IND vs ENG: ಇದು ಅನ್ಯಾಯ… ಭಾರತ ತಂಡಕ್ಕೆ ವಿಶ್ವಕಪ್ ಗೆಲ್ಲಲು ಅನುಕೂಲ ಮಾಡಿದ್ದಾರೆ: ಮೈಕಲ್ ವಾನ್

T20 World Cup 2024: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ 9 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ಸೌತ್ ಆಫ್ರಿಕಾ ತಂಡ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ.

IND vs ENG: ಇದು ಅನ್ಯಾಯ... ಭಾರತ ತಂಡಕ್ಕೆ ವಿಶ್ವಕಪ್ ಗೆಲ್ಲಲು ಅನುಕೂಲ ಮಾಡಿದ್ದಾರೆ: ಮೈಕಲ್ ವಾನ್
Team India
Follow us
ಝಾಹಿರ್ ಯೂಸುಫ್
|

Updated on:Jun 27, 2024 | 10:37 AM

T20 World Cup 2024: ಟಿ20 ವಿಶ್ವಕಪ್​ನ ಸೆಮಿಫೈನಲ್ ವೇಳಾಪಟ್ಟಿಯನ್ನು ಭಾರತ ತಂಡ ವಿಶ್ವಕಪ್ ಗೆಲ್ಲಲು ಅನುಕೂಲವಾಗುವಂತೆ ರೂಪಿಸಲಾಗಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ ಗಂಭೀರ ಆರೋಪ ಮಾಡಿದ್ದಾರೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಸೋಲಲು ವೇಳಾಪಟ್ಟಿಯೇ ಕಾರಣ ಎಂದು ವಾನ್ ಅಭಿಪ್ರಾಯಪಟ್ಟಿದ್ದಾರೆ.

ಬಾಂಗ್ಲಾದೇಶ್ ವಿರುದ್ಧ ಸೂಪರ್-8 ಪಂದ್ಯದಲ್ಲಿ ಗೆದ್ದ ಅಫ್ಘಾನಿಸ್ತಾನ್ ತಂಡಕ್ಕೆ ಕೇವಲ ಒಂದು ದಿನದ ಸಮಯವಕಾಶ ನೀಡಲಾಗಿದೆ. ಜೂನ್ 25 ರಂದು ಪಂದ್ಯ ಮುಗಿಸಿ ಜೂನ್ 26 ರಂದು ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಆಡಲು ಟ್ರಿನಿಡಾಡ್​ಗೆ ಬಂದಿಳಿದಿದೆ. ಇದರಿಂದ ಅಫ್ಘಾನ್ ತಂಡಕ್ಕೆ ಅಭ್ಯಾಸ ಮಾಡಲು ಸಮಯ ಸಿಕ್ಕಿಲ್ಲ.

ನನ್ನ ಪ್ರಕಾರ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಮೊದಲು ನಡೆಯಬೇಕಿತ್ತು. ಆದರೆ ಭಾರತ ತಂಡಕ್ಕೆ ಅನುಕೂಲವಾಗುವಂತೆ 2ನೇ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಇರಿಸಲಾಗಿದೆ. ಇದು ಪಕ್ಷಪಾತ ಧೋರಣೆ, ಇದರಿಂದ ಇತರೆ ತಂಡಗಳಿಗೆ ಅನ್ಯಾಯವಾಗಿದೆ ಎಂದು ಮೈಕಲ್ ವಾನ್ ಹೇಳಿದ್ದಾರೆ.

ಇಲ್ಲಿ ಭಾರತ ತಂಡಕ್ಕೆ ಅನುಕೂಲವಾಗುವಂತೆ ಸೆಮಿಫೈನಲ್ ವೇಳಾಪಟ್ಟಿಯನ್ನು ಮೊದಲೇ ನಿರ್ಧರಿಸಲಾಗಿದ್ದು, ಇದರಿಂದ ಉಳಿದ ತಂಡಗಳಿಗೆ ಅನ್ಯಾಯವಾಗಿರುವುದು ಸ್ಪಷ್ಟ. ಅದರಲ್ಲೂ ಇದೇ ಮೊದಲ ಬಾರಿಗೆ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಅಫ್ಘಾನಿಸ್ತಾನ್ ತಂಡವನ್ನು ಸೂಪರ್-8 ಪಂದ್ಯದ ಮುಕ್ತಾಯದ ಬೆನ್ನಲ್ಲೇ ಸೆಮಿಫೈನಲ್ ಆಡಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳು ಅಫ್ಘಾನಿಸ್ತಾನ್ ತಂಡದ ಕೊನೆಯ ಪಂದ್ಯಕ್ಕೂ ಮುನ್ನವೇ ಸೂಪರ್-8 ಪಂದ್ಯಗಳನ್ನು ಮುಗಿಸಿತ್ತು. ಹೀಗಾಗಿ ಮೊದಲ ಸೆಮಿಫೈನಲ್ ಪಂದ್ಯವು ಇಂಗ್ಲೆಂಡ್ ಮತ್ತು ಇಂಡಿಯಾ ನಡುವೆ ನಡೆಯಬೇಕಿತ್ತು. ಆದರೆ ಭಾರತದ ಪರ ಪಕ್ಷಪಾತ ಮಾಡಿರುವ ಕಾರಣ ಅಫ್ಘಾನಿಸ್ತಾನ್ ತಂಡಕ್ಕೆ ಅನ್ಯಾಯವಾಗಿದೆ ಎಂದು ಮೈಕಲ್ ವಾನ್ ಹೇಳಿದ್ದಾರೆ.

ನಿರ್ಣಾಯಕ ಪಂದ್ಯದಲ್ಲಿ ಸೋತ:

ಸೌತ್ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು ಅತ್ಯಂತ ಹೀನಾಯ ಪ್ರದರ್ಶನ ನೀಡಿತ್ತು. ಬೃಹತ್ ಮೊತ್ತದ ನಿರೀಕ್ಷೆಯೊಂದಿಗೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡ 11.5 ಓವರ್​ಗಳಲ್ಲಿ ಕೇವಲ 56 ರನ್​ಗಳಿಸಿ ಆಲೌಟ್ ಆಯಿತು.

ಇದನ್ನೂ ಓದಿ: South Africa: ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸೌತ್ ಆಫ್ರಿಕಾ

57 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 1 ವಿಕೆಟ್ ಕಳೆದುಕೊಂಡು 8.5 ಓವರ್​ಗಳಲ್ಲಿ 60 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ ಫೈನಲ್​ಗೆ ಪ್ರವೇಶಿಸಿದೆ.

Published On - 10:34 am, Thu, 27 June 24

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ