India vs Pakistan: ಕಿಂಗ್ ಕೊಹ್ಲಿ ಕಮಾಲ್: ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Oct 23, 2022 | 5:38 PM

India vs Pakistan: ಕೊನೆಯ ಓವರ್​ನಲ್ಲಿ ಟೀಮ್ ಇಂಡಿಯಾಗೆ ಗೆಲ್ಲು 16 ರನ್​ಗಳ ಅವಶ್ಯಕತೆಯಿತ್ತು. ಈ ಗುರಿಯನ್ನು ಏಕಾಂಗಿಯಾಗಿ ಚೇಸ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಭಾರತದ ಗೆಲುವಿನ ರೂವಾರಿಯಾದರು.

India vs Pakistan: ಕಿಂಗ್ ಕೊಹ್ಲಿ ಕಮಾಲ್: ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ
Virat Kohli
Follow us on

India vs Pakistan: ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಪಾಕಿಸ್ತಾನ್ (India vs Pakistan) ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಕಿಂಗ್ ಕೊಹ್ಲಿ. ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಕೈಕೊಟ್ಟರೂ ವಿರಾಟ್ ಕೊಹ್ಲಿ (Virat Kohli) ತಂಡಕ್ಕೆ ಆಸರೆಯಾದರು. ಅದರಲ್ಲೂ ಅಂತಿಮ ಓವರ್​ಗಳಲ್ಲಿ ಅಬ್ಬರಿಸುವ ಮೂಲಕ ಟೀಮ್ ಇಂಡಿಯಾಗೆ ಭರ್ಜರಿ ಜಯ ತಂದುಕೊಟ್ಟರು. ಈ ಮೂಲಕ ಕಳೆದ ಟಿ20 ವಿಶ್ವಕಪ್​ನಲ್ಲಿನ ಸೋಲಿನ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದೆ.

2021 ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಸೋಲನುಭವಿಸಿತ್ತು. ಅದು ವಿಶ್ವಕಪ್​ನಲ್ಲಿ ಪಾಕ್ ವಿರುದ್ಧದ ಟೀಮ್ ಇಂಡಿಯಾದ ಮೊದಲ ಸೋಲಾಗಿತ್ತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಹೀನಾಯ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಇದೀಗ ವಿರಾಟ್ ಕೊಹ್ಲಿಯೇ ಪಂದ್ಯ ಗೆಲ್ಲಿಸಿ ಕೊಟ್ಟಿರುವುದು ವಿಶೇಷ.

53 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 82 ರನ್​ ಚಚ್ಚಿದರು. ಪರಿಣಾಮ ಟೀಮ್ ಇಂಡಿಯಾ 20ನೇ ಓವರ್​ನ ಕೊನೆಯ ಎಸೆತದಲ್ಲಿ ಗೆಲುವಿನ ಗುರಿ ಮುಟ್ಟಿತು. ಈ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿದೆ.

ಇದನ್ನೂ ಓದಿ
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಕೊನೆಯ ಎರಡು ಓವರ್​ಗಳಲ್ಲಿ 31 ರನ್​ಗಳ ಗುರಿ ಪಡೆದಿದ್ದ ಟೀಮ್ ಇಂಡಿಯಾ ಪರ ಕಿಂಗ್ ಕೊಹ್ಲಿ 19ನೇ ಓವರ್​ನಲ್ಲಿ ಅಬ್ಬರಿಸಿದರು. ವೇಗಿ ಹ್ಯಾರಿಸ್ ರೌಫ್​ ಓವರ್​ನಲ್ಲಿ 2 ಭರ್ಜರಿ ಸಿಕ್ಸ್​ನೊಂದಿಗೆ 15 ರನ್​ ಚಚ್ಚುವ ಮೂಲಕ ಗೆಲುವಿನ ಗುರಿಯನ್ನು ತಗ್ಗಿಸಿದರು. ಅಲ್ಲದೆ 20ನೇ ಓವರ್​​ನಲ್ಲಿ ಮೊಹಮ್ಮದ್ ನವಾಜ್ ಎಸೆತದಲ್ಲಿ ಮತ್ತೊಂದು ಭರ್ಜರಿ ಸಿಕ್ಸ್ ಸಿಡಿಸಿದರು. ಇತ್ತ ವಿರಾಟ್ ಕೊಹ್ಲಿಯ ಅಬ್ಬರದ ಮುಂದೆ ಲಯ ತಪ್ಪಿದ ಪಾಕ್ ಬೌಲರ್​ಗಳು ಒತ್ತಡಕ್ಕೊಳಗಾದರು.

ಆದರೆ ಇತ್ತ 53 ಎಸೆತಗಳಲ್ಲಿ 82 ರನ್​ ಚಚ್ಚುವ ಮೂಲಕ ವಿರಾಟ್ ಕೊಹ್ಲಿ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

 

Published On - 5:24 pm, Sun, 23 October 22