India vs Pakistan: ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿ ಯಾವಾಗ?

India vs Pakistan: ಈ ಪ್ರಶ್ನೆ ಉತ್ತರ ಸಿಗಲು ನವೆಂಬರ್ 10 ರ ತನಕ ಕಾಯಲೇಬೇಕು. ಏಕೆಂದರೆ ಈ ಬಾರಿ ಟಿ20 ವಿಶ್ವಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿದೆ.

India vs Pakistan: ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿ ಯಾವಾಗ?
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 24, 2022 | 9:25 PM

T20 World Cup 2022: ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲೇ ಪಾಕಿಸ್ತಾನ್ ತಂಡವನ್ನು (India vs Pakistan) ಸದೆಬಡಿದು ಟೀಮ್ ಇಂಡಿಯಾ (Team India) ಭರ್ಜರಿಯಾಗಿ ಶುಭಾರಂಭ ಮಾಡಿದೆ. ಅದರಲ್ಲೂ ಕಳೆದ ಟಿ20 ವಿಶ್ವಕಪ್​ನಲ್ಲಿ ಮೊದಲ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿ ವಿಶ್ವಕಪ್ ಅಭಿಯಾನ ಆರಂಭಿಸಿದ ಪಾಕ್ ತಂಡದ ವಿರುದ್ಧ ಟೀಮ್ ಇಂಡಿಯಾ ಸೇಡು ತೀರಿಸಿಕೊಂಡಿದೆ. ಅಲ್ಲಿಗೆ ಟಿ20 ವಿಶ್ವಕಪ್​ನಲ್ಲಿನ ಉಭಯ ತಂಡಗಳ ಲೆಕ್ಕ ಚುಕ್ತಾವಾಗಿದೆ. ಆದರೆ ಇದರ ಬೆನ್ನಲ್ಲೇ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿ ಯಾವಾಗ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಈ ಪ್ರಶ್ನೆ ಉತ್ತರ ಸಿಗಲು ನವೆಂಬರ್ 10 ರ ತನಕ ಕಾಯಲೇಬೇಕು. ಏಕೆಂದರೆ ಈ ಬಾರಿ ಟಿ20 ವಿಶ್ವಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿದೆ. ಅಂದರೆ ಸೂಪರ್​-12 ನಲ್ಲಿ ಎರಡು ಗುಂಪುಗಳಾಗಿ ಆಡಲಾಗುತ್ತದೆ. ಇದೀಗ ಗ್ರೂಪ್​-2 ನಲ್ಲಿರುವ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿವೆ. ಆದರೆ ಈ ಹಂತದಲ್ಲಿ ಕೇವಲ ಒಂದು ಬಾರಿ ಮಾತ್ರ ಪರಸ್ಪರ ಸೆಣಸಲಿದೆ. ಇದಾಗ್ಯೂ ಮತ್ತೊಮ್ಮೆ ಮುಖಾಮುಖಿಯಾಗಬಹುದು. ಆದರೆ ಅದು ಫೈನಲ್​ನಲ್ಲಿ ಮಾತ್ರ.

ಅಂದರೆ ಎರಡು ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಮುಂದಿನ ಹಂತಕ್ಕೇರಲಿದೆ. ಅಂದರೆ ಗ್ರೂಪ್​-1 ಹಾಗೂ ಗ್ರೂಪ್-2 ಪಾಯಿಂಟ್ ಟೇಬಲ್​ನಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆಯುವ 4 ತಂಡಗಳು ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಸೆಮಿಫೈನಲ್​ನಲ್ಲಿ ನಾಲ್ಕು ತಂಡಗಳು ವಿರುದ್ಧವಾಗಿ ಸೆಣಸಲಿದೆ. ಅಂದರೆ ಒಂದೇ ಗ್ರೂಪ್​ನಿಂದ ಸೆಮಿಫೈನಲ್​ಗೇರಿದ ಎರಡು ತಂಡಗಳು ಮುಖಾಮುಖಿಯಾಗುವುದಿಲ್ಲ. ಬದಲಾಗಿ ಗ್ರೂಪ್-1 vs ಗ್ರೂಪ್- 2 ತಂಡಗಳ ನಡುವೆ ಸೆಮಿಫೈನಲ್ ಪಂದ್ಯ ನಡೆಯಲಿದೆ. ಹೀಗಾಗಿ ಗ್ರೂಪ್​-2 ನಿಂದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೆಮಿಫೈನಲ್​ಗೇರಿದರೂ ಮುಖಾಮುಖಿಯಾಗುವುದಿಲ್ಲ.

ಬದಲಾಗಿ ಸೆಮಿಫೈನಲ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ತಮ್ಮ ಎದುರಾಳಿಗಳ ವಿರುದ್ಧ ಗೆದ್ದು ಫೈನಲ್​ಗೆ ಪ್ರವೇಶಿಸಿದರೆ ಮತ್ತೆ ಮುಖಾಮುಖಿಯಾಗಬಹುದು. ಅಂದರೆ ನವೆಂಬರ್ 10 ರಂದು ನಡೆಯುವ 2ನೇ ಸೆಮಿಫೈನಲ್ ಪಂದ್ಯದ ಫಲಿತಾಂಶದ ಬಳಿಕವಷ್ಟೇ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆಯಾ ಎಂಬುದು ನಿರ್ಧಾರವಾಗಲಿದೆ. ಇದು ನಡೆಯದಿದ್ದರೆ ಮುಂದಿನ ವರ್ಷ ನಡೆಯಲಿರುವ ಏಷ್ಯಾಕಪ್ ತನಕ ಕಾಯಬೇಕಾಗುತ್ತದೆ.

ಸದ್ಯ ಗ್ರೂಪ್​-2 ನಲ್ಲಿರುವ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಸೆಮಿಫೈನಲ್​ಗೇರಿ ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಗಲಿ ಎಂಬುದೇ ಕ್ರಿಕೆಟ್ ಪ್ರೇಮಿಗಳ ಆಶಯ. ಏಕೆಂದರೆ 2007 ರ ಟಿ20 ವಿಶ್ವಕಪ್​ ಬಳಿಕ ಉಭಯ ತಂಡಗಳು ಚುಟುಕು ಕ್ರಿಕೆಟ್ ಕದನದಲ್ಲಿ ಮತ್ತೆ ಜೊತೆಯಾಗಿ ಫೈನಲ್ ಆಡಿಲ್ಲ. ಹೀಗಾಗಿ ಈ ಬಾರಿ ಫೈನಲ್ ಫೈಟ್​ನಲ್ಲಿ ಮತ್ತೆ ಕಣಕ್ಕಿಳಿಯಲಿದೆಯಾ ಕಾದು ನೋಡಬೇಕಿದೆ.

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ ತಂಡ ಹೀಗಿದೆ:

ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಶಾನ್ ಮಸೂದ್, ಮೊಹಮ್ಮದ್ ನವಾಜ್, ಶಾಹೀನ್ ಶಾ ಆಫ್ರಿದಿ, ಖುಷ್ದಿಲ್ ಶಾ , ಮೊಹಮ್ಮದ್ ವಾಸಿಂ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್.

Published On - 9:24 pm, Mon, 24 October 22

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ