ENG vs USA: ಸೆಮಿಫೈನಲ್​ಗೇರಿದ ಇಂಗ್ಲೆಂಡ್; ಟೂರ್ನಿಯಿಂದ ಹೊರಬಿದ್ದ ಅಮೆರಿಕ

ENG vs USA, T20 World Cup 2024: ಟಿ20 ವಿಶ್ವಕಪ್ ಸೂಪರ್ ಎಂಟು ಹಂತದ ಪಂದ್ಯದಲ್ಲಿ ಇಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಅಮೆರಿಕ ವಿರುದ್ಧ 10 ವಿಕೆಟ್​ಗಳ ಸುಲಭ ಜಯ ಸಾಧಿಸಿದೆ. ಇದರೊಂದಿಗೆ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ವಾಸ್ತವವಾಗಿ ಕಳೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದ ಗೆಲುವು ಇಂಗ್ಲೆಂಡ್ ತಂಡಕ್ಕೆ ಅತ್ಯವಶ್ಯಕವಾಗಿತ್ತು.

ENG vs USA: ಸೆಮಿಫೈನಲ್​ಗೇರಿದ ಇಂಗ್ಲೆಂಡ್; ಟೂರ್ನಿಯಿಂದ ಹೊರಬಿದ್ದ ಅಮೆರಿಕ
ಇಂಗ್ಲೆಂಡ್ ತಂಡ
Follow us
ಪೃಥ್ವಿಶಂಕರ
|

Updated on:Jun 23, 2024 | 10:47 PM

ಟಿ20 ವಿಶ್ವಕಪ್ (T20 World Cup 2024) ಸೂಪರ್ ಎಂಟು ಹಂತದ ಪಂದ್ಯದಲ್ಲಿ ಇಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಅಮೆರಿಕ (United States vs England) ವಿರುದ್ಧ 10 ವಿಕೆಟ್​ಗಳ ಸುಲಭ ಜಯ ಸಾಧಿಸಿದೆ. ಇದರೊಂದಿಗೆ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ವಾಸ್ತವವಾಗಿ ಕಳೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದ ಗೆಲುವು ಇಂಗ್ಲೆಂಡ್ ತಂಡಕ್ಕೆ ಅತ್ಯವಶ್ಯಕವಾಗಿತ್ತು. ಅಲ್ಲದೆ ನೆಟ್ ರನ್​ರೇಟ್ ಉತ್ತಮ ಪಡಿಸಿಕೊಳ್ಳಲು ಈ ಪಂದ್ಯದಲ್ಲಿ ಇಂಗ್ಲೆಂಡ್ ಭಾರಿ ಅಂತರದ ಜಯ ಸಾಧಿಸಬೇಕಾಗಿತ್ತು. ಅದರಂತೆ ಇಂಗ್ಲೆಂಡ್ ತಂಡ ಕೇವಲ 9.5 ಓವರ್​ನಲ್ಲೇ ಗೆಲುವಿನ ದಡ ಮುಟ್ಟಿತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆರಿಕ ತಂಡ 18.5 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 115 ರನ್​ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ 9.5 ಓವರ್​ನಲ್ಲೇ 10 ವಿಕೆಟ್​ಗಳ ಜಯ ಸಾಧಿಸಿತು.

ಇಂಗ್ಲೆಂಡ್​ಗೆ 10 ವಿಕೆಟ್ ಜಯ

ಅಮೆರಿಕ ನೀಡಿದ 115 ರನ್​ಗಳ ಅಲ್ಪ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ ಪರ ನಾಯಕ ಜೋಸ್ ಬಟ್ಲರ್ ಮತ್ತು ಫಿಲ್ ಸಾಲ್ಟ್ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟ ನಡೆಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದರು. ಇಂಗ್ಲೆಂಡ್ ಪರ ಬಟ್ಲರ್ 38 ಎಸೆತಗಳಲ್ಲಿ 6 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ ಅಜೇಯ 83 ರನ್ ಬಾರಿಸಿದರೆ, ಫಿಲ್ ಸಾಲ್ಟ್ 21 ಎಸೆತಗಳಲ್ಲಿ 2 ಬೌಂಡರಿಗಳ ನೆರವಿನಿಂದ 25 ರನ್ ಕಲೆಹಾಕಿದರು.

ಈ ಅಮೋಘ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡ ಮೂರು ಪಂದ್ಯಗಳಿಂದ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ನಾಲ್ಕು ಅಂಕಗಳೊಂದಿಗೆ ಸೂಪರ್ 8 ಸುತ್ತಿನ ತನ್ನ ಗುಂಪಿನಲ್ಲಿ ಅಗ್ರಸ್ಥಾನವನ್ನು ತಲುಪಿದೆ. ಪ್ರಸ್ತುತ ಇಂಗ್ಲೆಂಡ್‌ನ ನೆಟ್ ರನ್ ರೇಟ್ +1.992 ಆಗಿದ್ದು, ಇದು ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್‌ಗಿಂತ ಉತ್ತಮವಾಗಿದೆ.

ಅಮೆರಿಕದ ಪೆವಿಲಿಯನ್ ಪರೇಡ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕದ ಬ್ಯಾಟಿಂಗ್ ಅತ್ಯಂತ ಕಳಪೆಯಾಗಿತ್ತು. ಅಲ್ಲದೆ ನಿಗದಿತ ಅಂತರದಲ್ಲಿ ತಂಡ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಅಮೆರಿಕ ಪರ ನಿತೀಶ್ ಕುಮಾರ್ ಗರಿಷ್ಠ 30 ರನ್ ಬಾರಿಸಿದರೆ, ಕೋರಿ ಆಂಡರ್ಸನ್ 29 ರನ್​ಗಳ ಕಾಣಿಕೆ ನೀಡಿದರು. ಆ್ಯಂಡರ್ಸನ್ ಆರನೇ ವಿಕೆಟ್‌ಗೆ ಹರ್ಮೀತ್ ಸಿಂಗ್ ಅವರೊಂದಿಗೆ ಉತ್ತಮ ಜೊತೆಯಾಟವನ್ನು ಮಾಡಿದರು. ಆದರೆ ಹರ್ಮೀತ್ ಔಟಾದ ತಕ್ಷಣ, ಅಮೆರಿಕದ ಇನ್ನಿಂಗ್ಸ್ ತತ್ತರಿಸಿತು. ಹರ್ಮೀತ್ 21 ರನ್ ಕೊಡುಗೆ ನೀಡಿದರು.

ಜೋರ್ಡಾನ್​ಗೆ ಹ್ಯಾಟ್ರಿಕ್ ವಿಕೆಟ್

ಜೋರ್ಡಾನ್ 19ನೇ ಓವರ್‌ನಲ್ಲಿ ಕೋರಿ ಆಂಡರ್ಸನ್, ಅಲಿ ಖಾನ್, ನೋಸ್ತುಶ್ ಕೆಂಜಿಗೆ ಮತ್ತು ಸೌರಭ್ ನೇತ್ರವಾಲ್ಕರ್ ಅವರನ್ನು ಔಟ್ ಮಾಡಿ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಂಡರು. ಇದರಲ್ಲಿ ಅಲಿ, ಕೆಂಜಿಗೆ ಮತ್ತು ನೇತ್ರವಾಲ್ಕರ್ ಖಾತೆ ತೆರೆಯದೆ ಪೆವಿಲಿಯನ್​ಗೆ ಮರಳಿದರು. ಕೇವಲ ಐವರು ಅಮೇರಿಕನ್ ಬ್ಯಾಟ್ಸ್‌ಮನ್‌ಗಳು ಎರಡಂಕಿ ಗಡಿ ದಾಟುವಲ್ಲಿ ಯಶಸ್ವಿಯಾದರು. ಇಂಗ್ಲೆಂಡ್ ಪರ ಜೋರ್ಡಾನ್ ನಾಲ್ಕು ವಿಕೆಟ್ ಪಡೆದರೆ, ಸ್ಯಾಮ್ ಕರನ್ ಮತ್ತು ಆದಿಲ್ ರಶೀದ್ ತಲಾ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 pm, Sun, 23 June 24

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು