T20 World Cup 2022: ಸೆಮಿಫೈನಲ್​ಗೇರಲು ಜಿಂಬಾಬ್ವೆಗೆ ಇದೆ ಉತ್ತಮ ಅವಕಾಶ

Semifinal Scenario for Zimbabwe: ಮುಂದಿನ ಪಂದ್ಯಗಳಲ್ಲಿ ಜಿಂಬಾಬ್ವೆ ತಂಡದಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಚೊಚ್ಚಲ ಬಾರಿ ಸೆಮಿಫೈನಲ್ ಆಡುವ ಅವಕಾಶ ಜಿಂಬಾಬ್ವೆ ಪಾಲಾಗಲಿದೆಯಾ ಕಾದು ನೋಡಬೇಕಿದೆ.

T20 World Cup 2022: ಸೆಮಿಫೈನಲ್​ಗೇರಲು ಜಿಂಬಾಬ್ವೆಗೆ ಇದೆ ಉತ್ತಮ ಅವಕಾಶ
Zimbabwe
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 29, 2022 | 2:25 PM

T20 World Cup 2022:  ಟಿ20 ವಿಶ್ವಕಪ್​ನ ಸೂಪರ್​-12 ಪಂದ್ಯಗಳ ಲೆಕ್ಕಾಚಾರಗಳು ತಲೆಕೆಳಗಾಗುತ್ತಿದೆ. ಒಂದೆಡೆ ಕೆಲ ತಂಡಗಳು ಬಲಿಷ್ಠ ಪಡೆಗಳಿಗೆ ಸೋಲುಣಿಸುತ್ತಿದ್ದರೆ, ಮತ್ತೊಂದೆಡೆ ಮಳೆಯ ಕಾರಣ ಕೆಲ ಪಂದ್ಯಗಳು ರದ್ದಾಗಿವೆ. ಹೀಗಾಗಿ ಬಹುತೇಕ ತಂಡಗಳ ನಡುವೆ ಇದೀಗ ಸೆಮಿಫೈನಲ್​ಗೇರುವ ಫೈಟ್ ಏರ್ಪಟ್ಟಿದೆ. ಈ ಪಟ್ಟಿಯಲ್ಲಿ ಜಿಂಬಾಬ್ವೆ (Zimbabwe) ತಂಡ ಕೂಡ ಇರುವುದು ವಿಶೇಷ. ಗ್ರೂಪ್​- 2 ನಲ್ಲಿರುವ ಜಿಂಬಾಬ್ವೆ ತಂಡವು ಇದುವೆರೆಗೆ ಸೋಲನುಭವಿಸಿಲ್ಲ. ಸೌತ್ ಆಫ್ರಿಕಾ ವಿರುದ್ಧ ಆಡಿದ ಮೊದಲ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಜಿಂಬಾಬ್ವೆಗೆ ಒಂದು ಪಾಯಿಂಟ್​ ಲಭಿಸಿತ್ತು. ಇದಾದ ಬಳಿಕ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ 2 ಅಂಕಗಳನ್ನು ಕಲೆಹಾಕಿದೆ. ಅದರಂತೆ ಇದೀಗ 2 ಪಂದ್ಯಗಳಿಂದ 3 ಅಂಕ ಪಡೆದು ಪಾಯಿಂಟ್ ಟೇಬಲ್​ನಲ್ಲಿ 3ನೇ ಸ್ಥಾನದಲ್ಲಿದೆ.

ಇತ್ತ ಎಲ್ಲರೂ ಪಾಕಿಸ್ತಾನ್ ಹಾಗೂ ಸೌತ್ ಆಫ್ರಿಕಾ ಸೆಮಿಫೈನಲ್​ ಹಾದಿಯ ಚರ್ಚೆಯಲ್ಲಿದ್ದರೆ ಅತ್ತ ಜಿಂಬಾಬ್ವೆ ಕೂಡ ಮುಂದಿನ ಹಂತಕ್ಕೇರುವ ವಿಶ್ವಾಸದಲ್ಲಿದೆ. ಏಕೆಂದರೆ ಜಿಂಬಾಬ್ವೆಗೆ ಇನ್ನುಳಿದಿರುವುದು 3 ಪಂದ್ಯಗಳು. ಅದು ಕೂಡ ಬಾಂಗ್ಲಾದೇಶ್, ನೆದರ್​ಲ್ಯಾಂಡ್ಸ್​ ಹಾಗೂ ಭಾರತ ವಿರುದ್ಧ. ಇಲ್ಲಿ ಟೀಮ್ ಇಂಡಿಯಾವನ್ನು ಹೊರತುಪಡಿಸಿದರೆ ಉಳಿದ ತಂಡಗಳು ಜಿಂಬಾಬ್ವೆಗೆ ಸರಿಸಮಾನವಾದ ತಂಡಗಳು ಎನ್ನಬಹುದು. ಹೀಗಾಗಿಯೇ ಸೆಮಿ ಫೈನಲ್​ಗೇರುವ ವಿಶ್ವಾಸದಲ್ಲಿದೆ.

ಜಿಂಬಾಬ್ವೆ ಹೇಗೆ ಸೆಮಿಫೈನಲ್​ಗೇರಬಹುದು?

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್
  • – ಜಿಂಬಾಬ್ವೆ ತನ್ನ ಮುಂದಿನ 3 ಪಂದ್ಯಗಳಲ್ಲಿ 2 ಜಯ ದಾಖಲಿಸಬೇಕು.
  • – ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ್ ವಿರುದ್ಧ ಸೋಲಬೇಕು.

ಅಂದರೆ ಇಲ್ಲಿ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ್ ತಂಡಗಳು ಸೌತ್ ಆಫ್ರಿಕಾವನ್ನು ಸೋಲಿಸಿದರೆ ಜಿಂಬಾಬ್ವೆ ಹಾದಿ ಸುಗಮವಾಗಲಿದೆ. ಏಕೆಂದರೆ ಸೌತ್ ಆಫ್ರಿಕಾ ಮುಂದಿನ 2 ಪಂದ್ಯಗಳನ್ನು ಸೋತು, ಕೊನೆಯ ಪಂದ್ಯ ಗೆದ್ದರೂ 5 ಪಾಯಿಂಟ್ ಮಾತ್ರ ಆಗಲಿದೆ.

ಇತ್ತ ಜಿಂಬಾಬ್ವೆ ತಂಡವು ಟೀಮ್ ಇಂಡಿಯಾ ವಿರುದ್ಧ ಸೋತರೂ, ಬಾಂಗ್ಲಾದೇಶ್ ಹಾಗೂ ನೆದರ್​ಲ್ಯಾಂಡ್ಸ್​ ವಿರುದ್ಧ ಗೆದ್ದರೆ ಸಾಕು. ಇದರಿಂದ ಒಟ್ಟು 7 ಪಾಯಿಂಟ್ ಪಡೆಯಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಮುಂದಿನ 3 ಪಂದ್ಯಗಳನ್ನು ಗೆದ್ದರೂ 6 ಪಾಯಿಂಟ್ ಮಾತ್ರ ಸಿಗಲಿದೆ. ಇದರಿಂದ 7 ಪಾಯಿಂಟ್ ಹೊಂದಿರುವ ಜಿಂಬಾಬ್ವೆ ಸೆಮಿಫೈನಲ್​ ಆಡುವ ಅವಕಾಶ ಪಡೆಯಲಿದೆ.

ಹೀಗಾಗಿ ಜಿಂಬಾಬ್ವೆ ತಂಡವು ಬಲಿಷ್ಠ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಗೆಲ್ಲುವುದನ್ನು ಎದುರು ನೋಡುತ್ತಿದೆ. ಹಾಗೆಯೇ ಪಾಕಿಸ್ತಾನ್ ತಂಡ ಕೂಡ ಸೌತ್ ಆಫ್ರಿಕಾ ವಿರುದ್ಧ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದೆ. ಇದರಿಂದ ಜಿಂಬಾಬ್ವೆಗೆ ಸೆಮೀಸ್ ಹಾದಿ ಸುಗಮವಾಗಲಿದೆ.

ಇದನ್ನೂ ಓದಿ: Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ

ಅಂದರೆ ಜಿಂಬಾಬ್ವೆ ಟೀಮ್ ಇಂಡಿಯಾ ವಿರುದ್ಧ ಸೋತರೂ, ಬಾಂಗ್ಲಾದೇಶ್ ಹಾಗೂ ನೆದರ್​ಲ್ಯಾಂಡ್ಸ್​ ವಿರುದ್ಧ ಗೆಲ್ಲುವ ಮೂಲಕ ನೇರವಾಗಿ ಸೆಮಿಫೈನಲ್​ಗೇರುವ ಕನಸು ಹೊಂದಿದೆ. ಅದರಂತೆ ಮುಂದಿನ ಪಂದ್ಯಗಳಲ್ಲಿ ಜಿಂಬಾಬ್ವೆ ತಂಡದಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಚೊಚ್ಚಲ ಬಾರಿ ಸೆಮಿಫೈನಲ್ ಆಡುವ ಅವಕಾಶ ಜಿಂಬಾಬ್ವೆ ಪಾಲಾಗಲಿದೆಯಾ ಕಾದು ನೋಡಬೇಕಿದೆ.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?