AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ನ್ಯೂಯಾರ್ಕ್ ಪಿಚ್ ಬದಲಾವಣೆಗೆ ಮುಂದಾದ ಐಸಿಸಿ..!

T20 World Cup 2024: ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಐಸಿಸಿ ಹೇಳಿಕೆ ನೀಡಿದ್ದು, ಈ ಕ್ರೀಡಾಂಗಣದ ಪಿಚ್ ನಾವೆಲ್ಲರೂ ಬಯಸಿದ ರೀತಿಯಲ್ಲಿ ವರ್ತಿಸುತ್ತಿಲ್ಲ. ಹೀಗಾಗಿ ಉಳಿದ ಪಂದ್ಯಗಳಿಗೆ ಉತ್ತಮ ಪಿಚ್‌ಗಳನ್ನು ಒದಗಿಸಲು ವಿಶ್ವ ದರ್ಜೆಯ ಮೈದಾನ ಸಿಬ್ಬಂದಿಗಳ ತಂಡ ಶ್ರಮಿಸುತ್ತಿದೆ ಎಂದಿದೆ. ಇದರರ್ಥ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಪಿಚ್​ನಲ್ಲಿ ಬದಲಾವಣೆಯಾಗಿರುವುದನ್ನು ನಾವು ಕಾಣಬಹುದಾಗಿದೆ.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ನ್ಯೂಯಾರ್ಕ್ ಪಿಚ್ ಬದಲಾವಣೆಗೆ ಮುಂದಾದ ಐಸಿಸಿ..!
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jun 07, 2024 | 10:53 PM

Share

ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಬರುವ ಭಾನುವಾರ ಅಂದರೆ ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಈ ವಿಶ್ವಕಪ್​ನ ಹೈವೋಲ್ಟೇಜ್ ಕದನ ನಡೆಯಲಿದೆ. ಈ ಪಂದ್ಯಕ್ಕೆ ನ್ಯೂಯಾರ್ಕ್ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (Nassau County Cricket Stadium) ಆತಿಥ್ಯವಹಿಸುತ್ತಿದೆ. ಉಭಯ ತಂಡಗಳ ನಡುವೆ ನಡೆಯುವ ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಒಂದೆಡೆ, ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್‌ನಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮತ್ತೊಂದೆಡೆ, ಪಾಕಿಸ್ತಾನ ತಂಡವು ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ವಿರುದ್ಧ ಹೀನಾಯ ಸೋಲು ಕಂಡಿದೆ. ಹೀಗಿರುವಾಗ ಜೂನ್ 9ರಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಯಾವ ಮಟ್ಟದ ಕ್ರಿಕೆಟ್ ಪಂದ್ಯ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ನ್ಯೂಯಾರ್ಕ್ ಪಿಚ್ ಬಗ್ಗೆ ಪ್ರಶ್ನೆ

ಉಭಯ ತಂಡಗಳ ನಡುವೆ ನಡೆಯಲಿರುವ ಈ ಅಮೋಘ ಪಂದ್ಯದ ಮೇಲೆ ಇಡೀ ವಿಶ್ವವೇ ಕಣ್ಣಿಟ್ಟಿದೆ. ಅದೇ ಸಮಯದಲ್ಲಿ, ಐಸಿಸಿ ಕೂಡ ಅಭಿಮಾನಿಗಳು ರೋಚಕ ಪಂದ್ಯವನ್ನು ನೋಡಬೇಕೆಂದು ಬಯಸುತ್ತದೆ. ಹೀಗಿರುವಾಗ ಈ ಪಂದ್ಯಕ್ಕೂ ಮುನ್ನ ಐಸಿಸಿ ಪಿಚ್ ಬಗ್ಗೆ ದೊಡ್ಡ ಹೇಳಿಕೆ ನೀಡಿದೆ. ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್‌ಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ಒಪ್ಪಿಕೊಂಡಿರುವ ಐಸಿಸಿ, ಮುಂಬರುವ ಪಂದ್ಯಗಳಿಗೆ ಈ ಪಿಚ್​ಗಳನ್ನು ಸುಧಾರಿಸುವ ಭರವಸೆ ನೀಡಿದೆ.

T20 World Cup 2024: ಬಾಬರ್ ಆಝಂ ಸರ್ವಾಧಿಕಾರಿ ಧೋರಣೆಯಿಂದ ಪಾಕ್ ತಂಡದಲ್ಲಿ ಒಡಕು..!

ನ್ಯೂಯಾರ್ಕ್‌ನ ಈ ಮೈದಾನದಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳು 100ಕ್ಕಿಂತ ಕಡಿಮೆ ರನ್ ಗಳಿಸಿದ್ದು, ವಿಕೆಟ್‌ನಿಂದ ಹೆಚ್ಚುವರಿ ಬೌನ್ಸ್ ಮತ್ತು ಸ್ವಿಂಗ್ ಎರಡನೇ ಇನ್ನಿಂಗ್ಸ್‌ನಲ್ಲಿ ಆಡುತ್ತಿರುವ ತಂಡಗಳನ್ನು ತೊಂದರೆಗೀಡು ಮಾಡಿದೆ. ಈ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ 77 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 16ನೇ ಓವರ್‌ನಲ್ಲಿ ಗೆಲುವಿನ ನಗೆಬೀರಿತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ತಂಡವನ್ನು 96 ರನ್‌ಗಳಿಗೆ ಆಲೌಟ್ ಮಾಡಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಈ ಪಿಚ್​ನಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಯಿತು.

ಪಿಚ್ ಸುಧಾರಿಸುವ ಹೇಳಿಕೆ ನೀಡಿದ ಐಸಿಸಿ

ಜೂನ್ 9ರಂದು ಇದೇ ಮೈದಾನದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಬೇಕಾಗಿದ್ದು, ಪಂದ್ಯದ ಫಲಿತಾಂಶದಲ್ಲಿ ಪಿಚ್ ದೊಡ್ಡ ಪಾತ್ರ ವಹಿಸುವ ಆತಂಕ ಎದುರಾಗಿದೆ. ಈ ದೊಡ್ಡ ಪಂದ್ಯಕ್ಕೂ ಮುನ್ನ ಐಸಿಸಿ ಹೇಳಿಕೆ ನೀಡಿದ್ದು, ಈ ಕ್ರೀಡಾಂಗಣದ ಪಿಚ್ ನಾವೆಲ್ಲರೂ ಬಯಸಿದ ರೀತಿಯಲ್ಲಿ ವರ್ತಿಸುತ್ತಿಲ್ಲ. ಹೀಗಾಗಿ ಉಳಿದ ಪಂದ್ಯಗಳಿಗೆ ಉತ್ತಮ ಪಿಚ್‌ಗಳನ್ನು ಒದಗಿಸಲು ವಿಶ್ವ ದರ್ಜೆಯ ಮೈದಾನ ಸಿಬ್ಬಂದಿಗಳ ತಂಡ ಶ್ರಮಿಸುತ್ತಿದೆ ಎಂದಿದೆ. ಇದರರ್ಥ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಪಿಚ್​ನಲ್ಲಿ ಬದಲಾವಣೆಯಾಗಿರುವುದನ್ನು ನಾವು ಕಾಣಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು