T20 World Cup 2024: ಟಿ20 ವಿಶ್ವಕಪ್‌ನಲ್ಲಿ ಬೇಡದ ಕೆಟ್ಟ ದಾಖಲೆ ಬರೆದ ಆಸ್ಟ್ರೇಲಿಯಾ..!

T20 World Cup 2024: ವಿಶ್ವ ಕ್ರಿಕೆಟ್​ನಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡುವ ತಂಡಗಳಲ್ಲಿ ಆಸ್ಟ್ರೇಲಿಯಾ ತಂಡ ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ. ಆದರೆ ಇದೇ ತಂಡ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 6 ಕ್ಯಾಚ್‌ಗಳನ್ನು ಕೈಚೆಲ್ಲಿತು. ವೀಕ್ಷಕ ವಿವರಣೆಗಾರರು ಕೂಡ ಆಸೀಸ್ ಆಟಗಾರರ ಈ ಕಳಪೆ ಫೀಲ್ಡಿಂಗ್ ನೋಡಿ ಅಚ್ಚರಿಗೊಂಡರು.

T20 World Cup 2024: ಟಿ20 ವಿಶ್ವಕಪ್‌ನಲ್ಲಿ ಬೇಡದ ಕೆಟ್ಟ ದಾಖಲೆ ಬರೆದ ಆಸ್ಟ್ರೇಲಿಯಾ..!
ಆಸ್ಟ್ರೇಲಿಯಾ ತಂಡ
Follow us
|

Updated on: Jun 16, 2024 | 10:31 PM

ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಆಸ್ಟ್ರೇಲಿಯಾ ಮತ್ತು ಸ್ಕಾಟ್ಲೆಂಡ್ (Scotland vs Australia) ನಡುವೆ ಜೂನ್ 16 ರ ಭಾನುವಾರದಂದು ಬಹಳ ಮಹತ್ವದ ಪಂದ್ಯ ನಡೆಯಿತು. ಸೇಂಟ್ ಲೂಸಿಯಾದಲ್ಲಿ ನಡೆದ ಈ ಪಂದ್ಯದಲ್ಲಿ ನಿರೀಕ್ಷೆಯಂತೆ ಆಸ್ಟ್ರೇಲಿಯಾ ತಂಡ, ಸ್ಕಾಟ್ಲೆಂಡ್ ತಂಡವನ್ನು ಮಣಿಸಿ ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಿತು. ಇದಲ್ಲದೆ ಆಸ್ಟ್ರೇಲಿಯಾ ತಾನು ಗೆಲ್ಲುವುದಲ್ಲದೆ, ಈ ಗೆಲುವಿನೊಂದಿಗೆ ಇಂಗ್ಲೆಂಡ್‌ ತಂಡವನ್ನು ಸಹ ಸೂಪರ್ 8 ಸುತ್ತಿಗೆ ಕೊಂಡೊಯ್ಯಿತು. ಆದರೆ ಆಸ್ಟ್ರೇಲಿಯಾ ತಂಡ, ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲೇ ಬೇಡದ ಕೆಟ್ಟ ದಾಖಲೆಯೊಂದನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ

ಪಂದ್ಯದಲ್ಲಿ ಆಸ್ಟ್ರೇಲಿಯಾದ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದರು. ಆದರೆ ತಂಡದ ಆಟಗಾರರ ಕಳಪೆ ಫೀಲ್ಡಿಂಗ್ ಇಡೀ ಕ್ರಿಕೆಟ್ ಲೋಕವನ್ನೇ ಅಚ್ಚರಿಗೊಳಿಸಿತು. ಏಕೆಂದರೆ ವಿಶ್ವ ಕ್ರಿಕೆಟ್​ನಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡುವ ತಂಡಗಳಲ್ಲಿ ಆಸ್ಟ್ರೇಲಿಯಾ ತಂಡ ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ. ಆದರೆ ಇದೇ ತಂಡ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 6 ಕ್ಯಾಚ್‌ಗಳನ್ನು ಕೈಚೆಲ್ಲಿತು. ವೀಕ್ಷಕ ವಿವರಣೆಗಾರರು ಕೂಡ ಆಸೀಸ್ ಆಟಗಾರರ ಈ ಕಳಪೆ ಫೀಲ್ಡಿಂಗ್ ನೋಡಿ ಅಚ್ಚರಿಗೊಂಡರು. ಅಭಿಮಾನಿಗಳಿಗೂ ಕೂಡ ಇದು ಆಸ್ಟ್ರೇಲಿಯಾ ಬೇಕಂತಲೇ ಮಾಡುತ್ತಿರುವ ಕೆಲಸ ಎಂದು ಭಾಸವಾಗತೊಡಗಿತು.

6 ಕ್ಯಾಚ್‌ ಡ್ರಾಪ್

ಇದಕ್ಕೆ ಕಾರಣವೂ ಇದ್ದು, ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್ವುಡ್, ಇಂಗ್ಲೆಂಡ್ ತಂಡವನ್ನು ಟೂರ್ನಿಯಿಂದ ಹೊರಹಾಕಲು ತಮ್ಮ ತಂಡವು ಸ್ಕಾಟ್ಲೆಂಡ್ ವಿರುದ್ಧ ಸೋಲುವ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದರು. ಹೀಗಿರುವಾಗ ತಂಡದ ಆಟಗಾರರು ಕ್ಯಾಚ್‌ಗಳನ್ನು ಬಿಡುವುದನ್ನು ನೋಡಿದ ಅಭಿಮಾನಿಗಳಲ್ಲಿ ಉದ್ದೇಶಪೂರ್ವಕವಾಗಿ ಕ್ಯಾಚ್‌ಗಳನ್ನು ಕೈಬಿಡುತ್ತಿದ್ದಾರೆ ಎಂಬ ಅನುಮಾನ ಮೂಡತೊಡಗಿತು. ಅಲ್ಲದೆ ಫೀಲ್ಡಿಂಗ್ ಸಮಯದಲ್ಲಿ, ಆಸ್ಟ್ರೇಲಿಯಾ ಒಟ್ಟು 6 ಕ್ಯಾಚ್‌ಗಳನ್ನು ಬಿಟ್ಟುಕೊಡುವ ಮೂಲಕ ನಾಚಿಕೆಗೇಡಿನ ದಾಖಲೆಯನ್ನು ಮಾಡಿದೆ. ಇದೀಗ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಕೈಬಿಟ್ಟ ತಂಡ ಎಂಬ ಕುಖ್ಯಾತಿಗೆ ಆಸ್ಟ್ರೇಲಿಯಾ ಪಾತ್ರವಾಗಿದೆ.

ಆಸ್ಟ್ರೇಲಿಯಾ ತಂಡದ ಈ ಕಳಪೆ ಫೀಲ್ಡಿಂಗ್​ ಅನ್ನು ಸದುಪಯೋಗಪಡಿಸಿಕೊಂಡ ಸ್ಕಾಟ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಬರೋಬ್ಬರಿ 180 ರನ್‌ಗಳನ್ನು ಹಾಕಿದರು. ತಂಡದ ಪರ ಅದ್ಭುತ ಇನ್ನಿಂಗ್ಸ್ ಆಡಿದ ಬ್ರಾಂಡನ್ ಮೆಕ್‌ಮುಲ್ಲನ್ 34 ಎಸೆತಗಳಲ್ಲಿ 60 ರನ್ ಗಳಿಸಿದರು. ನಾಯಕ ರಿಚಿ ಬೆರಿಂಗ್ಟನ್ ಕೂಡ 31 ಎಸೆತಗಳಲ್ಲಿ 42 ರನ್ ಬಾರಿಸಿದರು.

ಕೊನೆಗೂ ಗೆದ್ದ ಆಸ್ಟ್ರೇಲಿಯಾ

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆಸ್ಟ್ರೇಲಿಯಾದ 3 ವಿಕೆಟ್‌ಗಳು ಕೇವಲ 60 ರನ್‌ಗಳಿಗೆ ಪತನಗೊಂಡವು. ಆಸ್ಟ್ರೇಲಿಯ ತಂಡ 13 ಓವರ್‌ಗಳಲ್ಲಿ 92 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಇಲ್ಲಿಂದ 13ರ ಆಸುಪಾಸಿನ ಎಕಾನಮಿಯೊಂದಿಗೆ ತಂಡ 7 ಓವರ್‌ಗಳಲ್ಲಿ 89 ರನ್ ಗಳಿಸಬೇಕಿತ್ತು. ಇದಾದ ನಂತರ ಟ್ರಾವಿಸ್ ಹೆಡ್ 14ನೇ ಓವರ್‌ನಲ್ಲಿ ಸತತ 3 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ತಂಡಕ್ಕೆ ವೇಗವನ್ನು ನೀಡಿದರು. ಆದರೆ ಆ ಬಳಿಕ ಅವರು ಔಟಾದರು. ಇಲ್ಲಿಂದ ತಂಡದ ಇನ್ನಿಂಗ್ಸ್ ಕೈಗೆತ್ತಿಕೊಂಡ ಮಾರ್ಕಸ್ ಸ್ಟೊಯಿನಿಸ್ 29 ಎಸೆತಗಳಲ್ಲಿ 59 ರನ್‌ಗಳ ಬಿರುಸಿನ ಇನ್ನಿಂಗ್ಸ್‌ನೊಂದಿಗೆ ಆಸ್ಟ್ರೇಲಿಯಾವನ್ನು ಗೆಲುವಿನತ್ತ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ