AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಬಾಬರ್ ಆಝಂ ಸರ್ವಾಧಿಕಾರಿ ಧೋರಣೆಯಿಂದ ಪಾಕ್ ತಂಡದಲ್ಲಿ ಒಡಕು..!

T20 World Cup 2024: ಅಮೆರಿಕ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ತೆಗೆದುಕೊಂಡ ಹಲವು ನಿರ್ಧಾರಗಳು ಪಾಕಿಸ್ತಾನ ಆಟಗಾರರ ಕೋಪಕ್ಕೆ ಕಾರಣವಾಗಿದೆ. ಅನೇಕ ನಿರ್ಧಾರಗಳನ್ನು ಬಾಬರ್ ಒಬ್ಬರೇ ತೆಗೆದುಕೊಳ್ಳುವುದು ಇತರ ಆಟಗಾರರು ಅಸಮಾಧಾನಗೊಳ್ಳುವಂತೆ ಮಾಡಿದೆ.

T20 World Cup 2024: ಬಾಬರ್ ಆಝಂ ಸರ್ವಾಧಿಕಾರಿ ಧೋರಣೆಯಿಂದ ಪಾಕ್ ತಂಡದಲ್ಲಿ ಒಡಕು..!
ಬಾಬರ್ ಆಝಂ
ಪೃಥ್ವಿಶಂಕರ
|

Updated on: Jun 07, 2024 | 9:51 PM

Share

ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಅಮೆರಿಕ ವಿರುದ್ಧದ ಪಂದ್ಯದಲ್ಲಿ ಸೋತ ನಂತರ ಪಾಕಿಸ್ತಾನ ತಂಡದ (Pakistan vs America) ತಯಾರಿಯ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಕ್ರಿಕೆಟ್ ಶಿಶು ರಾಷ್ಟ್ರ ವಿರುದ್ಧದ ಸೋಲು ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಕೋಲಾಹಲ ಎಬ್ಬಿಸಿದೆ. ಇದರೊಂದಿಗೆ ತಂಡದ ನಾಯಕ ಬಾಬರ್ ಆಝಂ (Babar Azam) ಮೇಲೆಯೂ ಹಲವು ಪ್ರಶ್ನೆಗಳು ಎದ್ದಿವೆ. ಪಂದ್ಯದ ನಂತರ ಮಾತನಾಡಿದ್ದ ನಾಯಕ ಬಾಬರ್, ಪಂದ್ಯದ ಸೋಲಿಗೆ ತಮ್ಮ ತಂಡದ ಆಟಗಾರರ ಕಾರಣ ಎಂದಿದ್ದರು. ಇದಾದ ಬಳಿಕ ಬಾಬರ್ ಅವರ ಹೇಳಿಕೆಗೆ ತಂಡದ ಆಟಗಾರರಿಂದ ವಿರೋಧ ವ್ಯಕ್ತವಾಗಿದೆ. ಹಾಗೆಯೇ ಪಾಕ್ ತಂಡದಲ್ಲಿ ಒಡಕು ಉಂಟಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಕ್ಕೆ ಸಂಬಂಧಿಸಿದ ಪತ್ರಕರ್ತರೊಬ್ಬರು ಬರೆದುಕೊಂಡಿದ್ದಾರೆ.

ಪಾಕ್ ಪತ್ರಕರ್ತ ಹೇಳಿದ್ದೇನು?

ವಾಸ್ತವವಾಗಿ, ಪಾಕಿಸ್ತಾನಿ ಪತ್ರಕರ್ತರೊಬ್ಬರು ಬಾಬರ್ ಆಝಂ ಅವರ ಸರ್ವಾಧಿಕಾರಿ ಧೋರಣೆಯು ಅನೇಕ ಆಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಜಿಯೋ ನ್ಯೂಸ್ ಚಾನೆಲ್ ವರದಿಗಾರ ಅರ್ಫಾ ಫಿರೋಜ್ ಅವರ ಪ್ರಕಾರ, ಬಾಬರ್ ಆಝಂ ಅವರ ಸರ್ವಾಧಿಕಾರಿ ಧೋರಣೆಯು ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಚರ್ಚೆಯ ವಿಷಯವಾಗಿದೆ ಎಂದು ಮೂಲಗಳು ಹೇಳಿವೆ. ಇದರಿಂದ ಹಲವು ಆಟಗಾರರು ಕೋಪಗೊಂಡಿರುವುದಲ್ಲದೆ, ಬಾಬರ್ ಯಾರ ಮಾತನ್ನೂ ಕೇಳುವುದಿಲ್ಲ ಎಂಬುದು ಕೂಡ ಆಟಗಾರರ ನಡುವೆ ಭಿನ್ನಮತ ಸ್ಫೋಟಗೊಳ್ಳಲು ಕಾರಣವಾಗಿದೆ.

ಅನೇಕ ನಿರ್ಧಾರಗಳಿಂದ ಅತೃಪ್ತಿ

ಅರ್ಫಾ ಫಿರೋಜ್ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು ಇದರಲ್ಲಿ ಅವರು, ಅಮೆರಿಕ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ತೆಗೆದುಕೊಂಡ ಹಲವು ನಿರ್ಧಾರಗಳು ಪಾಕಿಸ್ತಾನ ಆಟಗಾರರ ಕೋಪಕ್ಕೆ ಕಾರಣವಾಗಿದೆ. ಅನೇಕ ನಿರ್ಧಾರಗಳನ್ನು ಬಾಬರ್ ಒಬ್ಬರೇ ತೆಗೆದುಕೊಳ್ಳುವುದು ಇತರ ಆಟಗಾರರು ಅಸಮಾಧಾನಗೊಳ್ಳುವಂತೆ ಮಾಡಿದೆ. ಹಾಗೆಯೇ ಪಂದ್ಯದಲ್ಲಿ ಇತರ ಆಟಗಾರರೊಂದಿಗೆ ಚರ್ಚಿಸಿದ ಅನೇಕ ನಿರ್ಧಾರಗಳನ್ನು ಬಾಬರ್ ಒಬ್ಬರೆ ತೆಗೆದುಕೊಂಡರು. ಇದರರ್ಥ ಬಾಬರ್ ತಂಡದ ಇತರ ಆಟಗಾರರ ಮಾತನ್ನು ಕೇಳುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ಸಾಲದೆಂಬಂತೆ ಕಳಪೆ ಫೀಲ್ಡಿಂಗ್ ನಂತರ ಬಾಬರ್ ತಂಡದ ಆಟಗಾರರ ಮೇಲೆ ಕೋಪವನ್ನು ವ್ಯಕ್ತಪಡಿಸಿದ್ದರು. ಹ್ಯಾರಿಸ್ ರೌಫ್ ಎಸೆದ 20ನೇ ಓವರ್​ನ ಕೊನೆಯ ಎಸೆತದಲ್ಲಿ ನಿತೀಶ್ ಕುಮಾರ್ ಬೌಂಡರಿ ಬಾರಿಸಿದಾಗ ಬಾಬರ್ ತುಂಬಾ ಕೋಪಗೊಂಡಿದ್ದರು. ನಾಯಕನ ಈ ರೀತಿಯ ವರ್ತನೆ ಆಟಗಾರರಲ್ಲಿ ಕೋಪ ತರಿಸಿದೆ ಎಂದು ಹೇಳಲಾಗುತ್ತಿದೆ.

ಮೊಹಮ್ಮದ್ ಅಮೀರ್ ಮಾತು ಕೇಳಲಿಲ್ಲ

ಇದು ಸಾಲದೆಂಬಂತೆ ಪಂದ್ಯದ ನಿರ್ಣಾಯಕ ಹಂತದಲ್ಲಿ ತನ್ನ ಓವರ್ ಮುಗಿದ ನಂತರ ಮೊಹಮ್ಮದ್ ಅಮೀರ್ ಮತ್ತೊಬ್ಬ ವೇಗದ ಬೌಲರ್‌ಗೆ ಓವರ್ ನೀಡುವಂತೆ ಸಲಹೆ ನೀಡಿದ್ದರು. ಆದರೆ ಬಾಬರ್ ಅದನ್ನು ನಿರ್ಲಕ್ಷಿಸಿ ಸ್ಪಿನ್ನರ್‌ಗೆ ಅವಕಾಶ ನೀಡಿದರು. ಇದು ಕೂಡ ಪಂದ್ಯದ ಸೋಲಿಗೆ ಕಾರಣವಾಗಿತ್ತು. ಇದೆಲ್ಲ ಕಾರಣಗಳಿಂದ ಪಾಕ್ ತಂಡದಲ್ಲಿ ಒಡಕು ಮೂಡಿದೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ