AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs WI: ಸಾಲ್ಟ್ ಸಿಡಿಲಬ್ಬರ: ಇಂಗ್ಲೆಂಡ್​ಗೆ ಭರ್ಜರಿ ಜಯ

T20 World Cup 2024: ಮೊದಲ ಸುತ್ತಿನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಇಂಗ್ಲೆಂಡ್ ತಂಡವು ನೆಟ್ ರನ್​ ರೇಟ್ ನೆರವಿನಿಂದ ದ್ವಿತೀಯ ಸುತ್ತು ಪ್ರವೇಶಿಸಿದೆ. ಆದರೀಗ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಅಮೋಘ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಸೂಪರ್-8 ಸುತ್ತಿನಲ್ಲಿ ಆಂಗ್ಲರ ಪಡೆ ಶುಭಾರಂಭ ಮಾಡಿದೆ.

ENG vs WI: ಸಾಲ್ಟ್ ಸಿಡಿಲಬ್ಬರ: ಇಂಗ್ಲೆಂಡ್​ಗೆ ಭರ್ಜರಿ ಜಯ
Phil Salt
ಝಾಹಿರ್ ಯೂಸುಫ್
|

Updated on:Jun 20, 2024 | 9:42 AM

Share

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಸೇಂಟ್ ಲೂಸಿಯಾದ ಡಾರೆನ್ ಸ್ಯಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡಕ್ಕೆ ಜಾನ್ಸನ್ ಚಾರ್ಲ್ಸ್ ಹಾಗೂ ಬ್ರಾಂಡನ್ ಕಿಂಗ್ ಉತ್ತಮ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 94 ರನ್ ಪೇರಿಸಿದ ಬಳಿಕ ಚಾಲ್ಸ್​ (38) ವಿಕೆಟ್ ಒಪ್ಪಿಸಿದರು. ಇನ್ನು 23 ರನ್​ಗಳಿಸಿದ್ದ ಬ್ರಾಂಡನ್ ಕಿಂಗ್ ಗಾಯಗೊಂಡು ಮೈದಾನ ತೊರೆದರು. ಆರಂಭಿಕರಿಬ್ಬರ ನಿರ್ಗಮನದ ನಂತರ ವಿಂಡೀಸ್ ರನ್ ಗತಿಯು ಕುಸಿದತ್ತ ಸಾಗಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ  ನಿಕೋಲಸ್ ಪೂರನ್ (36) ಹಾಗೂ ರೋವ್​ಮನ್ ಪೊವೆಲ್ (36) ಉಪಯುಕ್ತ ಕಾಣಿಕೆ ನೀಡಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು.

ಸಾಲ್ಟ್ ಸಿಡಿಲಬ್ಬರ:

181 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಪವರ್​ ಪ್ಲೇನಲ್ಲಿ 58 ರನ್ ಕಲೆಹಾಕಿದ ಈ ಜೋಡಿ ಬೃಹತ್ ಮೊತ್ತವನ್ನು ಚೇಸ್ ಮಾಡಲು ಅತ್ಯುತ್ತಮ ಅಡಿಪಾಯ ಹಾಕಿದರು.

ಈ ಹಂತದಲ್ಲಿ 25 ರನ್​ಗಳಿಸಿದ್ದ ಜೋಸ್ ಬಟ್ಲರ್ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಇದರ ಬೆನ್ನಲ್ಲೇ ಮೊಯೀನ್ ಅಲಿ (13) ಕೂಡ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಫಿಲ್ ಸಾಲ್ಟ್ ಅಬ್ಬರ ಮುಂದುವರೆದಿತ್ತು.  ವಿಂಡೀಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಫಿಲ್ ಸಾಲ್ಟ್ 47 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳನ್ನು ಬಾರಿಸಿದರು. ಅಲ್ಲದೆ ಅಜೇಯ 87 ರನ್ ಸಿಡಿಸಿದರು.

ಮತ್ತೊಂದೆಡೆ ಜಾನಿ ಬೈರ್​ಸ್ಟೋವ್ 26 ಎಸೆತಗಳಲ್ಲಿ 48 ರನ್​ಗಳನ್ನು ಕಲೆಹಾಕಿದರು. ಈ ಮೂಲಕ ಇಂಗ್ಲೆಂಡ್ ತಂಡವು 17.3 ಓವರ್​ಗಳಲ್ಲಿ ಗುರಿ ತಲುಪಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ನೆಟ್​ ರನ್ ರೇಟ್​ ನೆರವಿನಿಂದ ಎಂಟ್ರಿ:

ಮೊದಲ ಸುತ್ತಿನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಇಂಗ್ಲೆಂಡ್ ತಂಡವು ನೆಟ್ ರನ್​ ರೇಟ್ ನೆರವಿನಿಂದ ದ್ವಿತೀಯ ಸುತ್ತು ಪ್ರವೇಶಿಸಿದೆ. ಆದರೀಗ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಅಮೋಘ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ದ್ವಿತೀಯ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿದ್ದಾರೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ಪಡೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್ , ಜೋಸ್ ಬಟ್ಲರ್ (ನಾಯಕ) , ಜಾನಿ ಬೈರ್​ಸ್ಟೋವ್ , ಹ್ಯಾರಿ ಬ್ರೂಕ್ , ಮೊಯೀನ್ ಅಲಿ , ಲಿಯಾಮ್ ಲಿವಿಂಗ್​ಸ್ಟೋನ್ , ಸ್ಯಾಮ್ ಕರನ್ , ಜೋಫ್ರಾ ಆರ್ಚರ್ , ಆದಿಲ್ ರಶೀದ್ , ಮಾರ್ಕ್ ವುಡ್ , ರೀಸ್ ಟೋಪ್ಲಿ.

ಇದನ್ನೂ ಓದಿ: Ramandeep Singh: 2ನೇ ಬಾರಿ ಒಂದೇ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿದ ರಮಣ್​ದೀಪ್ ಸಿಂಗ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್ , ಜಾನ್ಸನ್ ಚಾರ್ಲ್ಸ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ರೋಸ್ಟನ್ ಚೇಸ್ , ರೋವ್​ಮನ್ ಪೊವೆಲ್ (ನಾಯಕ) , ಶೆರ್ಫೇನ್ ರುದರ್ಫೋರ್ಡ್ , ಆಂಡ್ರೆ ರಸೆಲ್ , ರೊಮಾರಿಯೋ ಶೆಫರ್ಡ್ , ಅಕೇಲ್ ಹೊಸೈನ್ , ಅಲ್ಝಾರಿ ಜೋಸೆಫ್ , ಗುಡಾಕೇಶ್ ಮೋಟಿ.

Published On - 9:30 am, Thu, 20 June 24

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು