T20 World Cup 2022: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ದ್ರಾವಿಡ್ ಮಾಸ್ಟರ್ ಪ್ಲ್ಯಾನ್
T20 World Cup 2022: ಬ್ಯಾಕ್ ಟು ಬ್ಯಾಕ್ ಅಭ್ಯಾಸ ಪಂದ್ಯಗಳು ಹಾಗೂ ಕಠಿಣ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಟಿ20 ವಿಶ್ವಕಪ್ ಗೆಲ್ಲಲು ಟೀಮ್ ಇಂಡಿಯಾ ಭರ್ಜರಿ ತಯಾರಿಯಲ್ಲಿದೆ.
T20 World Cup 2022: ಟಿ20 ವಿಶ್ವಕಪ್ಗೆ ದಿನಗಣನೆ ಶುರುವಾಗಿದೆ. ಈಗಾಗಲೇ 14 ಸದಸ್ಯರ ಟೀಮ್ ಇಂಡಿಯಾ (Team Indai) ಆಸ್ಟ್ರೇಲಿಯಾಗೆ ತೆರಳಿದೆ. ಅಕ್ಟೋಬರ್ 16 ರಿಂದ ಟಿ20 ವಿಶ್ವಕಪ್ ಶುರುವಾದರೂ ಟೀಮ್ ಇಂಡಿಯಾ ಮೊದಲ ಪಂದ್ಯ ಆಡಲಿರುವುದು ಅಕ್ಟೋಬರ್ 23 ರಂದು. ಅಂದರೆ ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಇದರಲ್ಲಿ 8 ತಂಡಗಳು ಭಾಗವಹಿಸಲಿದ್ದು, ಅದರಲ್ಲಿ ಗೆದ್ದ 4 ತಂಡಗಳು ಸೂಪರ್-12 ಗೆ ಅರ್ಹತೆ ಪಡೆಯಲಿದೆ. ಅದರಂತೆ ಅಕ್ಟೋಬರ್ 22 ರಿಂದ ಸೂಪರ್ 12 ಪಂದ್ಯಗಳು ಶುರುವಾಗಲಿದೆ. ಇನ್ನು ಸೂಪರ್-12 ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಆಡಲಿದ್ದು, ಅದು ಕೂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಎಂಬುದು ವಿಶೇಷ.
ಆದರೆ ಈ ಮಹತ್ವದ ಪಂದ್ಯಕ್ಕೂ ಮುನ್ನ ಭರ್ಜರಿ ಅಭ್ಯಾಸಕ್ಕಾಗಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮಾಸ್ಟರ್ ಪ್ಲ್ಯಾನ್ಗಳನ್ನು ರೂಪಿಸಿದ್ದಾರೆ. ಅದರಂತೆ ಮೊದಲ ಪಂದ್ಯಕ್ಕೂ ಮುಂಚಿತವಾಗಿ ಟೀಮ್ ಇಂಡಿಯಾ ಹಲವು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅಲ್ಲದೆ ನೆಟ್ಸ್ನಲ್ಲೂ ಗಂಟೆಗಳ ಕಾಲ ಬೆವರಿಳಿಸಲಿದೆ.
ಪರ್ತ್‌ನಲ್ಲಿ ಭಾರತದ ತರಬೇತಿ ವೇಳಾಪಟ್ಟಿಯ ಪ್ರಕಾರ 2 ದಿನಗಳ ಕಠಿಣ ತರಬೇತಿ ನಡೆಸಲಿದ್ದಾರೆ. ಅಂದರೆ ಶನಿವಾರ ಮತ್ತು ಭಾನುವಾರದಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೂ ಟೀಮ್ ಇಂಡಿಯಾ ಆಟಗಾರರು ಅಭ್ಯಾಸದಲ್ಲಿ ನಿರತರಾಗಲಿದ್ದಾರೆ.
ಇನ್ನು ಅಕ್ಟೋಬರ್ 10 ಮತ್ತು 13 ರಂದು ಅಭ್ಯಾಸ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾವನ್ನು ವಿರುದ್ಧ ಸೆಣಸಲಿದೆ. ಇದರ ನಡುವೆ ಅಕ್ಟೋಬರ್ 11 ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಅಕ್ಟೋಬರ್ 12 ರಂದು ಮತ್ತೆ ಅಭ್ಯಾಸದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಬೆವರಿಳಿಸಲಿದ್ದಾರೆ. ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ಬಳಿಕ ಅಕ್ಟೋಬರ್ 14 ರಂದು ಪರ್ತ್ನಿಂದ ಟೀಮ್ ಇಂಡಿಯಾ ಹೊರಡಲಿದೆ.
ಆ ಬಳಿಕ ಟೀಮ್ ಇಂಡಿಯಾ ಬ್ರಿಸ್ಬೇನ್ನ ಗಾಬಾ ಮೈದಾನದಲ್ಲಿ ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅಕ್ಟೋಬರ್ 17 ರಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಅಭ್ಯಾಸ ಪಂದ್ಯವಾಡಿದರೆ, ಅಕ್ಟೋಬರ್ 19 ರಂದು ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಈ ಎರಡು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಲಿದೆ.
ಇದೇ ಮೈದಾನದಲ್ಲಿ ಅಕ್ಟೋಬರ್ 23 ರಂದು ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಒಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಅಭ್ಯಾಸ ಪಂದ್ಯಗಳು ಹಾಗೂ ಕಠಿಣ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಟಿ20 ವಿಶ್ವಕಪ್ ಗೆಲ್ಲಲು ಟೀಮ್ ಇಂಡಿಯಾ ಭರ್ಜರಿ ತಯಾರಿಯಲ್ಲಿದೆ.
ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:
- ಅಕ್ಟೋಬರ್-23 : ಭಾರತ vs ಪಾಕಿಸ್ತಾನ – ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ
- ಅಕ್ಟೋಬರ್-27: ಭಾರತ vs ಅರ್ಹತಾ ಸುತ್ತಿನ A ಗ್ರೂಪ್ನ ರನ್ನರ್ ಅಪ್ ತಂಡ – ಸಿಡ್ನಿ ಕ್ರಿಕೆಟ್ ಸ್ಟೇಡಿಯಂ
- ಅಕ್ಟೋಬರ್- 30: ಭಾರತ vs ದಕ್ಷಿಣ ಆಫ್ರಿಕಾ – ಪರ್ತ್ ಸ್ಟೇಡಿಯಂ
- ನವೆಂಬರ್-2: ಭಾರತ vs ಬಾಂಗ್ಲಾದೇಶ -ಅಡಿಲೇಡ್ ಓವಲ್
- ನವೆಂಬರ್-6: ಭಾರತ vs ಅರ್ಹತಾ ಸುತ್ತಿನ B ಗ್ರೂಪ್ನ ವಿನ್ನರ್ ತಂಡ
ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.