ಅಬ್ಬಾ ಇಷ್ಟೊಂದಾ…! ವಿಶ್ವ ವಿಜೇತ ಟೀಂ ಇಂಡಿಯಾಗೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

BCCI Prize Money: ವಿಶ್ವ ಕ್ರಿಕೆಟ್​ನ ಬಿಗ್ ಬಾಸ್ ಎನಿಸಿಕೊಳ್ಳುವ ಬಿಸಿಸಿಐ ಇದೀಗ ತನ್ನ ಚಾಂಪಿಯನ್ ತಂಡಕ್ಕೆ ಭಾರಿ ಗಾತ್ರದ ಬಹುಮಾನ ಘೋಷಿಸಿ, ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಮಾಡಿದೆ. ಒಂದಲ್ಲ, ಎರಡಲ್ಲ ಬಿಸಿಸಿಐ ಬರೋಬ್ಬರಿ 125 ಕೋಟಿ ರೂಗಳನ್ನು ಬಹುಮಾನವಾಗಿ ಘೋಷಿಸಿದೆ.

ಅಬ್ಬಾ ಇಷ್ಟೊಂದಾ...! ವಿಶ್ವ ವಿಜೇತ ಟೀಂ ಇಂಡಿಯಾಗೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
ಟೀಂ ಇಂಡಿಯಾ
Follow us
|

Updated on:Jun 30, 2024 | 8:40 PM

ಭಾರತ ಕ್ರಿಕೆಟ್ ತಂಡ 9ನೇ ಆವೃತ್ತಿಯ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿದ ರೋಹಿತ್ ಪಡೆ ದಾಖಲೆಯ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಚಾಂಪಿಯನ್ ಪ್ರದರ್ಶನಕ್ಕೆ ಟೀಂ ಇಂಡಿಯಾ ಐಸಿಸಿಯಿಂದ ಒಟ್ಟಾರೆಯಾಗಿ ಬರೋಬ್ಬರಿ 22.76 ಕೋಟಿ ರೂಗಳನ್ನು ಬಹುಮಾನದ ರೂಪದಲ್ಲಿ ಪಡೆದುಕೊಂಡಿತ್ತು. ಇದೀಗ ವಿಶ್ವ ಕ್ರಿಕೆಟ್​ನ ಬಿಗ್ ಬಾಸ್ ಎನಿಸಿಕೊಳ್ಳುವ ಬಿಸಿಸಿಐ ತನ್ನ ಚಾಂಪಿಯನ್ ತಂಡಕ್ಕೆ ಭಾರಿ ಗಾತ್ರದ ಬಹುಮಾನ ಘೋಷಿಸಿ, ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಮಾಡಿದೆ. ಒಂದಲ್ಲ, ಎರಡಲ್ಲ ಬಿಸಿಸಿಐ ಬರೋಬ್ಬರಿ 125 ಕೋಟಿ ರೂಗಳನ್ನು ಬಹುಮಾನವಾಗಿ ಘೋಷಿಸಿದೆ.

ಎಕ್ಸ್​ನಲ್ಲಿ ಜಯ್ ಶಾ ಹೇಳಿದ್ದೇನು?

9ನೇ ಆವೃತ್ತಿಯ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ ದಾಖಲೆಯ 125 ಕೋಟಿ ಬಹುಮಾನವನ್ನು ಘೋಷಿಸಿರುವ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜಯ್​ ಶಾ, ಚಾಂಪಿಯನ್ ಭಾರತ ತಂಡಕ್ಕೆ 125 ಕೋಟಿ ರೂಗಳನ್ನು ಬಹುಮಾನವಾಗಿ ಘೋಷಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಪಂದ್ಯಾವಳಿಯುದ್ದಕ್ಕೂ ತಂಡವು ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಅತ್ಯುತ್ತಮ ಪ್ರದರ್ಶನ ನೀಡಿದ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಅಭಿಮಾನಿಗಳಿಗೆ ಅಭಿನಂದನೆಗಳು ಎಂದು ಜಯ್ ಶಾ ಬರೆದುಕೊಂಡಿದ್ದಾರೆ.

ದಾಖಲೆಯ ಬಹುಮಾನದ ಮೊತ್ತ

ವಾಸ್ತವವಾಗಿ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಆಗಿರುವ ಟೀಂ ಇಂಡಿಯಾಗೆ ದಾಖಲೆಯ ಮೊತ್ತವನ್ನು ಬಹುಮಾನವನ್ನಾಗಿ ಘೋಷಿಸುವ ಮೂಲಕ ಬಿಸಿಸಿಐ ಇಡೀ ವಿಶ್ವ ಕ್ರಿಕೆಟ್​ ಅಚ್ಚರಿಗೊಳ್ಳುವಂತೆ ಮಾಡಿದೆ. ಈ ಹಿಂದೆ ಯಾವ ಚಾಂಪಿಯನ್ ತಂಡಕ್ಕೂ ಈ ಗಾತ್ರದ ಬಹುಮಾನ ಸಿಕ್ಕಿರಲಿಲ್ಲ. ಪ್ರಸ್ತುತ ಪರಿಸ್ಥಿತಿ ನೋಡಿದರೆ ಮುಂದೆಯೂ ಸಿಗುವ ಸಾಧ್ಯತೆಗಳಿಲ್ಲ. ಒಟ್ಟಾರೆ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದ್ದ ಟೀಂ ಇಂಡಿಯಾ ಹಾಗೂ ತಂಡದ ಸಹಾಯಕ ಸಿಬ್ಬಂದಿಗಳಿಗೆ ಒಟ್ಟು 125 ಕೋಟಿ ರೂಗಳನ್ನು ಬಹುಮಾನವನ್ನಾಗಿ ಘೋಷಿಸಿಲಾಗಿದೆ. ಇದೇ ಟೀಂ ಇಂಡಿಯಾ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯನ್ನು ಗೆದ್ದಾಗ ಬಿಸಿಸಿಐ ನೀಡಿದ ಬಹುಮಾನಕ್ಕೂ ಈಗ ನೀಡಿರುವ ಬಹುಮಾನಕ್ಕೂ ಭಾರಿ ಅಂತರವಿದೆ.

ಧೋನಿ ನಾಯಕತ್ವದಲ್ಲಿ ಭಾರತ 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಮೊದಲ ಟಿ20 ವಿಶ್ವಕಪ್ ಆವೃತ್ತಿಯನ್ನು ಗೆದ್ದಿತ್ತು. ಫೈನಲ್ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಮಣಿಸಿದ್ದ ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 2 ಕೋಟಿ ರೂಪಾಯಿ ನಗದು ಬಹುಮಾನ ನೀಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Sun, 30 June 24

ತಾಜಾ ಸುದ್ದಿ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಹಾಸನ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ
ಹಾಸನ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ