T20 World Cup 2022: ಲಂಕಾ ತಂಡದ ಸ್ಟಾರ್ ವೇಗಿ ವಿಶ್ವಕಪ್‌ನಿಂದ ಔಟ್..! ಮತ್ತಿಬ್ಬರು ಆಟಗಾರರಿಗೆ ಇಂಜುರಿ

T20 World Cup 2022: ಚಮೀರಾ ಗಾಯದಿಂದ ಶ್ರೀಲಂಕಾ ತಲ್ಲಣಗೊಂಡಿರುವುದು ಮಾತ್ರವಲ್ಲದೆ ತಂಡದ ಇನ್ನು ಇಬ್ಬರು ಆಟಗಾರರು ಗಾಯಗೊಂಡಿದ್ದು, ಅವರ ಬಗ್ಗೆಯೂ ಈ ತಂಡ ಚಿಂತಿತವಾಗಿದೆ.

T20 World Cup 2022: ಲಂಕಾ ತಂಡದ ಸ್ಟಾರ್ ವೇಗಿ ವಿಶ್ವಕಪ್‌ನಿಂದ ಔಟ್..! ಮತ್ತಿಬ್ಬರು ಆಟಗಾರರಿಗೆ ಇಂಜುರಿ
ಲಂಕಾ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on: Oct 19, 2022 | 12:29 PM

ಹಾಲಿ ಏಷ್ಯಾಕಪ್ ಚಾಂಪಿಯನ್​ಗಳಿಗೆ ಅದ್ಯಾಕೋ ಶಕುನ ಸರಿ ಇಲ್ಲ ಎಂದು ತೊರುತ್ತದೆ. ವಿಶ್ವಕಪ್​ನ (T20 World Cup 2022) ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲೇ ನಮೀಬಿಯಾ ವಿರುದ್ಧ ಹೀನಾಯವಾಗಿ ಸೋತಿದ್ದ ಲಂಕನ್ನರಿಗೆ ಮತ್ತೊಂದು ಆಘಾಥ ಎದುರಾಗಿದೆ. ತಂಡದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾದ ದುಷ್ಮಂತ ಚಮೀರಾ (Dushmantha Chamira) ಇಂಜುರಿ ಸಮಸ್ಯೆಯಿಂದ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕ್‌ಬಝ್ (Cricbuzz) ವೆಬ್‌ಸೈಟ್ ತನ್ನ ವರದಿಯಲ್ಲಿ ಈ ಮಾಹಿತಿಯನ್ನು ನೀಡಿದೆ. ಈ ಬಲಗೈ ವೇಗದ ಬೌಲರ್​ನ ಕಾಲಿಗೆ ಗಾಯವಾಗಿದ್ದು, ಈ ಕಾರಣದಿಂದಾಗಿ ಅವರು ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ.

ಬಹಳ ದಿನಗಳಿಂದ ಈ ಇಂಜುರಿಯಿಂದ ಬಳಲುತ್ತಿರುವ ಚಮೀರಾ, ಈ ಬಾರಿಯ ಏಷ್ಯಾಕಪ್​ನಿಂದಲೂ ಹೊರಗುಳಿದಿದ್ದರು. ಆ ಬಳಿಕ ಈ ಇಂಜುರಿಯಿಂದ ಚೇತರಿಸಿಕೊಂಡಿದ್ದ ಅವರನ್ನು ವಿಶ್ವಕಪ್​ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಈ ವಿಶ್ವಕಪ್‌ನಲ್ಲಿ ಇದುವರೆಗೆ ತಂಡದ ಪರ ಕೇವಲ ಎರಡು ಅರ್ಹತಾ ಪಂದ್ಯಗಳನ್ನು ಆಡಿರುವ ಚಮೀರಾ ಈಗ ಇಡೀ ಟೂರ್ನಿಯಿಂದಲೇ ಹೊರಗುಳಿಯಬೇಕಿದೆ.

ಯುಎಇ ವಿರುದ್ಧ ಮಿಂಚಿನ ಪ್ರದರ್ಶನ

ಯುಎಇ ವಿರುದ್ಧ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಚಮೀರಾ ಅಮೋಘ ಆಟ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಚಮೀರಾ 15 ರನ್‌ಗಳಿಗೆ ಮೂರು ವಿಕೆಟ್ ಪಡೆದಿದ್ದರು. ಆದರೆ ನಮೀಬಿಯಾ ವಿರುದ್ಧ ನಡೆದ ಮೊದಲ ಅರ್ಹತಾ ಪಂದ್ಯದಲ್ಲಿ ಚಮೀರಾ ಯಶಸ್ವಿಯಾಗಿರಲಿಲ್ಲ. ಈ ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿದ್ದ ಚಮೀರಾ, 39 ರನ್‌ ಬಿಟ್ಟುಕೊಟ್ಟು ಕೇವಲ 1 ವಿಕೆಟ್ ಪಡೆದಿದ್ದರು. ಈಗ ಯುಎಇ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಗಾಯಗೊಂಡಿರುವ ಚಮೀರ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ: ಆಫ್ಘಾನ್ ಆಟಗಾರನನ್ನು ಆಸ್ಪತ್ರೆಗೆ ಸೇರುವಂತೆ ಮಾಡಿದ ಪಾಕ್ ವೇಗಿಯ ಯಾರ್ಕರ್! ವಿಡಿಯೋ ನೋಡಿ

ಇತರ ಆಟಗಾರರಿಗೂ ಇಂಜುರಿ ಸಮಸ್ಯೆ

ಚಮೀರಾ ಗಾಯದಿಂದ ಶ್ರೀಲಂಕಾ ತಲ್ಲಣಗೊಂಡಿರುವುದು ಮಾತ್ರವಲ್ಲದೆ ತಂಡದ ಇನ್ನು ಇಬ್ಬರು ಆಟಗಾರರು ಗಾಯಗೊಂಡಿದ್ದು, ಅವರ ಬಗ್ಗೆಯೂ ಈ ತಂಡ ಚಿಂತಿತವಾಗಿದೆ. ಶ್ರೀಲಂಕಾದ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಮತ್ತು ವೇಗದ ಬೌಲರ್ ಪ್ರಮೋದ್ ಮಧುಶನ್ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ತಂಡದ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ. ನಮೀಬಿಯಾ ವಿರುದ್ಧ ಸೋತ ನಂತರ ಲಂಕಾ ಪಡೆ ಪ್ರಸ್ತುತ ತಮ್ಮ ಗುಂಪಿನಲ್ಲಿ ಮೂರನೇ ಸ್ಥಾನದಲ್ಲಿದೆ. ಶ್ರೀಲಂಕಾ ಈಗ ನೆದರ್ಲೆಂಡ್ಸ್ ವಿರುದ್ಧ ತನ್ನ ಮೂರನೇ ಕ್ವಾಲಿಫೈಯರ್ ಪಂದ್ಯವನ್ನು ಆಡಬೇಕಾಗಿದೆ. ನೆದರ್ಲೆಂಡ್ ಇದುವರೆಗೆ ಎರಡು ಪಂದ್ಯಗಳನ್ನು ಆಡಿದ್ದು ಎರಡನ್ನೂ ಗೆದ್ದಿದೆ. ಒಂದು ವೇಳೆ ನೆದರ್ಲೆಂಡ್ ತಂಡ ಶ್ರೀಲಂಕಾವನ್ನು ಸೋಲಿಸಿದರೆ, ಅದು ಮುಂದಿನ ಸುತ್ತಿಗೆ ಅರ್ಹತೆ ಪಡೆಯಲಿದೆ. ಹಾಗೆಯೇ ಸೋತ ಶ್ರೀಲಂಕಾ ತಂಡ ವಿಶ್ವಕಪ್‌ನಿಂದಲೇ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಾಗಲಿವೆ.

ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಫೈನಲ್‌ ಆಡಿರುವ ಶ್ರೀಲಂಕಾ ತಂಡ 2009 ರಲ್ಲಿ ಪಾಕ್ ವಿರುದ್ಧ ಸೋತು ಚಾಂಪಿಯನ್ ಆಗುವಲ್ಲಿ ವಿಫಲವಾಗಿತ್ತು. ಇದರ ನಂತರ 2012 ರಲ್ಲಿ ನಡೆದ ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತು ಮತ್ತೊಮ್ಮೆ ಅವಕಾಶ ವಂಚಿತವಾಯಿತು. ಆದರೆ 2014 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಭಾರತವನ್ನು ಸೋಲಿಸುವುದರೊಂದಿಗೆ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ