AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ನಾವು ಸೆಮಿಫೈನಲ್ ಬಗ್ಗೆ ಯೋಚಿಸುತ್ತಿಲ್ಲ: ರೋಹಿತ್ ಶರ್ಮಾ

T20 World Cup 2022: ಆಸ್ಟ್ರೇಲಿಯಾದಲ್ಲಿ ವಿಭಿನ್ನ ರೀತಿಯ ಸವಾಲು ಇದೆ ಎಂದಿರುವ ಹಿಟ್​ಮ್ಯಾನ್ ಕಳೆದ ಕೆಲ ವರ್ಷಗಳಿಂದ ವಿಶ್ವಕಪ್ ಗೆಲ್ಲದಿರುವ ಬಗ್ಗೆ ಕೂಡ ನಮಗೆಲ್ಲರಿಗೂ ಗೊತ್ತಿದೆ.

T20 World Cup 2022: ನಾವು ಸೆಮಿಫೈನಲ್ ಬಗ್ಗೆ ಯೋಚಿಸುತ್ತಿಲ್ಲ: ರೋಹಿತ್ ಶರ್ಮಾ
Rohit Sharma
TV9 Web
| Edited By: |

Updated on: Oct 19, 2022 | 9:24 PM

Share

T20 World Cup 2022: ಟಿ20 ವಿಶ್ವಕಪ್​ನಲ್ಲಿ ಅಕ್ಟೋಬರ್ 23 ರಂದು ಪಾಕ್ (India vs Pakistan) ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ (Team India) ಶುಭಾರಂಭ ಮಾಡುವ ಇರಾದೆಯಲ್ಲಿದೆ. ವಿಶೇಷ ಎಂದರೆ ಈ ಪಂದ್ಯವು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ (Rohit Sharma) ಕ್ಯಾಪ್ಟನ್ ಆಗಿ ಮೊದಲ ವಿಶ್ವಕಪ್ ಪಂದ್ಯ. ಹೀಗಾಗಿಯೇ ಹಿಟ್​ಮ್ಯಾನ್ ಕೂಡ ಮೊದಲ ಪಂದ್ಯದಲ್ಲೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, ವಿಶ್ವಕಪ್‌ನಲ್ಲಿ ಭಾರತ ತಂಡದ ಯೋಜನೆ ಮತ್ತು ಸಿದ್ಧತೆಗಳ ಬಗ್ಗೆ ತಿಳಿಸಿದ್ದಾರೆ.

ನಾವು ಈಗ ಸೆಮಿಫೈನಲ್ ಮತ್ತು ಫೈನಲ್ ಬಗ್ಗೆ ಯೋಚಿಸುತ್ತಿಲ್ಲ. ಮೊದಲ ಸುತ್ತಿನಲ್ಲಿ ನಾವು ಪ್ರತಿ ಎದುರಾಳಿ ತಂಡವನ್ನು ಎದುರು ನೋಡುತ್ತಿದ್ದೇವೆ. ಅಲ್ಲದೆ ಎಲ್ಲಾ ಪಂದ್ಯವನ್ನು ಗೆಲ್ಲಲು ಗಮನ ಕೇಂದ್ರೀಕರಿಸುತ್ತೇವೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ವಿಭಿನ್ನ ರೀತಿಯ ಸವಾಲು ಇದೆ ಎಂದಿರುವ ಹಿಟ್​ಮ್ಯಾನ್ ಕಳೆದ ಕೆಲ ವರ್ಷಗಳಿಂದ ವಿಶ್ವಕಪ್ ಗೆಲ್ಲದಿರುವ ಬಗ್ಗೆ ಕೂಡ ನಮಗೆಲ್ಲರಿಗೂ ಗೊತ್ತಿದೆ. ಹೀಗಾಗಿ ನಾವು ಇಲ್ಲಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಮೊದಲ ಬಾರಿಗೆ ಅನೇಕ ಆಟಗಾರರು ಇಲ್ಲಿಗೆ ಬಂದಿದ್ದಾರೆ. ಹೀಗಾಗಿ ಹೊಸ ಸವಾಲುಗಳೊಂದಿಗೆ ನಾವು ಪಂದ್ಯ ಗೆಲ್ಲ್ಲುವ ವಿಶ್ವಾಸವಿದೆ ಎಂದು ರೋಹಿತ್ ಶರ್ಮಾ ಹೇಳಿದರು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಇನ್ನು ಪಾಕ್ ವಿರುದ್ಧದ ಮೊದಲ ಪಂದ್ಯದ ಬಗ್ಗೆ ಮಾತನಾಡಿರುವ ಹಿಟ್​ಮ್ಯಾನ್, ಎಂದಿನಂತೆ ಈ ಬಾರಿ ಕೂಡ ಇಂಡೊ-ಪಾಕ್ ಪಂದ್ಯ ಬ್ಲಾಕ್ ಬಸ್ಟರ್ ಆಗಿರಲಿದೆ. ಈ ಪಂದ್ಯವನ್ನು ನೋಡಲು ಹೆಚ್ಚಿನ ಅಭಿಮಾನಿಗಳು ಕೂಡ ಬರುತ್ತಾರೆ. ಆಟಗಾರನಾಗಿ, ಈ ಪಂದ್ಯ ಎಲ್ಲರಿಗೂ ಮುಖ್ಯವಾಗಿದೆ. ಅಲ್ಲದೆ ಪಾಕ್​ ವಿರುದ್ಧದ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಅಭಿಯಾನ ಆರಂಭಿಸುತ್ತೇವೆ ಎಂದು ತಿಳಿಸಿದರು.

ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶವನ್ನು ಹೊರತುಪಡಿಸಿ, ಭಾರತ ತಂಡವು ಸೂಪರ್-12 ರಲ್ಲಿ ಇತರ 2 ತಂಡಗಳ ವಿರುದ್ಧ ಕೂಡ ಆಡಬೇಕಿದೆ. ಈ ಗ್ರೂಪ್​ನಿಂದ ಸೆಮಿಫೈನಲ್​ ಪ್ರವೇಶಿಸುವ ತಂಡಗಳಲ್ಲಿ ನಾವು ಕೂಡ ಇರಲಿದ್ದೇವೆ ಎಂಬ ವಿಶ್ವಾಸವಿದೆ. ಆದರೆ ಸದ್ಯ ಮಟ್ಟಿಗೆ ನಾವು ಸೆಮಿಫೈನಲ್ ಹಾಗೂ ಫೈನಲ್ ಬಗ್ಗೆ ಯೋಚಿಸುತ್ತಿಲ್ಲ. ಬದಲಾಗಿ ಮೊದಲ ಸುತ್ತಿನಲ್ಲಿ ಉತ್ತಮ ಪ್ರದರ್ಶನ ನೀಡುವುದೇ ನಮ್ಮ ಗುರಿ ಎಂದು ರೋಹಿತ್ ಶರ್ಮಾ ತಿಳಿಸಿದರು.

ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:

  • ಅಕ್ಟೋಬರ್-23 : ಭಾರತ vs ಪಾಕಿಸ್ತಾನ – ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ
  • ಅಕ್ಟೋಬರ್-27: ಭಾರತ vs ಅರ್ಹತಾ ಸುತ್ತಿನ A ಗ್ರೂಪ್​ನ ರನ್ನರ್​ ಅಪ್ ತಂಡ – ಸಿಡ್ನಿ ಕ್ರಿಕೆಟ್ ಸ್ಟೇಡಿಯಂ
  • ಅಕ್ಟೋಬರ್- 30: ಭಾರತ vs ದಕ್ಷಿಣ ಆಫ್ರಿಕಾ – ಪರ್ತ್ ಸ್ಟೇಡಿಯಂ
  • ನವೆಂಬರ್-2: ಭಾರತ vs ಬಾಂಗ್ಲಾದೇಶ -ಅಡಿಲೇಡ್ ಓವಲ್
  • ನವೆಂಬರ್-6: ಭಾರತ vs ಅರ್ಹತಾ ಸುತ್ತಿನ B ಗ್ರೂಪ್​ನ ​ವಿನ್ನರ್ ತಂಡ

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್