T20 World Cup 2024: ಟಿ20 ವಿಶ್ವಕಪ್ 2024 ಕ್ಕೆ ತೆರೆ ಬಿದ್ದಿದೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಮೂಲಕ 17 ವರ್ಷಗಳ ಬಳಿಕ ಟಿ20 ಕ್ರಿಕೆಟ್ನಲ್ಲಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ.
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತದ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 76 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.
177 ರನ್ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಬ್ಯಾಟರ್ಗಳು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದ್ದರು. ಅದರಲ್ಲೂ ಕೇವಲ 27 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 52 ರನ್ ಸಿಡಿಸಿ ಹೆನ್ರಿಕ್ ಕ್ಲಾಸೆನ್ ಅಬ್ಬರಿಸಿದರು. ಆದರೆ ಅಂತಿಮ 5 ಓವರ್ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸುವಲ್ಲಿ ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಯಶಸ್ವಿಯಾದರು.
ಇದನ್ನೂ ಓದಿ: Virat Kohli – Rohit Sharma: T20I ಕ್ರಿಕೆಟ್ಗೆ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ
ಪರಿಣಾಮ ಕೊನೆಯ ಓವರ್ನಲ್ಲಿ 16 ರನ್ಗಳ ಗುರಿ ಪಡೆದ ಸೌತ್ ಆಫ್ರಿಕಾ ತಂಡವು ಕೇವಲ 8 ರನ್ ಮಾತ್ರ ಕಲೆಹಾಕಿತು. ಈ ಮೂಲಕ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತು. ಇನ್ನು ಈ ಪಂದ್ಯದ ಬಳಿಕ ಹಲವು ಆಟಗಾರರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆ ಪ್ರಶಸ್ತಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
Published On - 8:42 am, Sun, 30 June 24