AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: ಟೀಮ್ ಇಂಡಿಯಾಗೆ ಖಡಕ್ ಎಚ್ಚರಿಕೆ ನೀಡಿದ ಸೌತ್ ಆಫ್ರಿಕಾ ವೇಗಿ

India vs South Africa: ಭಾನುವಾರ ಪರ್ತ್​ ಮೈದಾನದಲ್ಲಿ ಭಾರತ-ಸೌತ್ ಆಫ್ರಿಕಾ ಮುಖಾಮುಖಿಯಾಗಲಿದ್ದು, ಬಲಿಷ್ಠ ತಂಡಗಳ ಹಣಾಹಣಿಯಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

India vs South Africa: ಟೀಮ್ ಇಂಡಿಯಾಗೆ ಖಡಕ್ ಎಚ್ಚರಿಕೆ ನೀಡಿದ ಸೌತ್ ಆಫ್ರಿಕಾ ವೇಗಿ
ಟೀಮ್ ಇಂಡಿಯಾ
TV9 Web
| Edited By: |

Updated on: Oct 29, 2022 | 8:32 PM

Share

T20 World Cup 2022:  ಭಾನುವಾರ ಪರ್ತ್​ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ಮುಖಾಮುಖಿಯಾಗಲಿದೆ. ಸೆಮಿಫೈನಲ್​ ಹಾದಿಯಲ್ಲಿರುವ ಉಭಯ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಏಕೆಂದರೆ 2 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಟೀಮ್ ಇಂಡಿಯಾ (Team India) 4 ಅಂಕ ಪಡೆದಿದ್ದರೆ, 2 ಪಂದ್ಯಗಳಲ್ಲಿ 1 ಜಯ, ಒಂದು ಡ್ರಾ ಹೊಂದಿರುವ ಸೌತ್ ಆಫ್ರಿಕಾ 3 ಅಂಕಗಳನ್ನು ಹೊಂದಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಲಿದೆ.

ಇತ್ತ ಈ ಮಹತ್ವದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಸೌತ್ ಆಫ್ರಿಕಾದ ಸ್ಟಾರ್ ವೇಗಿ ಅನ್ರಿಕ್ ನೋಕಿಯಾ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ನಾವು ಅತ್ಯುತ್ತಮ ವೇಗದ ಬೌಲಿಂಗ್ ವಿಭಾಗವನ್ನು ಹೊಂದಿದ್ದೇವೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ಧ ನಮಗೆ ಗೆಲ್ಲುತ್ತೇವೆ. ನಮ್ಮ ಪೇಸ್ ಅಟ್ಯಾಕ್ ಮುಂದೆ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಆಡುವುದು ಕಷ್ಟ. ಹೀಗಾಗಿ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಅನ್ರಿಕ್ ನೋಕಿಯಾ ತಿಳಿಸಿದ್ದಾರೆ.

ನಮ್ಮ ವೇಗಿಗಳೊಂದಿಗೆ ಇಬ್ಬರು ಯುವ ಸ್ಪಿನ್ನರ್‌ಗಳನ್ನು ಹೊಂದಿದ್ದೇವೆ. ಹೀಗಾಗಿ ಭಾನುವಾರ ನಮ್ಮ ಬೌಲರ್​ಗಳು ಗೆಲುವನ್ನು ಎದುರು ನೋಡುತ್ತಿದ್ದಾರೆ. ಸದ್ಯ ನಾವು ಏನು ಮಾಡಬೇಕು ಎಂಬುದರ ಮೇಲೆ ಕೇಂದ್ರೀಕರಿಸಿದ್ದೇವೆ. ಗೆಲುವ ಬಗ್ಗೆ ನನಗೆ ಖಾತ್ರಿ ಇದೆ ಎಂದು ನೋಕಿಯಾ ಹೇಳಿದ್ದಾರೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಅಂದರೆ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾ ವಿರುದ್ಧ ನಾಲ್ಕು ವೇಗಿಗಳೊಂದಿಗೆ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಪೇಸ್ ಅಟ್ಯಾಕ್​ನೊಂದಿಗೆ ಭಾರತೀಯ ಬ್ಯಾಟ್ಸ್​ಮನ್​ಗಳನ್ನು ಇಕ್ಕಟಿಗೆ ಸಿಲುಕಿಸಲು ಸೌತ್ ಆಫ್ರಿಕಾ ಪ್ಲ್ಯಾನ್ ರೂಪಿಸುತ್ತಿದೆ.

ಅಂದಹಾಗೆ ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯಾ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಹೀಗಾಗಿಯೇ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ವಿಶ್ವಾಸದಲ್ಲಿದ್ದಾರೆ.  ಒಟ್ಟಿನಲ್ಲಿ ಭಾನುವಾರ ಪರ್ತ್​ ಮೈದಾನದಲ್ಲಿ ಭಾರತ-ಸೌತ್ ಆಫ್ರಿಕಾ ಮುಖಾಮುಖಿಯಾಗಲಿದ್ದು, ಬಲಿಷ್ಠ ತಂಡಗಳ ಹಣಾಹಣಿಯಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ) , ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ , ಅರ್ಷದೀಪ್ ಸಿಂಗ್ , ರಿಷಭ್ ಪಂತ್ , ದೀಪಕ್ ಹೂಡಾ, ಹರ್ಷಲ್ ಪಟೇಲ್. ಯುಜ್ವೇಂದ್ರ ಚಹಾಲ್.

ಸೌತ್ ಆಫ್ರಿಕಾ ತಂಡ:

ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ) , ರಿಲೀ ರೊಸ್ಸೊ , ಐಡೆನ್ ಮಾರ್ಕ್ರಾಮ್ , ಟ್ರಿಸ್ಟಾನ್ ಸ್ಟಬ್ಸ್ , ಡೇವಿಡ್ ಮಿಲ್ಲರ್ , ವೇಯ್ನ್ ಪಾರ್ನೆಲ್ , ಕೇಶವ್ ಮಹಾರಾಜ್ , ಕಗಿಸೊ ರಬಾಡ , ಅನ್ರಿಕ್ ನೋಕಿಯಾ, ತಬ್ರೇಝ್ ಶಮ್ಸಿ , ಲುಂಗಿ ಎನ್​ಗಿಡಿ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್.

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ