IND vs AUS: ಇಂದು ಭಾರತ vs ಆಸ್ಟ್ರೇಲಿಯಾ ನಡುವೆ ನಿರ್ಣಾಯಕ ಪಂದ್ಯ

|

Updated on: Jun 24, 2024 | 7:18 AM

T20 World Cup 2024: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 19 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ ತಂಡ 11 ಬಾರಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಅಂದರೆ ಇಲ್ಲಿ ಆಸೀಸ್ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ.

IND vs AUS: ಇಂದು ಭಾರತ vs ಆಸ್ಟ್ರೇಲಿಯಾ ನಡುವೆ ನಿರ್ಣಾಯಕ ಪಂದ್ಯ
IND vs AUS
Follow us on

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಸೇಂಟ್ ಲೂಸಿಯಾದ ಡಾರೆನ್ ಸ್ಯಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ನಲ್ಲಿ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಜಯ ಸಾಧಿಸಬೇಕು.

ಒಂದು ವೇಳೆ ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ವಿರುದ್ಧ 50 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದರೆ, ಸೆಮಿಫೈನಲ್​ಗೇರಲು ಅಫ್ಘಾನಿಸ್ತಾನ್ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯದ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅತ್ತ ಅಫ್ಘಾನಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ದ ಅಮೋಘ ಗೆಲುವು ದಾಖಲಿಸಿದರೆ ನೆಟ್ ರನ್ ರೇಟ್ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು.

ಇದರಿಂದ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಳ್ಳಲಿರುವ ಆಸ್ಟ್ರೇಲಿಯಾ ಅಥವಾ ಭಾರತ ತಂಡವು ಟಿ20 ವಿಶ್ವಕಪ್​ನಿಂದ ಹೊರಬೀಳಬಹುದು. ಹೀಗಾಗಿಯೇ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿ ಮಾರ್ಪಟ್ಟಿದೆ.

ಅಗ್ರಸ್ಥಾನದಲ್ಲಿ ಟೀಮ್ ಇಂಡಿಯಾ:

ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. +2.425 ನೆಟ್​ ರನ್​ ರೇಟ್​ನೊಂದಿಗೆ 4 ಅಂಕಗಳನ್ನು ಕಲೆಹಾಕಿರುವ ಭಾರತ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಳ್ಳಲು ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಬೇಕು.

ಒಂದು ವೇಳೆ ಸೋಲುವ ಪರಿಸ್ಥಿತಿ ಎದುರಾದರೆ ಹೀನಾಯ ಸೋಲನ್ನು ತಪ್ಪಿಸಿಕೊಳ್ಳಬೇಕು. ಈ ಮೂಲಕ ನೆಟ್ ರನ್ ರೇಟ್​ ಸಹಾಯದಿಂದ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು. ಈ ಮೂಲಕ ನೇರವಾಗಿ ಸೆಮಿಫೈನಲ್​ಗೇರಬಹುದು.

ಅಂದರೆ ಇಂದಿನ ಪಂದ್ಯದ ಮೂಲಕ ಭಾರತ ತಂಡ ದ್ವಿತೀಯ ಸ್ಥಾನಕ್ಕೆ ಕುಸಿಯದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಅತ್ತ ಆಸ್ಟ್ರೇಲಿಯಾ ತಂಡವು ಈ ಪಂದ್ಯದ ಮೂಲಕ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ದೂಡುವ ವಿಶ್ವಾಸದಲ್ಲಿದೆ. ಹೀಗಾಗಿ ಡಾರೆನ್ ಸ್ಯಾಮಿ ಸ್ಟೇಡಿಯಂನಲ್ಲಿ ಇಂದು ರಣರೋಚಕ ಪಂದ್ಯವನ್ನು ನಿರೀಕ್ಷಿಸಬಹುದು.

ಉಭಯ ತಂಡಗಳು:

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: T20 World Cup 2024: ಹಳೆಯ ದಾಖಲೆ ಅಳಿಸಿ ಹಾಕಿದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.