T20 World Cup 2022: ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುತ್ತಾ? ಅಚ್ಚರಿಯ ಉತ್ತರ ನೀಡಿದ ಕಪಿಲ್ ದೇವ್

T20 World Cup 2022: ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿರುವ ಟೀಮ್ ಇಂಡಿಯಾ, ಸೂಪರ್-12 ಹಂತದಲ್ಲಿ ಒಟ್ಟು 5 ಪಂದ್ಯಗಳನ್ನು ಆಡಲಿದೆ.

T20 World Cup 2022: ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುತ್ತಾ? ಅಚ್ಚರಿಯ ಉತ್ತರ ನೀಡಿದ ಕಪಿಲ್ ದೇವ್
Kapil Dev
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 19, 2022 | 10:09 PM

T20 World Cup 2022: ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಪ್ರವೇಶಿಸುವ ತಂಡಗಳ ಲೆಕ್ಕಾಚಾರಗಳು ಶುರುವಾಗಿದೆ. ಈಗಾಗಲೇ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಸೆಮೀಸ್ ಆಡಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಸಚಿನ್ ಹೆಸರಿಸಿದ ಆ ನಾಲ್ಕು ತಂಡಗಳೆಂದರೆ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ, ಇಂಗ್ಲೆಂಡ್. ಆದರೆ ಕಪಿಲ್ ದೇವ್ ಅವರ ಲೆಕ್ಕಚಾರದ ಪ್ರಕಾರ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಡೌಟ್. ಈ ಬಗ್ಗೆ ಮಾತನಾಡಿರುವ ಲೆಜೆಂಡ್ ಕಪಿಲ್ ದೇವ್, ಟಿ20 ಕ್ರಿಕೆಟ್​ನಲ್ಲಿ ನಾವು ಫಲಿತಾಂಶವನ್ನು ಎಂದಿಗೂ ಊಹಿಸಲು ಸಾಧ್ಯವಿಲ್ಲ. ಒಂದು ಪಂದ್ಯವನ್ನು ಭರ್ಜರಿಯಾಗಿ ಗೆದ್ದ ತಂಡವು ಮುಂದಿನ ಪಂದ್ಯದಲ್ಲಿ ಸೋಲಬಹುದು. ಹೀಗಾಗಿ ಫಲಿತಾಂಶಗಳು ಏನೂ ಬೇಕಾದರೂ ಆಗಬಹುದು ಎಂದು ಕಪಿಲ್ ದೇವ್ ತಿಳಿಸಿದ್ದಾರೆ.

ಇನ್ನು ಈ ಬಾರಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವುದು ಕಷ್ಟಸಾಧ್ಯ ಎಂದಿರುವ ಕಪಿಲ್ ದೇವ್, ನನ್ನ ಪ್ರಕಾರ ಭಾರತ ತಂಡವು ಸೆಮಿಫೈನಲ್​ಗೇರುವ ಸಾಧ್ಯತೆ ಕೇವಲ ಶೇ. 30 ರಷ್ಟು ಮಾತ್ರ ಇದೆ. ಮೊದಲು ಟೀಮ್ ಇಂಡಿಯಾ ಸೆಮಿಫೈನಲ್​ಗೆ ಬಂದರಷ್ಟೇ ಅವರು ವಿಶ್ವಕಪ್ ಗೆಲ್ಲಲಿದ್ದಾರಾ ಎಂಬ ಬಗ್ಗೆ ಚರ್ಚಿಸಬಹುದು. ನನ್ನ ಪ್ರಕಾರ ಈ ಸಾಧ್ಯತೆ ಕೇವಲ 30% ರಷ್ಟು ಮಾತ್ರವಿದೆ. ಹೀಗಾಗಿ ಟೀಮ್ ಇಂಡಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವ ಕಷ್ಟ ಎಂದೇ ಹೇಳಬಹುದು ಎಂದು ಕಪಿಲ್ ದೇವ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಎಲ್ಲರೂ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿರುವಾಗ ಕಪಿಲ್ ದೇವ್ ಸೆಮಿಫೈನಲ್​ಗೇರುವುದು ಕೂಡ ಅನುಮಾನ ಎಂದಿರುವುದು ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿರುವ ಟೀಮ್ ಇಂಡಿಯಾ, ಸೂಪರ್-12 ಹಂತದಲ್ಲಿ ಒಟ್ಟು 5 ಪಂದ್ಯಗಳನ್ನು ಆಡಲಿದೆ. ಈ ಮೂಲಕ ಅತೀ ಹೆಚ್ಚು ಪಾಯಿಂಟ್ ಕಲೆಹಾಕಿದರೆ ಮಾತ್ರ ಸೆಮಿಫೈನಲ್ ಪ್ರವೇಶಿಸಬಹುದು.

ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:

  • ಅಕ್ಟೋಬರ್-23 : ಭಾರತ vs ಪಾಕಿಸ್ತಾನ – ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ
  • ಅಕ್ಟೋಬರ್-27: ಭಾರತ vs ಅರ್ಹತಾ ಸುತ್ತಿನ A ಗ್ರೂಪ್​ನ ರನ್ನರ್​ ಅಪ್ ತಂಡ – ಸಿಡ್ನಿ ಕ್ರಿಕೆಟ್ ಸ್ಟೇಡಿಯಂ
  • ಅಕ್ಟೋಬರ್- 30: ಭಾರತ vs ದಕ್ಷಿಣ ಆಫ್ರಿಕಾ – ಪರ್ತ್ ಸ್ಟೇಡಿಯಂ
  • ನವೆಂಬರ್-2: ಭಾರತ vs ಬಾಂಗ್ಲಾದೇಶ -ಅಡಿಲೇಡ್ ಓವಲ್
  • ನವೆಂಬರ್-6: ಭಾರತ vs ಅರ್ಹತಾ ಸುತ್ತಿನ B ಗ್ರೂಪ್​ನ ​ವಿನ್ನರ್ ತಂಡ

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ