AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAN vs IRE: ಐರ್ಲೆಂಡ್ ತಂಡಕ್ಕೆ ಸೋಲುಣಿಸಿದ ಕೆನಡಾ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಕೆನಡಾ ತಂಡವು ತನ್ನ ಮೊದಲ ಜಯ ಸಾಧಿಸಿದೆ. ನ್ಯೂಯಾರ್ಕ್​ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 12 ರನ್​ಗಳ ರೋಚಕ ಜಯ ಸಾಧಿಸುವ ಮೂಲಕ ಕೆನಡಾ ತಂಡ ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಕೆನಡಾ ತಂಡವು ಮೂರನೇ ಸ್ಥಾನಕ್ಕೇರಿದೆ.

CAN vs IRE: ಐರ್ಲೆಂಡ್ ತಂಡಕ್ಕೆ ಸೋಲುಣಿಸಿದ ಕೆನಡಾ
Canada
ಝಾಹಿರ್ ಯೂಸುಫ್
|

Updated on: Jun 08, 2024 | 7:27 AM

Share

T20 World Cup 2024: ಟಿ20 ವಿಶ್ವಕಪ್​ನ 13ನೇ ಪಂದ್ಯದಲ್ಲಿ ಕೆನಡಾ ತಂಡ 12 ರನ್​ಗಳ ರೋಚಕ ಜಯ ಸಾಧಿಸಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆನಡಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಕೇವಲ 28 ರನ್​ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರನ್ನು ಕೆನಡಾ ತಂಡಕ್ಕೆ ನಿಕೋಲಸ್ ಕಿರ್ಟನ್ ಹಾಗೂ ಶ್ರೇಯಸ್ ಮೋವಾ ಆಸರೆಯಾದರು. ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿ ಅರ್ಧಶತಕದ ಪಾಲುದಾರಿಕೆ ನೀಡಿದರು.

ಈ ವೇಳೆ ನಿಕೋಲಸ್ ಕಿರ್ಟನ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 49 ರನ್ ಬಾರಿಸಿದರೆ, ಶ್ರೇಯಸ್ ಮೋವಾ 36 ಎಸೆತಗಳಲ್ಲಿ 37 ರನ್​ ಕಲೆಹಾಕಿದರು. ಈ ಮೂಲಕ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತು.

138 ರನ್​ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ತಂಡವು 53 ರನ್​ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಜಾರ್ಜ್ ಡಾಕ್ರೆಲ್ 30 ರನ್ ಬಾರಿಸಿದರೆ, ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾರ್ಕ್ ಅಡೈರ್ 34 ರನ್​ಗಳ ಕೊಡುಗೆ ನೀಡಿದರು.

ಆದರೆ ಅಂತಿಮ ಓವರ್​ಗಳ ವೇಳೆ ಬಿಗುವಿನ ದಾಳಿ ಸಂಘಟಿಸಿದ ಕೆನಡಾ ಬೌಲರ್​ಗಳು ರನ್​ ಗತಿಯನ್ನು ನಿಯಂತ್ರಿಸಲು ಯಶಸ್ವಿಯಾದರು. ಪರಿಣಾಮ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 125 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೆನಡಾ ತಂಡವು ಟಿ20 ವಿಶ್ವಕಪ್​ನಲ್ಲಿ ತನ್ನ ಮೊದಲ ಜಯ ಸಾಧಿಸಿದೆ.

ಕೆನಡಾ ಪ್ಲೇಯಿಂಗ್ 11: ಆರೋನ್ ಜಾನ್ಸನ್ , ನವನೀತ್ ಧಲಿವಾಲ್ , ಪರ್ಗತ್ ಸಿಂಗ್ , ನಿಕೋಲಸ್ ಕಿರ್ಟನ್ , ಶ್ರೇಯಸ್ ಮೋವಾ (ವಿಕೆಟ್ ಕೀಪರ್) , ದಿಲ್ ಪ್ರೀತ್ ಬಾಜ್ವಾ , ಸಾದ್ ಬಿನ್ ಜಾಫರ್ (ನಾಯಕ) , ದಿಲ್ಲನ್ ಹೇಲಿಗರ್ , ಕಲೀಮ್ ಸನಾ , ಜುನೈದ್ ಸಿದ್ದಿಕಿ , ಜೆರೆಮಿ ಗಾರ್ಡನ್.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್

ಐರ್ಲೆಂಡ್ ಪ್ಲೇಯಿಂಗ್ 11: ಆಂಡ್ರ್ಯೂ ಬಾಲ್ಬಿರ್ನಿ , ಪಾಲ್ ಸ್ಟಿರ್ಲಿಂಗ್ (ನಾಯಕ) , ಲೋರ್ಕನ್ ಟಕರ್ (ವಿಕೆಟ್ ಕೀಪರ್) , ಹ್ಯಾರಿ ಟೆಕ್ಟರ್ , ಕರ್ಟಿಸ್ ಕ್ಯಾಂಫರ್ , ಜಾರ್ಜ್ ಡಾಕ್ರೆಲ್ , ಗರೆಥ್ ಡೆಲಾನಿ , ಮಾರ್ಕ್ ಅಡೇರ್ , ಬ್ಯಾರಿ ಮೆಕಾರ್ಥಿ , ಜೋಶುವಾ ಲಿಟಲ್ , ಕ್ರೇಗ್ ಯಂಗ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!