ಟಿ20 ವಿಶ್ವಕಪ್‌ನಲ್ಲಿ (T20 World Cup 2022) ಭಾರತದ ಪಯಣ ಭಾನುವಾರದಿಂದ ಆರಂಭವಾಗಲಿದ್ದು, ರೋಹಿತ್ ಪಡೆ ತನ್ನ ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (Melbourne Cricket Ground) ನಡೆಯುವ ಈ ಅಮೋಘ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ವಿಶ್ವಕಪ್‌ಗೂ ಮುನ್ನ ಏಷ್ಯಾಕಪ್‌ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಗ್ರೂಪ್ ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಯಭೇರಿ ಬಾರಿಸಿದರೆ, ಸೂಪರ್ 4 ರ ಸುತ್ತಿನಲ್ಲಿ ಪಾಕಿಸ್ತಾನ ತಂಡ ಭಾರತವನ್ನು ಸೋಲಿಸಿತು. ಮತ್ತೊಮ್ಮೆ ಉಭಯ ತಂಡಗಳ ನಡುವೆ ಇಂತಹ ರೋಚಕ ಪಂದ್ಯವನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಏಕಪಕ್ಷೀಯವಾಗಿ ಸೋಲಿಸಿತ್ತು. ಈ ಪಂದ್ಯವನ್ನು ಪಾಕಿಸ್ತಾನ 10 ವಿಕೆಟ್‌ಗಳಿಂದ ಗೆದ್ದು ಟೀಂ ಇಂಡಿಯಾ ಅಭಿಮಾನಿಗಳಿಗೆ ಮರ್ಮಾಘಾತ ನೀಡಿತ್ತು. ಇದಕ್ಕೂ ಮೊದಲು ಯಾವುದೇ ಮಾದರಿಯ ವಿಶ್ವಕಪ್‌ನಲ್ಲಿ ಪಾಕಿಸ್ತಾನ, ಟೀಂ ಇಂಡಿಯಾವನ್ನು ಸೋಲಿಸಿರಲಿಲ್ಲ. ಆದರೆ, ಈ ಬಾರಿ ಟೀಂ ಇಂಡಿಯಾ ಸಂಪೂರ್ಣ ಬದಲಾಗಿದ್ದು, ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದೆ. ಅಲ್ಲದೆ ಭಾರತ ಈ ಬಾರಿ ಆ ಸೋಲಿಗೆ ಸೇಡು ತೀರಿಸಿಕೊಳ್ಳಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ, ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದ್ದು, ಈ ಪಂದ್ಯದ ಮೇಲೆ ವರುಣ ಕೃಪೆ ತೋರಬೇಕಿದೆ.
ಇದನ್ನೂ ಓದಿ: AUS vs NZ: ಟಾಸ್ ಗೆದ್ದ ಆಸ್ಟ್ರೇಲಿಯಾ.. ಗ್ರೀನ್, ಸ್ಮಿತ್ಗೆ ಕೋಕ್; ಉಭಯ ತಂಡಗಳು ಹೀಗಿವೆ
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್-2022 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಸೂಪರ್ 12 ಸುತ್ತಿನ ಪಂದ್ಯವು ಅಕ್ಟೋಬರ್ 23 ಭಾನುವಾರದಂದು ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮೆಲ್ಬೋರ್ನ್‌ನ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್-2022 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್ನಲ್ಲಿ?
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನೇರ ಪ್ರಸಾರವಾಗಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ?
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್-2022 ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಇರಲಿದ್ದು,ಜೊತೆಗೆ TV9Kannada.com ನಲ್ಲಿ ಈ ಪಂದ್ಯದ ಲೈವ್ ನವೀಕರಣಗಳನ್ನು ಸಹ ಓದಬಹುದು.
ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:04 pm, Sat, 22 October 22