AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟಿಗೆ ಒಂದೂ ಬಾಲ್ ತಾಗಲಿಲ್ಲ; ಕೋಪದಿಂದ ಬ್ಯಾಟ್ ಬೀಸಾಡಿದ ಪಾಕ್ ಬ್ಯಾಟ್ಸ್​ಮನ್..! ವಿಡಿಯೋ

T20 World cup 2022: ಈ ವಿಡಿಯೋದಲ್ಲಿ ಪಾಕ್ ಬ್ಯಾಟರ್ ಆಸಿಫ್ ಅಲಿ ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೇಳೆ ವೇಗದ ಎಸೆತಗಳಿಗೆ ಅಲಿಗೆ ಬ್ಯಾಟ್‌ನಲ್ಲಿ ಚೆಂಡನ್ನು ಮಿಡಲ್ ಮಾಡಲು ಸಾಧ್ಯವಾಗಲಿಲ್ಲ.

ಬ್ಯಾಟಿಗೆ ಒಂದೂ ಬಾಲ್ ತಾಗಲಿಲ್ಲ; ಕೋಪದಿಂದ ಬ್ಯಾಟ್ ಬೀಸಾಡಿದ ಪಾಕ್ ಬ್ಯಾಟ್ಸ್​ಮನ್..! ವಿಡಿಯೋ
Asif Ali
TV9 Web
| Edited By: |

Updated on:Nov 03, 2022 | 7:05 PM

Share

ಟಿ20 ವಿಶ್ವಕಪ್‌ನಲ್ಲಿ (T20 World Cup) ಪಾಕಿಸ್ತಾನ ತಂಡದ ಹೋರಾಟ ಮುಂದುವರಿದಿದೆ. ಮೊದಲೆರಡು ಪಂದ್ಯಗಳಲ್ಲಿ ಸೋಲನ್ನನುಭವಿಸಿದ ಪಾಕ್ ತಂಡ ಉಳಿದೆರಡು ಪಂದ್ಯಗಳಲ್ಲಿ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಆಫ್ರಿಕಾ ವಿರುದ್ಧ ಗೆದ್ದ ಪಾಕ್ ತಂಡಕ್ಕೆ ಸೆಮಿಫೈನಲ್​ಗೇರುವ ಕೊನೆಯ ಅವಕಾಶ ದೊರೆತಂದಾಗಿದೆ. ಆದರೆ ಪಾಕಿಸ್ತಾನಕ್ಕೆ (Pakistan) ಸೆಮಿಫೈನಲ್ ಹಾದಿ ಅಷ್ಟು ಸುಲಭವಲ್ಲ. ಏಕೆಂದರೆ ಪಾಕ್ ತಂಡ ಕೊನೆಯ ಪಂದ್ಯ ಗೆದ್ದರೂ, ಉಳಿದ ತಂಡಗಳ ಪಲಿತಾಂಶದ ಮೇಲೆ ಅದರ ಸೇಮಿಸ್ ಹಾದಿ ನಿರ್ಧಾರಗೊಳ್ಳಲಿದೆ. ಮೊದಲು ಭಾರತ ನಂತರ ಪಾಕಿಸ್ತಾನ ತಂಡ ಜಿಂಬಾಬ್ವೆ ಎದುರು ಸೋತಿತ್ತು. ಹೀಗಾಗಿ ತಂಡಕ್ಕೆ ಎಲ್ಲೆಡೆ ಟೀಕೆ ವ್ಯಕ್ತವಾಗುತ್ತಿದೆ. ಅಲ್ಲದೆ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ತಂಡವನ್ನು ಘೋಷಿಸಿದಾಗಿನಿಂದ, ಮಾಜಿ ಕ್ರಿಕೆಟಿಗರು ತಂಡದ ಆಯ್ಕೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಪರಿಣಿತರ ಪ್ರಶ್ನೆಗಳಿಗೆ ತಕ್ಕಂತೆ ತಂಡವು ಅಷ್ಟೇನೂ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಅದರ ಒತ್ತಡ ಈಗ ತಂಡ ಮತ್ತು ಆಟಗಾರರ ಮೇಲೆ ಗೋಚರಿಸುತ್ತದೆ.

ಫಖರ್ ಜಮಾ ಬದಲಿಗೆ ಆಸಿಫ್ ಅಲಿ ಆಯ್ಕೆ

ಪಾಕಿಸ್ತಾನದ ಎಡಗೈ ಬ್ಯಾಟ್ಸ್‌ಮನ್ ಫಖರ್ ಜಮಾನ್ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರಿಂದ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈಬಿಡಲಾಗಿತ್ತು. ಹೀಗಾಗಿ ಅವರ ಸ್ಥಾನಕ್ಕೆ ಆಸಿಫ್ ಅಲಿ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಆಸಿಫ್ ಅಲಿಗೆ ವಿಶ್ವಕಪ್‌ನಲ್ಲಿ ಇನ್ನೂ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಕ್ಕಿಲ್ಲ.

ಚೆಂಡು ಬ್ಯಾಟಿಗೆ ತಾಗಲಿಲ್ಲ

ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡ ನೆಟ್ಸ್​ನಲ್ಲಿ ಅಭ್ಯಾಸ ನಡೆಸಿತ್ತು. ಈ ಅಭ್ಯಾಸ ವಿಡಿಯೋ ಈಗ ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪಾಕ್ ಬ್ಯಾಟರ್ ಆಸಿಫ್ ಅಲಿ ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೇಳೆ ವೇಗದ ಎಸೆತಗಳಿಗೆ ಅಲಿಗೆ ಬ್ಯಾಟ್‌ನಲ್ಲಿ ಚೆಂಡನ್ನು ಮಿಡಲ್ ಮಾಡಲು ಸಾಧ್ಯವಾಗಲಿಲ್ಲ. ಬದಲಿಗೆ ಎಲ್ಲಾ ಚೆಂಡುಗಳು ಆಸಿಫ್ ಅಲಿ ದೇಹಕ್ಕೆ ತಗುಲಿತ್ತಿದ್ದವು.

ಇದರಿಂದ ಸಿಟ್ಟಿಗೆದ್ದ ಆಸಿಫ್ ಅಲಿ ತನ್ನ ಬ್ಯಾಟನ್ನು ಕೈಯಿಂದ ಬೀಸಾಡಿದರು. ಆದರೆ ಸ್ವಲ್ಪ ಹೊತ್ತಿನ ನಂತರ ಸಮಾದಾನ ಮಾಡಿಕೊಂಡ ಅಲಿ, ಅದೇ ಬ್ಯಾಟ್ ಅನ್ನು ಎತ್ತಿಕೊಂಡು ಮತ್ತೆ ತಮ್ಮ ಬ್ಯಾಟಿಂಗ್ ಅಭ್ಯಾಸವನ್ನು ಮುಂದುವರೆಸಿದರು. ಆಸಿಫ್ ಅಲಿ ಬ್ಯಾಟ್ ಎಸೆದ ವಿಡಿಯೋ ಈಗ ಸಖತ್ ವೈರಲ್ ಆಗಿದ್ದು, ಇದು ಪಾಕಿಸ್ತಾನ ತಂಡದ ಮೇಲಿನ ಒತ್ತಡವನ್ನು ತೋರಿಸುತ್ತದೆ ಎಂದು ಹಲವರು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಆಫ್ರಿಕಾ ವಿರುದ್ಧ ಗೆದ್ದ ಪಾಕಿಸ್ತಾನ

ಇಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನ ಬಲಿಷ್ಠ ಆಫ್ರಿಕಾ ತಂಡವನ್ನು 33 ರನ್​ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ತಂಡ ಇಫ್ತಿಕರ್ ಹಾಗೂ ಶಾದಾಬ್ ಅವರ ಸ್ಫೋಟಕ ಅರ್ಧಶಕತದ ನೆರವಿನಿಂದ 20 ಓವರ್​ಗಳ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 185 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಪಾಕ್ ಬೌಲರ್​ಗಳ ದಾಳಿಗೆ ಸಿಲುಕಿದ ಆಫ್ರಿಕಾ ಬ್ಯಾಟರ್​ಗಳು ಹೆಚ್ಚು ರನ್​ಗಳಿಸಲಾಗದೆ ಬೇಗನೇ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ನಿಗದಿತ 20 ಓವರ್​ಗಳಲ್ಲಿ ಆಫ್ರಿಕಾ ತಂಡ 9 ವಿಕೆಟ್​ ಕಳೆದುಕೊಂಡು ಕೇವಲ 108 ರನ್ ಗಳಿಸಲಷ್ಟೇ ಶಕ್ತವಾಯಿತು.

Published On - 7:03 pm, Thu, 3 November 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ