T20 World Cup: ಸೆಮಿಫೈನಲ್‌ ನಡೆಯದಿದ್ದರೆ ನ್ಯೂಜಿಲೆಂಡ್- ಭಾರತಕ್ಕೆ ಲಾಭ; ಇಂಗ್ಲೆಂಡ್- ಪಾಕ್​ಗೆ ಸಂಕಷ್ಟ

T20 World Cup 2022: ನಿಯಮಗಳ ಪ್ರಕಾರ, ಮಳೆಯಿಂದಾಗಿ ಪಂದ್ಯ ರದ್ದಾದರೆ, ಎರಡೂ ಗುಂಪಿನ ಅಗ್ರ ತಂಡಗಳು ನೇರವಾಗಿ ಫೈನಲ್‌ಗೆ ಹೋಗುತ್ತವೆ.

T20 World Cup: ಸೆಮಿಫೈನಲ್‌ ನಡೆಯದಿದ್ದರೆ ನ್ಯೂಜಿಲೆಂಡ್- ಭಾರತಕ್ಕೆ ಲಾಭ; ಇಂಗ್ಲೆಂಡ್- ಪಾಕ್​ಗೆ ಸಂಕಷ್ಟ
Follow us
TV9 Web
| Updated By: ಪೃಥ್ವಿಶಂಕರ

Updated on:Nov 09, 2022 | 11:25 AM

ಟಿ20 ವಿಶ್ವಕಪ್ 2022 (T20 World Cup 2022) ಅಂತಿಮ ಹಂತವನ್ನು ತಲುಪಿದೆ. 4 ಸೆಮಿಫೈನಲಿಸ್ಟ್ ತಂಡಗಳನ್ನು ನಿರ್ಧರಿಸಲಾಗಿದೆ. ಮೊದಲ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ (Pakistan and New Zealand) ತಂಡಗಳು ಮುಖಾಮುಖಿಯಾಗಲಿದ್ದು, ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ (India and England) ತಂಡಗಳು ಮುಖಾಮುಖಿಯಾಗಲಿವೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 15 ವರ್ಷಗಳ ನಂತರ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಮಣಿಸಬೇಕಿದೆ. ಆದರೆ ಭಾರತ ತಂಡ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯವನ್ನೂ ಆಡದೆ ಫೈನಲ್‌ಗೆ ತಲುಪಬಹುದು ಎಂಬ ಸುದ್ದಿ ನೆಟ್‌ನಲ್ಲಿ ಹರಿದಾಡುತ್ತಿದೆ. ಅದು ಹೇಗೆ ಸಾಧ್ಯ ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಹೀಗಿದೆ.

ಸೆಮಿಫೈನಲ್ ಆಡದೆ ಭಾರತ ಮಾತ್ರವಲ್ಲದೆ ನ್ಯೂಜಿಲೆಂಡ್ ಕೂಡ ಪ್ರಶಸ್ತಿ ಸುತ್ತಿಗೆ ತಲುಪುವ ಸಾಧ್ಯತೆಗಳಿವೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಸೆಮಿಫೈನಲ್‌ ಪಂದ್ಯ ಮಳೆಯಿಂದ ರದ್ದಾದರೆ, ಈ ಎರಡೂ ತಂಡಗಳು ಸೆಮಿಫೈನಲ್ ಪಂದ್ಯ ಆಡದೆಯೇ ಫೈನಲ್‌ಗೆ ತಲುಪುವ ಅವಕಾಶಗಳಿವೆ. ಹೀಗಿರುವಾಗ ಉಭಯ ತಂಡಗಳ ನಡುವೆ ಪ್ರಶಸ್ತಿ ಸುತ್ತಿನ ಪಂದ್ಯ ನಡೆಯುವ ನಿರೀಕ್ಷೆ ಇದೆ.

ಅಗ್ರ ತಂಡಗಳು ನೇರವಾಗಿ ಫೈನಲ್‌ಗೆ..

ನಿಯಮಗಳ ಪ್ರಕಾರ, ಮಳೆಯಿಂದಾಗಿ ಪಂದ್ಯ ರದ್ದಾದರೆ, ಎರಡೂ ಗುಂಪಿನ ಅಗ್ರ ತಂಡಗಳು ನೇರವಾಗಿ ಫೈನಲ್‌ಗೆ ಹೋಗುತ್ತವೆ. ನ್ಯೂಜಿಲೆಂಡ್ 7 ಅಂಕಗಳೊಂದಿಗೆ ಗ್ರೂಪ್ 1ರಲ್ಲಿ ಅಗ್ರಸ್ಥಾನದಲ್ಲಿದ್ದರೆ, ಭಾರತ 8 ಅಂಕಗಳೊಂದಿಗೆ ಗುಂಪು 2ರಲ್ಲಿ ಅಗ್ರಸ್ಥಾನದಲ್ಲಿದೆ. ನವೆಂಬರ್ 9 ರಂದು ಸಿಡ್ನಿಯಲ್ಲಿ ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯವನ್ನು ಆಡಲಿದೆ. ಹಾಗೆಯೇ ಟೀಂ ಇಂಡಿಯಾ ನವೆಂಬರ್ 10 ರಂದು ಅಡಿಲೇಡ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ: T20 World Cup 2022: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ಗೆ ಅಂಪೈರ್​ಗಳನ್ನು ಪ್ರಕಟಿಸಿದ ಐಸಿಸಿ: ಇಲ್ಲಿದೆ ಪಟ್ಟಿ

ಸಿಡ್ನಿಯಲ್ಲಿ ಮಳೆಯ ಮುನ್ಸೂಚನೆ

ಸಿಡ್ನಿಯಲ್ಲಿನ ಹವಾಮಾನದ ಬಗ್ಗೆ ಮಾತನಾಡುವುದಾದರೆ, ಪಂದ್ಯದ ದಿನದಂದು ಶೇಕಡಾ 50 ಕ್ಕಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದೆ. ಕ್ಷಣ ಕ್ಷಣಕ್ಕೂ ವಾತಾವರಣ ಬದಲಾಗುತ್ತಿದ್ದರೂ.. ಯಾವಾಗ ಹೇಗೆ ಎಂದು ತಿಳಿಯದ ಪರಿಸ್ಥಿತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ಆ ದಿನ ಮಳೆ ಬರದಿರಲಿ ಎಂದು ಪಾಕ್ ಪಡೆ ದೇವರ ಬಳಿ ಮೊರೆ ಇಡುತ್ತಿದೆ. ಮತ್ತೊಂದೆಡೆ, ನವೆಂಬರ್ 10 ರಂದು ಅಡಿಲೇಡ್ ಹವಾಮಾನದ ಬಗ್ಗೆ ಹೇಳುವುದಾದರೆ, ಮಳೆ ಬೀಳುವ ಸಾಧ್ಯತೆ ಕೇವಲ 4 ಪ್ರತಿಶತದಷ್ಟು ಮಾತ್ರ. ಅಂದರೆ ಭಾರತ vs ಇಂಗ್ಲೆಂಡ್ ಪಂದ್ಯ ನಡೆಯುವ ಸಾಧ್ಯತೆ ಇದೆ.

ನ್ಯೂಜಿಲೆಂಡ್‌ನ ಸಂಭಾವ್ಯ ಪ್ಲೇಯಿಂಗ್ XI

ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಗ್ಲೆನ್ ಫಿಲಿಪ್ಸ್, ಡಾರೆಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಪಾಕಿಸ್ತಾನದ ಸಂಭಾವ್ಯ ಪ್ಲೇಯಿಂಗ್ XI

ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್, ಮೊಹಮ್ಮದ್ ನವಾಜ್, ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಮ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Wed, 9 November 22

ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ