AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಔಟಾದ ನಿರಾಸೆಯಲ್ಲಿ ದಾರಿ ತಪ್ಪಿದ ಡೇವಿಡ್ ವಾರ್ನರ್! ವೈರಲ್ ವಿಡಿಯೋ ನೋಡಿ

T20 World Cup 2024: ಈ ಪಂದ್ಯದಲ್ಲಿ 56 ರನ್​​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ ವಾರ್ನರ್, ಕಲೀಮುಲ್ಲಾ ಬೌಲಿಂಗ್​ನಲ್ಲಿ ಕ್ಯಾಚಿತ್ತು ಔಟಾದರು. ಈ ವೇಳೆ ಔಟಾದ ನಿರಾಸೆಯಲ್ಲಿ ಡ್ರೆಸ್ಸಿಂಗ್ ರೂಮ್ ಕಡೆಗೆ ಹೋಗುತ್ತಿದ್ದ ವಾರ್ನರ್, ತಮ್ಮ ತಂಡದ ಡ್ರೆಸ್ಸಿಂಗ್ ಕೋಣೆಗೆ ಹೋಗುವ ಬದಲು ಎದುರಾಳಿ ತಂಡದ ಡ್ರೆಸಿಂಗ್ ಕೋಣೆಯತ್ತ ಹೆಜ್ಜೆ ಹಾಕಿದರು.

T20 World Cup 2024: ಔಟಾದ ನಿರಾಸೆಯಲ್ಲಿ ದಾರಿ ತಪ್ಪಿದ ಡೇವಿಡ್ ವಾರ್ನರ್! ವೈರಲ್ ವಿಡಿಯೋ ನೋಡಿ
ಡೇವಿಡ್ ವಾರ್ನರ್
ಪೃಥ್ವಿಶಂಕರ
|

Updated on: Jun 06, 2024 | 6:26 PM

Share

ಆಸ್ಟ್ರೇಲಿಯಾ ಮತ್ತು ಒಮಾನ್ (Australia vs Oman) ನಡುವೆ ನಡೆದ ಟಿ20 ವಿಶ್ವಕಪ್ 2024 ರ (T20 World Cup 2024) 10ನೇ ಪಂದ್ಯದಲ್ಲಿ ಕಾಂಗರೂ ತಂಡ ಸುಲಭ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಓಪನರ್ ಡೇವಿಡ್ ವಾರ್ನರ್ (David Warner) ಅದ್ಭುತ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದರೆ 56 ರನ್​​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆ ಹೆಜ್ಜೆಯಾಕುವ ವೇಳೆ ವಾರ್ನರ್ ಮಾಡಿಕೊಂಡ ಎಡವಟ್ಟಿನ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ದಾರಿ ಮರೆತ ವಾರ್ನರ್

ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ 51 ಎಸೆತಗಳಲ್ಲಿ 56 ರನ್‌ಗಳ ಇನಿಂಗ್ಸ್‌ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಆದರೆ 56 ರನ್​​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ ವಾರ್ನರ್, ಕಲೀಮುಲ್ಲಾ ಬೌಲಿಂಗ್​ನಲ್ಲಿ ಕ್ಯಾಚಿತ್ತು ಔಟಾದರು. ಈ ವೇಳೆ ಔಟಾದ ನಿರಾಸೆಯಲ್ಲಿ ಡ್ರೆಸ್ಸಿಂಗ್ ರೂಮ್ ಕಡೆಗೆ ಹೋಗುತ್ತಿದ್ದ ವಾರ್ನರ್, ತಮ್ಮ ತಂಡದ ಡ್ರೆಸ್ಸಿಂಗ್ ಕೋಣೆಗೆ ಹೋಗುವ ಬದಲು ಎದುರಾಳಿ ತಂಡದ ಡ್ರೆಸಿಂಗ್ ಕೋಣೆಯತ್ತ ಹೆಜ್ಜೆ ಹಾಕಿದರು.

T20 World Cup 2024: ಗಲ್ಲಿ ಕ್ರಿಕೆಟ್​ನಂತೆ ಬಾಲ್​ಗಾಗಿ ಆಸೀಸ್ ಆಟಗಾರರ ಹುಡುಕಾಟ; ವಿಡಿಯೋ ವೈರಲ್

ಅದರ ನಂತರ ಯಾರೋ ಜೋರಾಗಿ ಕೂಗಿ ವಾರ್ನರ್‌ ಅವರು ಬೇರೆ ಡ್ರೆಸ್ಸಿಂಗ್ ರೂಮ್‌ಗೆ ಹೋಗುತ್ತಿದ್ದಾರೆ ಎಂದು ಹೇಳಿದರು. ಅದರ ನಂತರ ವಾರ್ನರ್ ಮೆಟ್ಟಿಲುಗಳ ಕೆಳಗೆ ಬಂದು ತನ್ನ ತಂಡದ ಡ್ರೆಸ್ಸಿಂಗ್ ರೂಮ್ ಕಡೆಗೆ ಹೋದರು. ವಾರ್ನರ್ ಅವರ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಅಭಿಮಾನಿಗಳು ಕೂಡ ತರಹೆವಾರಿ ಕಾಮೆಂಟ್​ಗಳನ್ನು ಮಾಡುತ್ತಿದ್ದಾರೆ.

ಆಸ್ಟ್ರೇಲಿಯಾಗೆ ಗೆಲುವಿನ ಆರಂಭ

ಇನ್ನು ಪಂದ್ಯದ ಫಲಿತಾಂಶದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯವನ್ನು ಆಸ್ಟ್ರೇಲಿಯಾ 39 ರನ್‌ಗಳಿಂದ ಗೆದ್ದುಕೊಂಡಿತು. ಟಾಸ್ ಗೆದ್ದ ಒಮಾನ್ ಬೌಲಿಂಗ್ ಮಾಡಲು ನಿರ್ಧರಿಸಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 164 ರನ್ ಕಲೆಹಾಕಿತು. ಆಸ್ಟ್ರೇಲಿಯಾ ಪರ ಮಾರ್ಕಸ್ ಸ್ಟೊಯಿನಿಸ್ 67 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರೆ, ವಾರ್ನರ್ 56 ರನ್​ಗಳ ಕೊಡುಗೆ ನೀಡಿದರು. ಮತ್ತೊಂದೆಡೆ 165 ರನ್‌ಗಳ ಗುರಿ ಬೆನ್ನಟ್ಟಿದ ಒಮಾನ್ ತಂಡ 125 ರನ್ ಗಳಿಸಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?