T20 World Cup 2022: ಮಾಜಿ RCB ಆಟಗಾರನ ಜೊತೆ ಕಿಂಗ್ ಕೊಹ್ಲಿ ಫುಲ್ ಪಾರ್ಟಿ

| Updated By: ಝಾಹಿರ್ ಯೂಸುಫ್

Updated on: Oct 13, 2022 | 6:54 PM

T20 World Cup 2022: ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯಲ್ಲಿ ಸ್ಟೋಯಿನಿಸ್ ಕಾಣಿಸಿಕೊಂಡಿರಲಿಲ್ಲ. ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದ ಆಸೀಸ್ ಆಲ್​ರೌಂಡರ್ ಇದೀಗ ಟಿ20 ವಿಶ್ವಕಪ್​ ಮೂಲಕ ಮತ್ತೊಮ್ಮೆ ಆರ್ಭಟಿಸಲು ಸಜ್ಜಾಗುತ್ತಿದ್ದಾರೆ.

T20 World Cup 2022: ಮಾಜಿ RCB ಆಟಗಾರನ ಜೊತೆ ಕಿಂಗ್ ಕೊಹ್ಲಿ ಫುಲ್ ಪಾರ್ಟಿ
Virat Kohli
Follow us on

T20 World Cup 2022: ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿಗೆ (Virat Kohli) ಪ್ರಪಂಚದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಹಾಗೆಯೇ ಇತರೆ ತಂಡದ ಆಟಗಾರರೊಂದಿಗೆ ಉತ್ತಮ ಬಾಂಧವ್ಯವನ್ನು ಸಹ ಹೊಂದಿದ್ದಾರೆ. ಇದೀಗ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾದಲ್ಲಿರುವ ಕಿಂಗ್ ಕೊಹ್ಲಿ ತಮ್ಮ ಹಳೆಯ ಗೆಳೆಯನನ್ನು ಭೇಟಿಯಾಗಿದ್ದಾರೆ. ಹೌದು, ಐಪಿಎಲ್ 2019 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಮಾರ್ಕಸ್ ಸ್ಟೊಯಿನಿಸ್ ಅವರನ್ನು ಕಿಂಗ್ ಕೊಹ್ಲಿ ಭೇಟಿಯಾಗಿದ್ದಾರೆ. ಈ ವೇಳೆ ತೆಗೆದಿರುವ ಫೋಟೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಟಿ20 ವಿಶ್ವಕಪ್​ಗಾಗಿ ಸಿದ್ಧತೆಯಲ್ಲಿರುವ ಟೀಮ್ ಇಂಡಿಯಾಗೆ ಬುಧವಾರ ವಿಶ್ರಾಂತಿ ನೀಡಲಾಗಿತ್ತು. ಇದೇ ವೇಳೆ ಕೊಹ್ಲಿ ಆಸ್ಟ್ರೇಲಿಯಾ ಆಟಗಾರ ಮಾರ್ಕಸ್ ಸ್ಟೋಯಿನಿಸ್ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಗೆಳೆಯರ ಜೊತೆ ಪಬ್ ಅ್ಯಂಡ್ ರೆಸ್ಟೋರೆಂಟ್​ವೊಂದರಲ್ಲಿ ವಿರಾಟ್ ಕೊಹ್ಲಿ ಹಾಗೂ ಮಾರ್ಕಸ್ ಸ್ಟೋಯಿನಿಸ್ ತೆರಳಿದ್ದು, ಈ ವೇಳೆ ತೆಗೆದಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಶೇಷ ಎಂದರೆ ವೆಸ್ಟರ್ನ್​ ಆಸ್ಟ್ರೇಲಿಯಾ ವಿರುದ್ಧದ 2 ಅಭ್ಯಾಸ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡಿರಲಿಲ್ಲ. ಇದೀಗ ಅಕ್ಟೋಬರ್ 17 ರಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಇದೇ ಪಂದ್ಯದಲ್ಲಿ ಮಾರ್ಕಸ್ ಸ್ಟೋಯಿನಿಸ್ ಕೂಡ ಆಡಲಿದ್ದಾರೆ.

ಇದನ್ನೂ ಓದಿ
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯಲ್ಲಿ ಸ್ಟೋಯಿನಿಸ್ ಕಾಣಿಸಿಕೊಂಡಿರಲಿಲ್ಲ. ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದ ಆಸೀಸ್ ಆಲ್​ರೌಂಡರ್ ಇದೀಗ ಟಿ20 ವಿಶ್ವಕಪ್​ ಮೂಲಕ ಮತ್ತೊಮ್ಮೆ ಆರ್ಭಟಿಸಲು ಸಜ್ಜಾಗುತ್ತಿದ್ದಾರೆ. ಅದಕ್ಕೂ ಮುನ್ನ ಆಸ್ಟ್ರೇಲಿಯಾಗೆ ಬಂದ ಆರ್​ಸಿಬಿ ಗೆಳೆಯ ವಿರಾಟ್ ಕೊಹ್ಲಿಯೊಂದಿಗೆ ಜಾಲಿ ಮೂಡ್​ನಲ್ಲಿ ಮಾರ್ಕಸ್ ಸ್ಟೋಯಿನಿಸ್ ಕಾಣಿಸಿಕೊಂಡಿದ್ದರು.