T20 World Cup 2022: ಈ ಬಾರಿ ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿಸುವ ತಂಡಗಳ ಲೆಕ್ಕಾಚಾರಗಳು ಶುರುವಾಗಿದೆ. ಈಗಾಗಲೇ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಸೆಮೀಸ್ ಆಡಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಸಚಿನ್ ಹೆಸರಿಸಿದ ಆ ನಾಲ್ಕು ತಂಡಗಳೆಂದರೆ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ, ಇಂಗ್ಲೆಂಡ್. ಆದರೆ ಕಪಿಲ್ ದೇವ್ ಅವರ ಲೆಕ್ಕಚಾರದ ಪ್ರಕಾರ ಟೀಮ್ ಇಂಡಿಯಾ ಸೆಮಿಫೈನಲ್ಗೇರುವುದು ಡೌಟ್. ಈ ಬಗ್ಗೆ ಮಾತನಾಡಿರುವ ಲೆಜೆಂಡ್ ಕಪಿಲ್ ದೇವ್, ಟಿ20 ಕ್ರಿಕೆಟ್ನಲ್ಲಿ ನಾವು ಫಲಿತಾಂಶವನ್ನು ಎಂದಿಗೂ ಊಹಿಸಲು ಸಾಧ್ಯವಿಲ್ಲ. ಒಂದು ಪಂದ್ಯವನ್ನು ಭರ್ಜರಿಯಾಗಿ ಗೆದ್ದ ತಂಡವು ಮುಂದಿನ ಪಂದ್ಯದಲ್ಲಿ ಸೋಲಬಹುದು. ಹೀಗಾಗಿ ಫಲಿತಾಂಶಗಳು ಏನೂ ಬೇಕಾದರೂ ಆಗಬಹುದು ಎಂದು ಕಪಿಲ್ ದೇವ್ ತಿಳಿಸಿದ್ದಾರೆ.
ಇನ್ನು ಈ ಬಾರಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವುದು ಕಷ್ಟಸಾಧ್ಯ ಎಂದಿರುವ ಕಪಿಲ್ ದೇವ್, ನನ್ನ ಪ್ರಕಾರ ಭಾರತ ತಂಡವು ಸೆಮಿಫೈನಲ್ಗೇರುವ ಸಾಧ್ಯತೆ ಕೇವಲ ಶೇ. 30 ರಷ್ಟು ಮಾತ್ರ ಇದೆ. ಮೊದಲು ಟೀಮ್ ಇಂಡಿಯಾ ಸೆಮಿಫೈನಲ್ಗೆ ಬಂದರಷ್ಟೇ ಅವರು ವಿಶ್ವಕಪ್ ಗೆಲ್ಲಲಿದ್ದಾರಾ ಎಂಬ ಬಗ್ಗೆ ಚರ್ಚಿಸಬಹುದು. ನನ್ನ ಪ್ರಕಾರ ಈ ಸಾಧ್ಯತೆ ಕೇವಲ 30% ರಷ್ಟು ಮಾತ್ರವಿದೆ. ಹೀಗಾಗಿ ಟೀಮ್ ಇಂಡಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವ ಕಷ್ಟ ಎಂದೇ ಹೇಳಬಹುದು ಎಂದು ಕಪಿಲ್ ದೇವ್ ತಿಳಿಸಿದ್ದಾರೆ.
ಒಟ್ಟಿನಲ್ಲಿ ಎಲ್ಲರೂ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿರುವಾಗ ಕಪಿಲ್ ದೇವ್ ಸೆಮಿಫೈನಲ್ಗೇರುವುದು ಕೂಡ ಅನುಮಾನ ಎಂದಿರುವುದು ಅಚ್ಚರಿಗೆ ಕಾರಣವಾಗಿದೆ.
ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿರುವ ಟೀಮ್ ಇಂಡಿಯಾ, ಸೂಪರ್-12 ಹಂತದಲ್ಲಿ ಒಟ್ಟು 5 ಪಂದ್ಯಗಳನ್ನು ಆಡಲಿದೆ. ಈ ಮೂಲಕ ಅತೀ ಹೆಚ್ಚು ಪಾಯಿಂಟ್ ಕಲೆಹಾಕಿದರೆ ಮಾತ್ರ ಸೆಮಿಫೈನಲ್ ಪ್ರವೇಶಿಸಬಹುದು.
ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:
ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.