಲಿಷ್ ಗಾಯಗೊಳ್ಳುತ್ತಿದ್ದಂತೆ ಆಸ್ಟ್ರೇಲಿಯಾ ತಂಡವು ಕ್ಯಾಮರೊನ್ ಗ್ರೀನ್ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಯುವ ಆಲ್​ರೌಂಡರ್​ನನ್ನು ಮುಖ್ಯ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿರುವ ಗ್ಲೆನ್ ಮ್ಯಾಕ್ಸ್​​ವೆಲ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಹೀಗಾಗಿ ಕೆಲ ಪಂದ್ಯಗಳಲ್ಲಿ ಯುವ ಆಲ್​ರೌಂಡರ್ ಕ್ಯಾಮರೊನ್ ಗ್ರೀನ್ ಅವಕಾಶ ಪಡೆದರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಒಟ್ಟಿನಲ್ಲಿ ಗಾಯದಿಂದಾಗಿ ಆಟಗಾರನೊಬ್ಬ ಹೊರಬೀಳುತ್ತಿದ್ದಂತೆ ಆಸ್ಟ್ರೇಲಿಯಾ ತಂಡವು ಸ್ಪೋಟಕ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಿ ಟೀಮ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸಿದ್ದಾರೆ.

ಆಸ್ಟ್ರೇಲಿಯಾ ಟಿ20 ತಂಡ ಹೀಗಿದೆ:

ಆರೋನ್ ಫಿಂಚ್ (ನಾಯಕ), ಪ್ಯಾಟ್ ಕಮ್ಮಿನ್ಸ್ (ಉಪನಾಯಕ), ಆಷ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಕ್ಯಾಮರೊನ್ ಗ್ರೀನ್