T20 World Cup 2022: ಟಿ20 ವಿಶ್ವಕಪ್ 2022 ರ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ (Team India) ಈಗಾಗಲೇ ಆಸ್ಟ್ರೇಲಿಯಾಗೆ ಪ್ರಯಾಣಿಸಿದೆ. 14 ಸದಸ್ಯರನ್ನು ಒಳಗೊಂಡ ತಂಡವು ಇದೀಗ ಮತ್ತಿಬ್ಬರು ವೇಗಿಗಳನ್ನು ನೆಟ್ ಬೌಲರ್ಗಳನ್ನು ಹೆಚ್ಚುವರಿಯಾಗಿ ಆಯ್ಕೆ ಮಾಡಿಕೊಂಡಿದೆ. ಟೀಮ್ ಇಂಡಿಯಾದಲ್ಲಿ ಏಕೈಕ ಎಡಗೈ ವೇಗಿಯಾಗಿ ಅರ್ಷದೀಪ್ ಸಿಂಗ್ (Arshdeep Singh) ಮಾತ್ರ ಇದ್ದು, ಹೀಗಾಗಿ ಇದೀಗ ಯುವ ಎಡಗೈ ವೇಗದ ಬೌಲರ್ಗಳಾದ ಚೇತನ್ ಸಕರಿಯಾ (Chetan Sakariya) ಹಾಗೂ ಮುಖೇಶ್ ಕುಮಾರ್ (Mukesh Choudhary) ಅವರನ್ನು ಟೀಮ್ ಇಂಡಿಯಾ ನೆಟ್ ಬೌಲರ್ಗಳಾಗಿ ಆಯ್ಕೆ ಮಾಡಿದೆ.
ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿರುವ ಮುಖೇಶ್ ಕುಮಾರ್ ಉತ್ತಮ ಬೌಲಿಂಗ್ ಮೂಲಕ ಗಮನ ಸೆಳೆದಿದ್ದರು. ಇನ್ನು ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಹಾಗೂ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿಯಾಗಿರುವ ಚೇತನ್ ಸಕರಿಯಾ ಕೂಡ ಯಾರ್ಕರ್ ದಾಳಿ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಹೆಚ್ಚುವರಿ ನೆಟ್ ಬೌಲರ್ಗಳಾಗಿ ಈ ಇಬ್ಬರು ಎಡಗೈ ವೇಗಿಗಳನ್ನು ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ 23 ರಂದು ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಅದು ಕೂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಎಂಬುದು ವಿಶೇಷ. ಅದಕ್ಕೂ ಮುನ್ನ ಭಾರತ ತಂಡವು 4 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಎರಡು ಐಸಿಸಿ ನಿಗದಿ ಪಡಿಸಿರುವ ಅಭ್ಯಾಸ ಪಂದ್ಯಗಳಾದರೆ, ಮತ್ತೆರಡು ಪಂದ್ಯಗಳನ್ನು ಟೀಮ್ ಇಂಡಿಯಾ ಆಯೋಜಿಸುತ್ತಿದೆ.
ಅಂದರೆ ವೆಸ್ಟರ್ನ್ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ 2 ಅಭ್ಯಾಸ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಈ ಪಂದ್ಯಗಳು ಅಕ್ಟೋಬರ್ 10 ಮತ್ತು ಅಕ್ಟೋಬರ್ 12 ರಂದು ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಐಸಿಸಿ ನಿಗದಿಪಡಿಸಿದ ಅಭ್ಯಾಸ ಪಂದ್ಯಗಳನ್ನು ಆಡಲಿದೆ.
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಹೀಗಿದೆ:
ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.