AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಸೆಮಿಫೈನಲ್​ಗೇರಲು ಟೀಮ್ ಇಂಡಿಯಾ ಇನ್ನು ಎಷ್ಟು ಪಂದ್ಯ ಗೆಲ್ಲಬೇಕು?

T20 World Cup 2022: ಸದ್ಯ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು 3 ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 5 ಪಾಯಿಂಟ್ ಮಾತ್ರ. ಅಂದರೆ ಜಿಂಬಾಬ್ವೆ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು.

Team India: ಸೆಮಿಫೈನಲ್​ಗೇರಲು ಟೀಮ್ ಇಂಡಿಯಾ ಇನ್ನು ಎಷ್ಟು ಪಂದ್ಯ ಗೆಲ್ಲಬೇಕು?
Team India
TV9 Web
| Edited By: |

Updated on: Oct 30, 2022 | 9:24 PM

Share

T20 World Cup 2022:  ಪರ್ತ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಸೋಲನುಭವಿಸಿದೆ. ಇದರೊಂದಿಗೆ ಆಡಿದ ಮೂರು ಪಂದ್ಯಗಳಲ್ಲಿ 2 ಜಯ, 1 ಸೋಲಿನೊಂದಿಗೆ ಭಾರತ ತಂಡವು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನ ಅಲಂಕರಿಸಿದೆ. ಇನ್ನು ಟೀಮ್ ಇಂಡಿಯಾಗೆ ಉಳಿದಿರುವುದು ಕೇವಲ 2 ಪಂದ್ಯ ಮಾತ್ರ. ಅಂದರೆ ಬಾಂಗ್ಲಾದೇಶ್ ಹಾಗೂ ಜಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಪಂದ್ಯಗಳನ್ನಾಡಬೇಕಿದ್ದು,  ಈ ಎರಡೂ ಪಂದ್ಯಗಳಲ್ಲಿ ಟೀಮ್ ಭಾರತ ಭರ್ಜರಿಯಾಗಿ ಜಯಗಳಿಸಿ ಸೆಮಿಫೈನಲ್​ಗೇರಬಹುದು.

ಏಕೆಂದರೆ ಸದ್ಯ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು 3 ಪಂದ್ಯಗಳಿಂದ ಕಲೆಹಾಕಿರುವುದು ಕೇವಲ 5 ಪಾಯಿಂಟ್ ಮಾತ್ರ. ಅಂದರೆ ಜಿಂಬಾಬ್ವೆ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಸೌತ್ ಆಫ್ರಿಕಾಗೆ 1 ಪಾಯಿಂಟ್ ಮಾತ್ರ ಲಭಿಸಿತ್ತು. ಅದರಂತೆ ಇದೀಗ ಸೌತ್ ಆಫ್ರಿಕಾ ತಂಡವು 3 ಪಂದ್ಯಗಳಿಂದ ಒಟ್ಟು 5 ಪಾಯಿಂಟ್ ಹೊಂದಿದೆ.

ಇನ್ನುಳಿದ ಎರಡು ಪಂದ್ಯಗಳನ್ನು ಸೌತ್ ಆಫ್ರಿಕಾ ಗೆದ್ದರೂ 9 ಪಾಯಿಂಟ್ ಆಗಲಿದೆ. ಇತ್ತ ಟೀಮ್ ಇಂಡಿಯಾ ಕೊನೆಯ 2 ಪಂದ್ಯಗಳನ್ನು ಗೆದ್ದರೆ 8 ಪಾಯಿಂಟ್​ಗಳೊಂದಿಗೆ 2ನೇ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿ ಕೊಡಬಹುದು. ಹೀಗಾಗಿ ಮುಂದಿನ ಎರಡು ಪಂದ್ಯಗಳು ಭಾರತದ ಪಾಲಿಗೆ ತುಂಬಾ ಮಹತ್ವದ್ದು.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಒಂದು ವೇಳೆ ಟೀಮ್ ಇಂಡಿಯಾ ಮುಂದಿನ 2 ಪಂದ್ಯಗಳಲ್ಲಿ 1 ರಲ್ಲಿ ಸೋತರೂ ಬಾಂಗ್ಲಾದೇಶ್ ಅಥವಾ ಜಿಂಬಾಬ್ವೆ  ತಂಡಗಳಿಗೂ ಸೆಮಿಫೈನಲ್​ಗೇರುವ ಅವಕಾಶ ದೊರೆಯಲಿದೆ. ಅಂದರೆ ಉಳಿದ ತಂಡಗಳು 6 ಪಾಯಿಂಟ್ ಕಲೆಹಾಕಿದರೆ ನೆಟ್​ ರನ್​ ರೇಟ್ ಅನ್ನು ಅವಲಂಭಿಸಬೇಕಾಗುತ್ತದೆ.

ಹೀಗಾಗಿ ಮುಂದಿನ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೇರಲು ಪ್ರಯತ್ನಿಸಬಹುದು. ಇದರಿಂದ ನೆಟ್​ ರನ್​ ರೇಟ್ ಕೂಡ ಲೆಕ್ಕಕ್ಕೆ ಬರುವುದಿಲ್ಲ. ಹಾಗಾಗಿ ಮುಂದಿನ 2 ಪಂದ್ಯಗಳು ಭಾರತ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎಂದೇ ಹೇಳಬಹುದು.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ) , ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ , ಅರ್ಷದೀಪ್ ಸಿಂಗ್ , ರಿಷಭ್ ಪಂತ್ , ದೀಪಕ್ ಹೂಡಾ, ಹರ್ಷಲ್ ಪಟೇಲ್. ಯುಜ್ವೇಂದ್ರ ಚಹಾಲ್.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!