AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಪಾಕ್ ವಿರುದ್ಧ ಅಬ್ಬರಿಸಿದ ‘ಕಿಂಗ್’ ಕೊಹ್ಲಿಗೆ ಐಸಿಸಿ ನೀಡಿದ ಗೌರವ ಎಂಥಾದ್ದು ಗೊತ್ತಾ? ಫೋಟೋ ನೋಡಿ

Virat Kohli: ಟೀಂ ಇಂಡಿಯಾದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸೋಲಿನ ದವಡೆಯಲ್ಲಿದ್ದ ತಂಡವನ್ನು ಮೇಲೆತ್ತಿದ್ದಲ್ಲದೆ ಅಜೇಯ ಅರ್ಧಶತಕದ ಇನ್ನಿಂಗ್ಸ್ ಸಹ ಆಡಿದರು.

Virat Kohli: ಪಾಕ್ ವಿರುದ್ಧ ಅಬ್ಬರಿಸಿದ ‘ಕಿಂಗ್’ ಕೊಹ್ಲಿಗೆ ಐಸಿಸಿ ನೀಡಿದ ಗೌರವ ಎಂಥಾದ್ದು ಗೊತ್ತಾ? ಫೋಟೋ ನೋಡಿ
TV9 Web
| Edited By: |

Updated on:Oct 24, 2022 | 1:24 PM

Share

ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾನುವಾರ ನಡೆದ ಸೂಪರ್-12 ಸುತ್ತಿನಲ್ಲಿ ಟೀಂ ಇಂಡಿಯಾ ಪಾಕಿಸ್ತಾವನ್ನು (India vs Pakistan) ಎದುರಿಸಿತ್ತು. ಈ ಪಂದ್ಯದಲ್ಲಿ ಬಾಬರ್ ಪಡೆಯನ್ನು 4 ವಿಕೆಟ್​ಗಳಿಂದ ಮಣಿಸಿದ ರೋಹಿತ್ ಬಳಗ ತನ್ನ ವಿಶ್ವಕಪ್ ಅಭಿಯಾನವನ್ನು ಶುಭಾರಂಭ ಮಾಡಿತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಪ್ರಮುಖ ಪಾತ್ರ ವಹಿಸಿದ್ದರು. ಸೋಲಿನ ದವಡೆಯಲ್ಲಿದ್ದ ತಂಡವನ್ನು ಮೇಲೆತ್ತಿದ್ದಲ್ಲದೆ ಅಜೇಯ ಅರ್ಧಶತಕದ ಇನ್ನಿಂಗ್ಸ್ ಸಹ ಆಡಿದರು. ತನ್ನ ಸ್ಫೋಟಕ ಇನ್ನಿಂಗ್ಸ್​ಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಇದು ಸಾಲದೆಂಬಂತೆ ದಶಕದ ಶ್ರೇಷ್ಠ ಇನ್ನಿಂಗ್ಸ್ ಆಡಿದ ಕೊಹ್ಲಿಗೆ ಐಸಿಸಿ (ICC) ಕೂಡ ವಿಶೇಷ ಗೌರವ ಸೂಚಿಸಿದೆ.

ದಿ ಕಿಂಗ್ ಈಸ್ ಬ್ಯಾಕ್

ಪಂದ್ಯದ ನಂತರ, ಕಿಂಗ್ ಕೊಹ್ಲಿಯ ಗ್ರಾಫಿಕ್ ಫೋಟೋವೊಂದನ್ನು ತನ್ನ ಟ್ವಿಟರ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಿರುವ ಐಸಿಸಿ, “ದಿ ಕಿಂಗ್ ಈಸ್ ಬ್ಯಾಕ್” ಎಂಬ ಶೀರ್ಷಿಕೆಯೊಂದನ್ನು ನೀಡಿದೆ. ಐಸಿಸಿ ಪೋಸ್ಟ್​ನಲ್ಲಿ ಇರುವ ವಿಶೇಷವೆಂದರೆ, ಈ ಗ್ರಾಫಿಕ್ ಫೋಟೋದಲ್ಲಿ ವಿರಾಟ್ ಕೊಹ್ಲಿ ಒಂದು ಕೋಟೆಯ ಮುಂದೆ ಸಿಂಹಾಸನದ ಮೇಲೆ ಕುಳಿತಿರುವುದಾಗಿ ಬಿಂಬಿಸಲಾಗಿದೆ. ಐಸಿಸಿ ಕೊಹ್ಲಿಗೆ ನೀಡಿರುವ ಗೌರವವನ್ನು ಕಂಡು ಅವರ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಈ ಫೋಟೋ ಈಗ ಎಲ್ಲೆಡೆ ಸಾಕಷ್ಟು ವೈರಲ್ ಆಗುತ್ತಿದೆ.

ಪಂದ್ಯದ ಸಾರಾಂಶ ಹೀಗಿದೆ

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನದ ಆರಂಭ ಉತ್ತಮವಾಗಿರಲಿಲ್ಲ. ನಾಯಕ ಬಾಬರ್ ಎರಡನೇ ಓವರ್​ನಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ರಿಜ್ವಾನ್ 4 ರನ್​ಗಳಿಸಿ ಅರ್ಷದೀಪ್​ಗೆ ವಿಕೆಟ್ ಒಪ್ಪಿಸಿದರು. ಆದರೆ ಈ ಎರಡು ವಿಕೆಟ್ ಉರುಳಿದ ಬಳಿಕ ಜೊತೆಯಾದ ಇಫ್ತಿಕರ್ ಅಹ್ಮದ್ ಮತ್ತು ಶಾನ್ ಮಸೂದ್ ಅದ್ಭುತ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ವೇಳೆ ಇಫ್ತಿಕರ್ 34 ಎಸೆತಗಳಲ್ಲಿ 51 ರನ್ ಗಳಿಸಿದರೆ, ಮಸೂದ್ ಅಜೇಯ 52 ರನ್ ಗಳಿಸಿದರು. ಇವರಿಬ್ಬರ 81 ರನ್ ಜೊತೆಯಾಟ ಪಾಕಿಸ್ತಾನವನ್ನು 150 ರ ಗಡಿ ದಾಟುವಂತೆ ಮಾಡಿತು.

ಇದನ್ನೂ ಓದಿ: ಜೈ ಶ್ರೀರಾಮ್ ಘೋಷಣೆ ಕೂಗಿ, ರಾಮ ಮಂದಿರಕ್ಕೆ ಭೇಟಿ ನೀಡುವುದೇ ನನ್ನ ಗುರಿ ಎಂದ ಪಾಕ್ ಕ್ರಿಕೆಟರ್..!

160 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 31 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಹೀಗಾಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪಂದ್ಯದ ಮೇಲಿನ ಭರವಸೆಯನ್ನು ಬಹುತೇಕ ಬಿಟ್ಟಿದ್ದರು. ಆದರೆ ಕೊಹ್ಲಿ, 37 ಎಸೆತಗಳಲ್ಲಿ 40 ರನ್ ಗಳಿಸಿದ ಹಾರ್ದಿಕ್ ಪಾಂಡ್ಯ ಅವರೊಂದಿಗೆ 113 ರನ್‌ಗಳ ಅದ್ಭುತ ಜೊತೆಯಾಟದೊಂದಿಗೆ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ತಂದರು.

ಅಂತಿಮವಾಗಿ ಟೀಂ ಇಂಡಿಯಾ ಗೆಲುವಿಗೆ ಮೂರು ಓವರ್‌ಗಳಲ್ಲಿ 48 ರನ್‌ಗಳ ಅಗತ್ಯವಿತ್ತು. ಆದರೆ ಕೊನೆಯ ಓವರ್​ವರೆಗೂ ಭಾರತದ ಗೆಲುವು ಕಷ್ಟ ಎನಿಸಿತು. ಆದರೆ ಕೊಹ್ಲಿ ತಮ್ಮ ಅದ್ಭುತ ಹೊಡೆತಗಳಿಂದ ಅಸಾಧ್ಯವಾದುದನ್ನು ಸಾಧ್ಯವಾಗಿಸಿದರು. ಈ ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ 82 ರನ್ ಗಳಿಸಿ ಅಜೇಯರಾಗಿ ಉಳಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:22 pm, Mon, 24 October 22

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ